ಮಾಜಿ ಸಿಎಂ ವೀರೇಂದ್ರ ಪಾಟೀಲರ ಪತ್ನಿ ಶಾರದಾ ಪಾಟೀಲ ನಿಧನ

Date:

Advertisements

ಮಾಜಿ ಮುಖ್ಯಮಂತ್ರಿ ದಿ. ವೀರೇಂದ್ರ ಪಾಟೀಲರ ಪತ್ನಿ ಶಾರದಾ ಪಾಟೀಲ ಅವರು ಬೆಂಗಳೂರಿನ ಸದಾಶಿವನಗರದ ಸ್ವಗೃಹದಲ್ಲಿ ಮಂಗಳವಾರ ನಿಧನರಾಗಿದ್ದಾರೆ.

ಅವರಿಗೆ 93 ವರ್ಷ ವಯಸ್ಸಾಗಿತ್ತು. ಪುತ್ರ, ಮಾಜಿ ಶಾಸಕ ಕೈಲಾಸನಾಥ್ ಪಾಟೀಲ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ವೀರೇಂದ್ರ ಪಾಟೀಲ ಮೂಲತಃ ಕಲಬುರಗಿ ಜಿಲ್ಲೆಯ ಚಿಂಚೋಳಿಯವರಾಗಿದ್ದು, ಶಾರದಾ ಪಾಟೀಲರ ಪಾರ್ಥೀವ ಶರೀರವನ್ನು ಚಿಂಚೋಳಿಗೆ ಕೊಂಡೊಯ್ಯಲಾಗುತ್ತಿದೆ.

ಚಿಂಚೋಳಿಯಲ್ಲಿರುವ ವೀರೇಂದ್ರ ಪಾಟೀಲರ ಸಮಾಧಿ ಪಕ್ಕದಲ್ಲೇ ಶಾರದಾ ಪಾಟೀಲರ ಅಂತ್ಯಕ್ರಿಯೆ ಬುಧವಾರ ಮಧ್ಯಾಹ್ನ ನಡೆಯಲಿದೆ ಎಂದು ಕೈಲಾಸನಾಥ ಪಾಟೀಲ ತಿಳಿಸಿದ್ದಾರೆ.

Advertisements

ಶಾರದಾ ಪಾಟೀಲ್ ಅವರ ಸಾವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದು, “ಮಾಜಿ ಮುಖ್ಯಮಂತ್ರಿ ವೀರೇಂದ್ರ ಪಾಟೀಲ್ ಅವರ ಪತ್ನಿ ಶಾರದಾ ಪಾಟೀಲ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಶಾರದಾ ಪಾಟೀಲ್ ಅವರ ಅಗಲಿಕೆಯಿಂದ ನೊಂದಿರುವ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಸಿಗಲಿ” ಎಂದು ಟ್ವೀಟ್ ಮಾಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

Download Eedina App Android / iOS

X