ನಮ್ಮ ಬಳಿ ನೀರಿಲ್ಲ, ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ: ಡಿ ಕೆ ಶಿವಕುಮಾರ್

Date:

Advertisements
  • 5 ಸಾವಿರ ಕ್ಯೂಸೆಕ್ ನೀರು ಬಿಡಲೂ ಆಗದ ಸ್ಥಿತಿಯಲ್ಲಿ ನಾವಿದ್ದೇವೆ
  • ಬಿಳಿಗುಂಡ್ಲು ಜಲಾಶಯದಲ್ಲಿ ಪ್ರತಿಕ್ಷಣವೂ ನೀರಿನ ಪ್ರಮಾಣ ದಾಖಲು

ಮೊದಲೇ ನಮ್ಮ ಬಳಿ ನೀರಿಲ್ಲ. ಇನ್ನು ತಮಿಳುನಾಡು ಕೇಳಿದಷ್ಟು ನೀರು ಬಿಡಲು ಹೇಗೆ ಆಗುತ್ತದೆ? ಯಾವುದೇ ಕಾರಣಕ್ಕೂ ನಾವು ನೀರು ಬಿಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದರು.

ಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ ಮಂಗಳವಾರ ಕಾವೇರಿ ವಿಚಾರವಾಗಿ ಮಾತನಾಡಿದ ಅವರು, “ಕಾವೇರಿ ನೀರು ನಿರ್ವಹಣಾ ಸಮಿತಿಯ ಸಭೆ ನಡೆಯುತ್ತಿದೆ. ತಮಿಳುನಾಡಿನವರು 12,500 ಕ್ಯೂಸೆಕ್ ನೀರಿಗೆ ಬೇಡಿಕೆ ಇಟ್ಟಿದ್ದಾರೆ. ಪ್ರಸ್ತುತ 5 ಸಾವಿರ ಕ್ಯೂಸೆಕ್ ನೀರು ಬಿಡಲೂ ಆಗದ ಸ್ಥಿತಿಯಲ್ಲಿ ನಾವಿದ್ದೇವೆ” ಎಂದರು.

“ಪ್ರತಿದಿನ ಎಷ್ಟು ನೀರು ಬರುತ್ತಿದೆ ಮತ್ತು ಹೊರ ಹೋಗುತ್ತಿದೆ ಎನ್ನುವ ಮಾಹಿತಿ ಮುಚ್ಚಿಡಲು ಸಾಧ್ಯವಿಲ್ಲ. ಬಿಳಿಗುಂಡ್ಲು ಜಲಾಶಯದಲ್ಲಿ ಪ್ರತಿಕ್ಷಣವೂ ಅದು ದಾಖಲಾಗುತ್ತದೆ.‌ ಇದನ್ನು ಎರಡೂ ರಾಜ್ಯಗಳ ಅಧಿಕಾರಿಗಳು ಗಮನಿಸುತ್ತಿರುತ್ತಾರೆ. ಅದರ ಮೇಲ್ವಿಚಾರಣೆ ಕಾವೇರಿ ನೀರು ನಿರ್ವಹಣಾ ಸಮಿತಿಯ ಬಳಿ ಇದೆ. ಆದಕಾರಣ ನೀರಿನ ಹರಿವಿನ ವಿಚಾರದಲ್ಲಿ ನಾನಾಗಲಿ, ಅವರಾಗಲಿ ಸುಳ್ಳು ಹೇಳಲು ಸಾಧ್ಯವಿಲ್ಲ” ಎಂದು ಹೇಳಿದರು.

Advertisements

“ನಾವು ಸುಳ್ಳು ಹೇಳಿದರೆ ನಮ್ಮ ಮುಂದೆ ವಾಸ್ತವಾಂಶ ಇಡುತ್ತಾರೆ. ತಾಂತ್ರಿಕ ವಿಚಾರಗಳನ್ನು ಅದಕ್ಕೆ ಸಂಬಂಧಿಸಿದ ಅಧಿಕಾರಿಗಳು ನೀಡುತ್ತಾರೆ. ನಾವು ಹೇಳಿದರೆ ಕೇಳುವುದಿಲ್ಲ. ಬೆಂಗಳೂರು ಸೇರಿದಂತೆ ಸುತ್ತಮುತ್ತ ಮಳೆ ಬಿದ್ದ ಪರಿಣಾಮ ಸ್ವಲ್ಪ ನೀರಿನ ಮಟ್ಟ ಹೆಚ್ಚಾಗಿದೆ” ಎಂದು ತಿಳಿಸಿದರು.

ರಾಜಕಾರಣ ಬಿಟ್ಟು ರಾಜ್ಯದ ಹಿತ ಕಾಪಾಡಲಿ

ರಾಜ್ಯದಲ್ಲಿ ಕನ್ನಡಿಗರ ಸರ್ಕಾರವಿಲ್ಲ, ಸ್ಟಾಲಿನ್ ಸರ್ಕಾರವಿದೆ ಎಂಬ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿ, “ಮನಮೋಹನ್ ಸಿಂಗ್ ಅವರು ಪ್ರಧಾನಿಗಳಾಗಿದ್ದಾಗ ಕುಮಾರಸ್ವಾಮಿ ಅವರ ತಂದೆ ದೇವೇಗೌಡರು ಏನು ಹೇಳಿದ್ದರು? ಈಗ ಏನು ಪತ್ರ ಬರೆದಿದ್ದಾರೆ ಎಂದು ಗೊತ್ತಿದೆಯೇ ಅವರಿಗೆ? ನೀರಿನ ವಿಚಾರದಲ್ಲಿ ರಾಜಕಾರಣ ಬಿಟ್ಟು ರಾಜ್ಯದ ಹಿತ ಕಾಪಾಡಲಿ” ಎಂದು ತಿರುಗೇಟು ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X