ಹಾಸನ ಜಿಲ್ಲೆ ಅರಸೀಕೆರೆಯಲ್ಲಿ ಕಾವೇರಿ ಉಳಿಸಿ ಮತ್ತು ಕೊಬ್ಬರಿಗೆ ಬೆಂಬಲ ಬೆಲೆ ನೀಡಬೇಕು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಬೆಂಗಳೂರಿಗೆ ಪಾದಯಾತ್ರೆ ಕೈಗೊಂಡಿವೆ.
ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮತ್ತು ತಿಪಟೂರು ಜೆಡಿಎಸ್ ಮುಖಂಡ ಶಾಂತಕುಮಾರ್ ನೇತೃತ್ವದಲ್ಲಿ ಪ್ರತಿಭಟನಾಕಾರರು ಪಾದಯಾತ್ರೆ ಆರಂಭವಾಗಿದ್ದು, 500ಕ್ಕೂ ಹೆಚ್ಚು ರೈತರು ಮತ್ತು ರೈತ ಮಹಿಳೆಯರು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದಾರೆ. ಪಟ್ಟಣದ ಕೃಷಿ ಉತ್ಪನ್ನ ಎಪಿಎಂಸಿ ಆವರಣದಿಂದ ಪ್ರಾರಂಭವಾದ ಪಾದಯಾತ್ರೆ ಬಿ. ಎಚ್. ರಸ್ತೆ , ಪಿಪಿ ವೃತ್ತದ ಮೂಲಕ ತೆರಳಿದ ಬೆಂಗಳೂರಿನತ್ತ ಸಾಗುತ್ತಿದೆ. ಅಕ್ಟೋಬರ್ ೦4ರಂದು ಈ ರೈತರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ.
ಪಿಪಿ ವೃತ್ತದಲ್ಲಿ ರಸ್ತೆಯಲ್ಲಿ ಕೊಬ್ಬರಿ ಇಟ್ಟು, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಪಾದಯಾತ್ರೆ ಮೆರವಣಿಗೆ ನಡೆಸಿದರು.