ಹಿರಿಯ ನಾಗರಿಕರು ನಮ್ಮ ಆಸ್ತಿ. ಅವರನ್ನು ಗೌರವದಿಂದ ನೋಡಿಕೊಳ್ಳಬೇಕು. ಎಲ್ಲ ಹಿರಿಯ ನಾಗರಿಕರು ವಿವಿಧ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಮುಖ್ಯ ವಾಹಿನಿಗೆ ತರಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್ ಹೇಳಿದರು.
ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ಜಿಲ್ಲಾ ಪೋಲಿಸ್ ಕವಾಯತ ಮೈದಾನದಲ್ಲಿ ಹಮ್ಮಿಕೊಂಡಿದ್ದ ಹಿರಿಯ ನಾಗರೀಕರ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ನಾಹರಾಜ ಮಠ ಮಾತನಾಡಿ, “2023ರ ಘೋಷವಾಕ್ಯ ಬದಲಾಗುತ್ತಿರುವ ಜಗತ್ತಿನಲ್ಲಿ ಹಿರಿಯ ನಾಗರಿಕರ ಸ್ಥಿತಿಸ್ಥಾಪಕತ್ವ ಎಂದು ವಿಶ್ವ ಸಂಸ್ಥೆಯು ಘೋಷಿಸಿದೆ. ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ವರ್ಧೆಗಳಲ್ಲಿ ವಿಜೇತರಾದ ಹಿರಿಯ ನಾಗರಿಕರಿಗೆ ಅಕ್ಟೋಬರ್ 3 ರಂದು ನಡೆಯುವ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಬಹುಮಾನ ಹಾಗೂ ಪ್ರಶಸ್ತಿ ನೀಡಲಾಗುವುದು” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಮಧ್ಯಪ್ರವೇಶಿಸಲಿ- ಕಾವೇರಿ ಬಿಕ್ಕಟ್ಟು ಬಗೆಹರಿಸಲಿ
ಕಾರ್ಯಕ್ರಮದ ಜಿಲ್ಲಾ ಪಂಚಾಯತ್ ಲೆಕ್ಕ ಸಹಾಯಕ ಪ್ರವೀಣ ಸ್ವಾಮಿ, ಖಾದಿ ಗ್ರಾಮೀಣ ಮತ್ತು ಕೈಗಾರಿಕೆ ಇಲಾಖೆ ಉಪನಿರ್ದೇಶಕ ರಾಜಕುಮಾರ ಪಾಟೀಲ್ ಸೇರಿದಂತೆ ವಿವಿಧ ವೃದ್ಧಾಶ್ರಮಗಳ ಮುಖ್ಯಸ್ಥರು, ಹಾಗೂ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ ಬೀದರ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಛೇರಿಯ ಸಿಬ್ಬಂದಿಗಳಾದ ರಾಘವೇಂದ್ರ ನಾಯ್ಕ, ಯೋಜನಾ ಸಹಾಯಕರು ಲೋಕೆಶ ಪಾಟಿಲ್, ಡ್ಯಾನಿಯಲ್ ಗುರುದಾಸ, ಲೋಕೆಶ ಹೊಸಳ್ಳಿ, ಸುಭಾಷ ಕಡ್ಡೆ ಹಾಗೂ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದ ಸಿಬ್ಬಂದಿಗಳಾದ ಬಾಲಾಜಿ, ರೇಣುಕಾ, ರೈಚಲ್ ರಾಣಿ, ವಿಜಯಲಕ್ಷ್ಮಿ, ನಿಲಮ್ಮ, ಸುಭಾಷ ರೆಡ್ಡಿ, ಸಂತೋಷ ಸುರ್ವಣಕರ್ ಉಪಸ್ಥಿತರಿದ್ದರು.