ಆನಂದೂರು ಕೃಷಿ ಪತ್ತಿನ ಸಹಕಾರ ಸಂಘವನ್ನು ಪ್ರಾರಂಭಿಸಿದಂತೆ ರಾಜಕೀಯ ಮುಖಂಡರು ಅಧಿಕಾರಿಗಳ ಮೇಲೆ ಒತ್ತಡ ಏರಿ ತಡೆದಿದ್ದಾರೆ ಎಂದು ಆರೋಪಿಸಿ ಮೈಸೂರು ತಾಲೂಕು ರೈತ ಸಂಘದ ಕಾರ್ಯಕರ್ತರು ನಾಡಕಚೇರಿ ಆವರಣದಲ್ಲಿರುವ ಸಹಕಾರ ಸಂಘಗಳ ಉಪನಿಬಂಧಕರ ಕಚೇರಿಯ ಮುಂಭಾಗ ಧರಣಿ ನಡೆಸಿದರು.
“ಆನಂದೂರು ಕೃಷಿ ಪತ್ತಿನ ಸಹಕಾರ ಸಂಘವು ಕಳೆದ 30 ವರ್ಷಗಳಿಂದ ಮುಚ್ಚಿ ಹೋಗಿದ್ದು, ಅದನ್ನು ಪುನಃಚೇತನಗೊಳಿಸಿ ಮರು ಆರಂಭಿಸುವಂತೆ ಹೋರಾಟ ನಡೆಸುತ್ತಿದ್ದೇವೆ. ಆದರೆ ರಾಜಕೀಯ ಮುಖಂಡರು ಅಧಿಕಾರಿಗಳ ಮೇಲೆ ಒತ್ತಡ ಏರಿ ಸಹಕಾರ ಸಂಘವನ್ನು ಪ್ರಾರಂಭಿಸಿದಂತೆ ತಡೆದಿರುವುದು ಖಂಡನೀಯ” ಎಂದು ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು.
ಈ ಸುದ್ದಿ ಓದಿದ್ದೀರಾ? ಗದಗ | ಚಿಕ್ಕನರಗುಂದದಲ್ಲಿ ಕಾಲುಬಾಯಿ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ
ಅಧಿಕಾರಿ ಡಿ ಆರ್ ಅವರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ʼಶುಕ್ರವಾರ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮದ ಸಹಕಾರ ಸಂಘವನ್ನು ಪ್ರಾರಂಭಿಸುತ್ತೇವೆʼ ಎಂದು ಸಭೆಯಲ್ಲಿ ಕೇಳಿಕೊಂಡಿದ್ದಾರೆ. ಈ ವೇಳೆ ಹೊಸಕೋಟೆ ಬಸವರಾಜು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದು, ಹಲವು ಘೋಷಗಳನ್ನು ಕೂಗಿ ಬಳಿಕ ಪ್ರತಿಭಟನೆ ಕೈ ಬಿಟ್ಟಿದ್ದಾರೆ.
ಈ ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ಹೊಸಕೋಟೆ ಬಸವರಾಜು, ನೇತ್ರಾವತಿ, ಪಿ ಮರಂಕಯ್ಯ, ಆನಂದೂರು ಪ್ರಭಾಕರ್, ಸಿರಮಳ್ಳಿ ಸಿದ್ದಪ್ಪ ಕರೋಟಿ ಕುಮಾರಸ್ವಾಮಿ ಆನಂದೂರು ಗ್ರಾಮ ಪಂಚಾಯಿತಿಗೆ ಸೇರಿದ ನೂರಾರು ಗ್ರಾಮಸ್ಥರು ಈ ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು