ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ಬೆಳ್ಳಂಬೆಳಗ್ಗೆ 10ಕ್ಕೂ ಹೆಚ್ಚು ಕಡೆ ಐಟಿ ದಾಳಿಯಾಗಿದ್ದು, ಅಧಿಕಾರಿಗಳು ಹಲವೆಡೆ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಬುಧವಾರ ಬೆಳಗ್ಗೆ 6.30ರ ಸುಮಾರಿಗೆ ಬೆಂಗಳೂರಿನ ಐಟಿ, ಬಿಟಿ ಸೇರಿದಂತೆ ಖಾಸಗಿ ಕಂಪನಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕೆಲವು ಖಾಸಗಿ ಕಂಪನಿಗಳು ಆದಾಯ ತೆರಿಗೆ ಪಾವತಿಯಲ್ಲಿ ವಂಚನೆ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ 10ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ನಗರದ ಹುಳಿಮಾವು, ಬಾಗ್ಮನೆ ಟೆಕ್ ಪಾರ್ಕ್ ಸೇರಿದಂತೆ ಐದು ಕಡೆ ದಾಳಿ ಮಾಡಿದೆ.
ತೆರಿಗೆ ವಂಚನೆ ಆರೋಪದ ಮೇಲೆ ಹುಳಿಮಾವು ಸಮೀಪದ ಆಪಸ್ ಅಪಾರ್ಟ್ಮೆಂಟ್ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು, ಕಡತಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.