ಜನರ ಬೆಂಬಲದಿಂದ ಬಂದ್ ಸಂಪೂರ್ಣ ಯಶಸ್ವಿ: ಮುಖ್ಯಮಂತ್ರಿ ಚಂದ್ರು

Date:

Advertisements

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಕರೆ ನೀಡಿದ್ದ ಬೆಂಗಳೂರು ಬಂದ್ ಸಂಪೂರ್ಣವಾಗಿ ಯಶಸ್ವಿಯಾಗಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರು ತಿಳಿಸಿದರು.

ನಗರದ ಪ್ರೆಸ್‌ ಕ್ಲಬ್‌ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಯಾವುದೇ ಹಾನಿಯನ್ನು ಮಾಡದೇ ಶಾಂತಿಯುತವಾಗಿ ಬಂದ್ ಆಗಿದೆ. ಜನ ಸಂಪೂರ್ಣ ಸಹಕಾರ, ಬೆಂಬಲ ಕೊಟ್ಟರು. ಬಂದ್ ಹಿಂದಿನ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸ್ವತಃ ನನಗೆ ಮತ್ತು ಕುರುಬೂರು ಶಾಂತಕುಮಾರ್ ಅವರಿಗೆ ಕರೆ ಮಾಡಿ, ಮೈಸೂರಿನಲ್ಲಿ ತುರ್ತು ಕಾರ್ಯಕ್ರಮ ಇರುವುದರಿಂದ ಜವಾಬ್ದಾರಿಯುತ ವ್ಯಕ್ತಿಯನ್ನು ಮನವಿ ಸ್ವೀಕರಿಸಲು ಕಳುಹಿಸುತ್ತೇನೆ. ಬಂದ ತಕ್ಷಣ ನಿಮ್ಮನ್ನು ಭೇಟಿಯಾಗುತ್ತೇನೆ ಎಂದಿದ್ದರು” ಎಂದು ಅವರು ಹೇಳಿದರು.

ತಮಿಳರನ್ನು ನೋಡಿ ಕಲಿಯಬೇಕು

Advertisements

“ನಾನು ಮೂಲತಃ ರೈತ, ನಂತರ ಸಿನಿಮಾ ಕಲಾವಿದ, ಈಗ ಒಂದು ಪಕ್ಷದ ಅಧ್ಯಕ್ಷನಾಗಿದ್ದರೂ, ಮೊದಲಿನಿಂದಲೂ ನಾಡು, ನುಡಿ, ನೀರಿಗಾಗಿ ಕಲಾವಿದರನ್ನು ಸೇರಿಸಿ ಹೋರಾಟ ಮಾಡಿದ್ದೇನೆ. ನಾಡಿಗೆ, ಭಾಷೆಗೆ, ನೀರಿಗೆ, ಗಡಿಗೆ ತೊಂದರೆಯಾದಾಗ ಪಕ್ಷಭೇದ ಮರೆತು ಎಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡುವುದನ್ನು ತಮಿಳು ಭಾಷಿಕರನ್ನು ನೋಡಿ ಕಲಿಯಬೇಕು” ಎಂದು ಹೇಳಿದರು.

“ಸುಪ್ರೀಂಕೋರ್ಟ್ ಕಾವೇರಿ ನೀರು ಹಂಚಿಕೆ ಬಗ್ಗೆ ತೀರ್ಪು ಕೊಡುವುದು ಇದ್ದಾಗ, ರಾಜ್ಯದಲ್ಲಿ ಬಂದ್ ಮಾಡಿದರೆ, ಇಲ್ಲಿನ ಸಮಸ್ಯೆ ಬಗ್ಗೆ ಅವರಿಗೂ ಸಂದೇಶ ಹೋಗಲಿದೆ. ನೀರು ಬಿಡಲು ಸೂಚನೆ ಕೊಟ್ಟರೆ ಅಶಾಂತಿ ಉಂಟಾಗಬಹುದು ಎಂದು ಚಿಂತನೆ ಮಾಡುತ್ತಾರೆ ಎನ್ನುವ ಉದ್ದೇಶದಿಂದ ತುರ್ತಾಗಿ ಬಂದ್ ಮಾಡಿದ್ದೇವೆ” ಎಂದು ಸ್ಪಷ್ಟಪಡಿಸಿದರು.

“ಕಾವೇರಿ ನೀರಿಗಾಗಿ ಮಾತ್ರವಲ್ಲ ರಾಜ್ಯದ ಯಾವುದೇ ಭಾಗದಲ್ಲಿ ನಾಡು, ನುಡಿ, ಗಡಿ, ರೈತರಿಗೆ ಸಮಸ್ಯೆಯಾದಾಗ ಹೋರಾಟ ಮಾಡುತ್ತೇವೆ. ಮಹದಾಯಿ, ಕೃಷ್ಣ, ತುಂಗಭದ್ರಾ ಹೋರಾಟದಲ್ಲೂ ಭಾಗವಹಿಸುತ್ತೇವೆ” ಎಂದು ಅವರು ಹೇಳಿದರು.

ಈ ಸುದ್ದಿ ಓದಿದ್ದೀರಾ? ಮುಸ್ಲಿಂ ಸಮುದಾಯದ ಹಿತಾಸಕ್ತಿಗೆ ಜೆಡಿಎಸ್ ಯಾವತ್ತಿಗೂ ಬದ್ಧ: ಎಚ್.ಡಿ ದೇವೇಗೌಡ

ಜನರ ಹೋರಾಟಕ್ಕೆ ಜಯ ಸಿಕ್ಕಿದೆ

ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಮಾತನಾಡಿ, “ತಮಿಳುನಾಡು ಸರ್ಕಾರ 12,500 ಕ್ಯೂಸೆಕ್ ನೀರು ಬಿಡುವಂತೆ ಮನವಿ ಮಾಡಿದ್ದರು. ಆದರೆ, ಈ ಮನವಿಯನ್ನು ತಿರಸ್ಕರಿಸಿ ನೀರು ಬಿಡುವ ಪ್ರಮಾಣವನ್ನು 3000 ಕ್ಯೂಸೆಕ್‌ಗೆ ಇಳಿಸಲಾಗಿದೆ. ಇದಕ್ಕೆ ಬೆಂಗಳೂರು ಬಂದ್ ಮಾಡಿದ್ದು ಮತ್ತು ಬೆಂಗಳೂರು ಜನ ನೀಡಿದ ಬೆಂಬಲ ಕಾರಣ, ಬೆಂಗಳೂರು ಬಂದ್ ಯಶಸ್ವಿಯಾಗಿದೆ. ಜನರ ಹೋರಾಟಕ್ಕೆ ಜಯ ಸಿಕ್ಕಿದೆ” ಎಂದು ಅವರು ಹೇಳಿದರು

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ....

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X