ಕೊಡಗು ಜಿಲ್ಲೆಯಲ್ಲಿ ಆನೆಗಳು ಮತ್ತು ಮಾನವ ಸಂಘರ್ಷ ಮುಂದುವರೆದಿದ್ದು, ಮುಂಜಾನೆ ಹಾಲು ತರಲು ಹೋಗುತ್ತಿದ್ದ ವೃದ್ಧರೊಬ್ಬರ ಮೇಲೆ ಕಾಡಾನೆ ಹಿಂಡು ದಾಳಿ ಮಾಡಿದೆ. ಇದರಿಂದ ಗಾಯಗೊಂಡ ವೃದ್ಧರ ಸ್ಥಿತಿ ಗಂಭೀರವಾಗಿದೆ.
ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಕಡಂಗ ಮರೂರು ಗ್ರಾಮದಲ್ಲಿ ಘಟನೆ ಸಂಭವಿಸಿದ್ದು, ಕಡಂಗ ಮರೂರು ಗ್ರಾಮದ ನಿವಾಸಿ ಅಮ್ಮಂಡ ಸುಬ್ರಹ್ಮಣಿ(75) ದಾಳಿಗೊಳಗಾದವರು.
ಅಮ್ಮಂಡ ಸುಬ್ರಹ್ಮಣಿ ಅವರು ಹಾಲು ತರಲು ಮನೆಯಿಂದ ಅಂಗಡಿಗೆ ತೆರಳುವ ಸಂದರ್ಭದಲ್ಲಿ ಕಡಂಗ ಮರೂರು ಗ್ರಾಮದ ಭದ್ರಕಾಳಿ ದೇವಾಲಯದ ಸಮೀಪದ ತೋಟದಿಂದ ಏಕಾಏಕಿ ಬಂದ ಮೂರು ಕಾಡಾನೆಗಳು ಸುಬ್ರಹ್ಮಣಿ ಅವರ ಮೇಲೆ ದಾಳಿ ನಡೆಸಿವೆ.
ಕಾಡಾನೆ ದಾಳಿಯಿಂದ ಕೈ ಕಾಲುಗಳಿಗೆ ತೀವ್ರ ಪಟ್ಟಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಸುದ್ದಿ ಓದಿದ್ದೀರಾ? ಕೊಡಗು | ಸರ್ಕಾರದ ಮೀಸಲಾತಿ ಪಡೆಯಲು ಧರ್ಮ ಮುಖ್ಯವಲ್ಲ: ಜಯಪ್ರಕಾಶ್ ಹೆಗ್ಡೆ
ಕೊಡಗು ಜಿಲ್ಲೆಯಲ್ಲಿ ದಿನಬೆಳಗಾದರೆ ಕಾಡಾನೆಗಳ ಗುಂಪು ಕಾಡಿನಿಂದ ನಾಡಿಗೆ ಲಗ್ಗೆ ಇಡುತ್ತಿದ್ದು, ರೈತರು ಬೆಳೆದ ಬೆಳೆಗಳನ್ನ ನಾಶ ಮಾಡುವುದರೊಂದಿಗೆ ಜನರ ಮೇಲೂ ದಾಳಿ ನಡೆಸುತ್ತಿವೆ. ಪರಿಣಾಮ ಸ್ಥಳೀಯರು ಓಡಾಲು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಆನೆ ಮಾನವ ಸಂಘರ್ಷಕ್ಕೆ ಕಡಿವಾಣ ಹಾಕುವಂತೆ ಕೊಡಗಿನ ಜನತೆ ಒತ್ತಾಯಿಸಿದ್ದಾರೆ.