ಸಿನಿಮಾ ನಿರ್ದೇಶಕ, ಸಾಮಾಜಿಕ ಚಿಂತಕ ಯೋಗೀಶ್ ಮಾಸ್ಟರ್ ಅವರು ಬರೆದಿರುವ ‘ನನ್ನ ಅರಿವಿನ ಪ್ರವಾದಿ’ ಪುಸ್ತಕವು ಸೆ.28ರಂದು ಲೋಕಾರ್ಪಣೆಗೊಳ್ಳಲಿದೆ.
ಮಂಗಳೂರಿನ ಶಾಂತಿ ಪ್ರಕಾಶನವು ಪುಸ್ತಕವನ್ನು ಪ್ರಕಟಿಸಿದೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ದಾರುಸ್ಸಲಾಮ್ ಕಟ್ಟಡಣದ ಬಿಫ್ಟ್ ಅಡಿಟೋರಿಯಂನಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಪುಸ್ತಕವನ್ನು ಕರ್ನಾಟಕ ಸರ್ಕಾರದ ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಚಿರಂಜೀವಿ ಸಿಂಗ್ ಅವರು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಕಾರ್ಯಕ್ರಮ ಆಯೋಜಕರು ತಿಳಿಸಿದ್ದಾರೆ.
ಕೃತಿಯ ಕುರಿತು ಸುಧಾ ಮತ್ತು ಮಯೂರ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ರಘುನಾಥ ಚ.ಹ ಅವರು ಮಾನತಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷೆ, ಸಾಹಿತಿ ಡಾ. ವಸುಂಧರಾ ಭೂಪತಿ, ಯೋಗೀಶ್ ಮಾಸ್ಟರ್, ಜಮಾಅತೆ ಇಸ್ಲಾಮೀ ಹಿಂದ್‌ನ ಜನಾಬ್ ಮುಹಮ್ಮದ್ ಕುಂಞ ಅವರು ಭಾಗವಹಿಸಲಿದ್ದಾರೆ. ಶಾಂತಿ ಪ್ರಕಾಶನದ ಅಧ್ಯಕ್ಷ ಡಾ.ಮುಹಮ್ಮದ್ ಸಾದ್ ಬೆಳಗಾಮಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಶಾಂತಿ ಪ್ರಕಾಶನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
