ಸೆ.29 ರಂದು ನೇರಳೆ ಮಾರ್ಗದ ಮೈಸೂರು ರಸ್ತೆ ಮತ್ತು ಕೆಂಗೇರಿ ನಿಲ್ದಾಣಗಳ ನಡುವೆ ಪೂರ್ಣ ದಿನ ಮೆಟ್ರೋ ಸಂಚಾರ ಸ್ಥಗಿತಗೊಳಿಸಲಾಗುತ್ತಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ(ಬಿಎಂಆರ್‌ಸಿಎಲ್) ತಿಳಿಸಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ನಿಗಮ, “ಸೆ.29 ರಂದು ಕೆಂಗೇರಿಯಿಂದ ಚಲ್ಲಘಟ್ಟ ಮೆಟ್ರೋ ನಿಲ್ದಾಣಗಳ ನಡುವೆ ಹೊಸದಾಗಿ ನಿರ್ಮಿಸಲಾದ ಮಾರ್ಗದಲ್ಲಿ ಸುರಕ್ಷತಾ ಪರಿಶೀಲನೆಯನ್ನು ಮೆಟ್ರೋ ರೈಲ್ವೆ ಸುರಕ್ಷತಾ ಆಯುಕ್ತರು (ದಕ್ಷಿಣ ವೃತ್ತ) ನಡೆಸುವುದರಿಂದ, ಮೆಟ್ರೋ ರೈಲು ಕಾರ್ಯಾಚರಣೆಗಳಲ್ಲಿ ಬದಲಾವಣೆ ಮಾಡಲಾಗುತ್ತಿದೆ” ಎಂದು ತಿಳಿಸಿದೆ.
ಸೆ.29 ರಂದು ಕೆಂಗೇರಿ ಮತ್ತು ಮೈಸೂರು ರಸ್ತೆ ನಿಲ್ದಾಣಗಳ ನಡುವೆ ಪೂರ್ಣ ದಿನ ರೈಲುಗಳ ಸಂಚಾರ ಇರುವುದಿಲ್ಲ.
ಬೈಯಪ್ಪನಹಳ್ಳಿ ಮತ್ತು ಮೈಸೂರು ರಸ್ತೆ ನಿಲ್ದಾಣಗಳ ನಡುವೆ ಪೂರ್ಣ ದಿನ ರೈಲು ಸೇವೆಗಳು ಲಭ್ಯವಿರುತ್ತದೆ.
ಈ ಸುದ್ದಿ ಓದಿದ್ದೀರಾ? ಹೈಬ್ರಿಡ್ ಟಿಎವಿಆರ್ ವಿಧಾನದಿಂದ ತಿರುಚಿಕೊಂಡಿದ್ದ ಹೃದಯದ ಮಹಾಅಪಧಮನಿಯ ಕವಾಟದ ಬದಲಾವಣೆ; ದೇಶದಲ್ಲೇ ಮೊದಲು
ವೈಟ್ ಫೀಲ್ಡ್ (ಕಾಡುಗೋಡಿ) ಮತ್ತು ಕೃಷ್ಣರಾಜಪುರ ನಿಲ್ದಾಣಗಳ ನಡುವೆ ಪೂರ್ಣ ದಿನ ರೈಲು ಸೇವೆಗಳು ಲಭ್ಯವಿರುತ್ತದೆ.
ಹಸಿರು ಮಾರ್ಗದ ರೈಲು ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ನಮ್ಮ ಮೆಟ್ರೋ ಪ್ರಯಾಣಿಕರು ಸದರಿ ಬದಲಾವಣೆಯನ್ನು ಗಮನಿಸಿ, ಪ್ರಯಾಣಿಕರಿಗೆ ಇದರಿಂದಾಗುವ ಅನಾನುಕೂಲತೆಗೆ ವಿಷಾದಿಸಿದೆ.