ಸಮಸಮಾಜದ ಕನಸನ್ನು ಕಾಣುತ್ತಾ, ಜಾತಿ-ಧರ್ಮಗಳ ಗಡಿಯನ್ನು ಮೀರಿ ಎಲ್ಲರೂ ಭಾರತವೆಂಬ ಒಂದೇ ಸೂರಿನಡಿಯಲ್ಲಿ ಎಲ್ಲರೂ ನೆಮ್ಮದಿಯಿಂದ ಬದುಕುವಂತಾಗಬೇಕೆಂದು, ಬ್ರಿಟೀಷ್ ಸಾಮ್ರಾಜ್ಯಶಾಹಿಗಳ ವಿರುದ್ಧ ರಾಜಿರಹಿತ ಹೋರಾಟ ನಡೆಸಿ ನಗುನಗುತ್ತಾ ಗಲ್ಗಂಬವನ್ನೇರಿದ ಭಗತ್ ಸಿಂಗ್ ಪ್ರಸ್ತುತ ವಿದ್ಯಾರ್ಥಿಗಳ ಹಾಗೂ ಯುವಜನರಿಗೆ ಆದರ್ಶವಾಗಿದ್ದಾರೆ ಎಂದು ಎಐಡಿಎಸ್‌ಒ ಜಿಲ್ಲಾ ಸಂಚಾಲಕಿ ಶಿಲ್ಪಾ ಬಿ ಕೆ ಹೇಳಿದರು.
ಧೀರ ಹುತಾತ್ಮ ಮಹಾನ್ ಕ್ರಾಂತಿಕಾರಿ ಭಗತ್ ಸಿಂಗ್ ಅವರ 117ನೇ ಜನ್ಮ ವರ್ಷಾಚರಣೆಯ ಸಂದರ್ಭದಲ್ಲಿ ಯಾದಗಿರಿ ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.
“ಪ್ರಸ್ತುತ ಜನರ ಜ್ವಲ್ಪಂತ ಸಮಸ್ಯೆಗಳಾದ ಶಿಕ್ಷಣ ವ್ಯಾಪಾರೀಕರಣ, ನಿರುದ್ಯೋಗ, ಜಾತಿ ಹಾಗೂ ಕೋಮು ಸಮಸ್ಯೆಗಳ ವಿರುದ್ಧ ಧ್ವನಿ ಎತ್ತಲು ಭಗತ್ ಸಿಂಗ್ ಅವರ ವಿಚಾರಗಳು ಸ್ಫೂರ್ತಿಯಾಗಬೇಕಿದೆ” ಎಂದರು.
ಈ ಸುದ್ದಿ ಓದಿದ್ದೀರಾ? ಯಾದಗಿರಿ | ಭಗತ್ ಸಿಂಗ್ ಜನ್ಮದಿನಾಚರಣೆ
ಜಿಲ್ಲೆಯಲ್ಲಿ ಇಂದು ಹಲವು ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಂದ ಭಗತ್ ಸಿಂಗ್ ಜನ್ಮದಿನವನ್ನು ಸೂಕ್ತ ರೀತಿಯಲ್ಲಿ ಆಚರಿಸಲಾಯಿತು. ಭಗತ್ ಸಿಂಗ್ ಅವರ ಜೀವನ ಸಂಘರ್ಷ ಹಾಗೂ ವಿಚಾರಗಳನ್ನು ಸ್ಫೂರ್ತಿಯಾಗಿಸಿಕೊಂಡು ಅವರ ಕನಸಿನ ಸಮಾಜವಾದಿ ಭಾರತವನ್ನು ಕಟ್ಟಲು ವಿದ್ಯಾರ್ಥಿಗಳು ಸಂಕಲ್ಪವನ್ನು ತೆಗೆದುಕೊಂಡರು.
ಈ ಸಂದರ್ಭದಲ್ಲಿ ಎಐಡಿಎಸ್‌ಒ ಸದಸ್ಯರು, ವಿದ್ಯಾರ್ಥಿಗಳಾದ ಶೋಭಾ, ಭವಾನಿ, ಅನುರಾಧ, ಭೀಮಮ್ಮ, ಲಕ್ಷ್ಮೀ, ಪದ್ಮಾ ಸೇರಿದಂತೆ ಇತರರು ಇದ್ದರು.