ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ಸೆ.26 ರಂದು ಹಲವಾರು ಸಂಘಟನೆಗಳು ಸೇರಿ ‘ಬೆಂಗಳೂರು ಬಂದ್’ ನಡೆಸಿದ್ದವು. ಈ ವೇಳೆ, ಪ್ರತಿಭಟನೆ ಹೆಸರಿನಲ್ಲಿ ಕೆಲವು ಕೀಡೀಗೇಡಿಗಳು ಜಯನಗರದ ಹೋಟೆಲ್‌ವೊಂದಕ್ಕೆ ನುಗ್ಗಿ ದಾಳಿ ನಡೆಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಯೋಗಿಶ್ ಮತ್ತು ಸೋಮಶೇಖರ್ ಬಂಧಿತ ಅರೋಪಿಗಳು. ಪೊಲೀಸ್ ತನಿಖೆ ವೇಳೆ, ಬಂಧಿತ ಇಬ್ಬರು ಆರೋಪಿಗಳು ಬಿಜೆಪಿ ಕಾರ್ಯಕರ್ತರಾಗಿದ್ದು, ಜಯನಗರ ಶಾಸಕ ರಾಮಮೂರ್ತಿ ಕಡೆಯವರು ಎಂದು ತಿಳಿದುಬಂದಿದೆ.
ಬೆಂಗಳೂರು ಬಂದ್ ದಿನ ನಗರದ ಜಯನಗರ ಉಡುಪಿ ಹಬ್‌ಗೆ 8ಕ್ಕೂ ಹೆಚ್ಚು ಜನ ಹೋಟೆಲ್‌ಗೆ ನುಗ್ಗಿ ಗ್ಲಾಸ್, ಪೀಠೋಪಕರಣಗಳನ್ನು ಒಡೆದು ಹಾಕಿದ್ದರು. ಬೆಂಗಳೂರು ಬಂದ್ ಇದ್ದರೂ ಕೂಡ ಹೋಟೆಲ್ ಬಾಗಿಲು ಮುಚ್ಚಿಲ್ಲ ಎಂದು ಹೋರಾಟದ ಹೆಸರಿನಲ್ಲಿ ಬಂದ ವ್ಯಕ್ತಿಗಳು ಈ ಕೃತ್ಯ ನಡೆಸಿದ್ದರು. ಬೈಕ್ನಲ್ಲಿ ಬಂದಿದ್ದ ಶಿವು, ವಿಶ್ವ ಹಾಗೂ ಇತರರಿಂದ ಈ ಕೃತ್ಯ ನಡೆದಿದ್ದು, ಘಟನೆ ನಡೆದ ದಿನ ಪೊಲೀಸರು ಇವರನ್ನು ವಶಕ್ಕೆ ಪಡೆದಿದ್ದರು. ಇದೀಗ ಮತ್ತಿಬ್ಬರನ್ನು ವಶಕ್ಕೆ ಪಡೆದಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪ್ರತಿಭಟನೆ ಹೆಸರಿನಲ್ಲಿ ಹೋಟೆಲ್‌ಗೆ ನುಗ್ಗಿ ದಾಂಧಲೆ ನಡೆಸಿದ ಕೀಡಿಗೇಡಿಗಳು
ಈ ಕುರಿತು ಹೋಟೆಲ್ ಮಾಲೀಕರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಸದ್ಯ ಜಯನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಉಳಿದ ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.