ಬಿಜೆಪಿಯ ದುರಾಡಳಿತದಲ್ಲಿ ಮಹಿಳೆಯರು ಸುರಕ್ಷಿತರಲ್ಲ: ಉಜ್ಜಯಿನಿ ಘಟನೆಗೆ ಪ್ರಿಯಾಂಕಾ ಆಕ್ರೋಶ

Date:

Advertisements
  • ಮಧ್ಯಪ್ರದೇಶದ ಉಜ್ಜಯಿನಿ ನಗರದ ಬೀದಿಯಲ್ಲಿ 12 ವರ್ಷದ ಬಾಲಕಿಯ ಅತ್ಯಾಚಾರ
  • ‘ಲಾಡ್ಲಿ ಬೆಹನಾ’ ಹೆಸರಿನಲ್ಲಿ ಚುನಾವಣಾ ಘೋಷಣೆ ಮಾಡಿ ಏನು ಪ್ರಯೋಜನ

ಮಧ್ಯಪ್ರದೇಶದ ಉಜ್ಜಯಿನಿಯ ಬೀದಿಯಲ್ಲಿ 12 ವರ್ಷದ ಅತ್ಯಾಚಾರ ಸಂತ್ರಸ್ತ ಬಾಲಕಿ ರಕ್ತಸ್ರಾವದಿಂದ ಒದ್ದಾಡುತ್ತಿದ್ದ ಪ್ರಕರಣದಿಂದ ಇಡೀ ದೇಶವೇ ತಲೆತಗ್ಗಿಸುವಂತಾಗಿದೆ.

ಈ ಘಟನೆಯನ್ನು ಖಂಡಿಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, “ಬಿಜೆಪಿಯ ದುರಾಡಳಿತದಲ್ಲಿ ಬಾಲಕಿಯರು, ಮಹಿಳೆಯರು ಮತ್ತು ದಲಿತರು, ಆದಿವಾಸಿಗಳು ಸುರಕ್ಷಿತರಲ್ಲ” ಎಂದು ಟ್ವೀಟ್ ಮೂಲಕ ಅಲ್ಲಿನ ಬಿಜೆಪಿ ನೇತೃತ್ವದ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಟ್ವೀಟ್‌ನಲ್ಲಿ, “ಭಗವಂತ ಮಹಾಕಾಳನ ನಗರವಾಗಿರುವ ಉಜ್ಜಯಿನಿಯಲ್ಲಿ ಪುಟ್ಟ ಬಾಲಕಿಯ ಮೇಲೆ ನಡೆದ ಕ್ರೌರ್ಯವು ಆತ್ಮವನ್ನು ಛಿದ್ರಗೊಳಿಸುವಂತದ್ದಾಗಿದೆ. ಚಿತ್ರಹಿಂಸೆ ತಾಳಲಾಗದೆ ಬಾಲಕಿ ಸಹಾಯಕ್ಕಾಗಿ ಮನೆಯಿಂದ ಮನೆಗೆ ಎರಡೂವರೆ ಗಂಟೆ ಅಲೆದಾಡಿದ್ದಾಳೆ. ಬಳಿಕ, ರಸ್ತೆಯಲ್ಲಿ ಪ್ರಜ್ಞಾಹೀನಳಾಗಿ ಬಿದ್ದರೂ ಯಾವುದೇ ಸಹಾಯ ಸಿಕ್ಕಿರಲಿಲ್ಲ” ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಬೇಸರಿಸಿದ್ದಾರೆ.

Advertisements

“ಇದು ಮಧ್ಯಪ್ರದೇಶದ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಮಹಿಳೆಯರ ಸುರಕ್ಷತೆಯೇ? ಬಿಜೆಪಿಯ 20 ವರ್ಷಗಳ ದುರಾಡಳಿತದಲ್ಲಿ ಹೆಣ್ಣುಮಕ್ಕಳು, ಮಹಿಳೆಯರು, ಆದಿವಾಸಿಗಳು ಮತ್ತು ದಲಿತರಿಗೆ ರಕ್ಷಣೆ ಸಿಕ್ಕಿಲ್ಲ” ಎಂದು ಕಾಂಗ್ರೆಸ್ ನಾಯಕಿ ಆರೋಪಿಸಿದ್ದಾರೆ.

“ಹೆಣ್ಣುಮಕ್ಕಳಿಗೆ ರಕ್ಷಣೆ, ಸಹಾಯ ಸಿಗದಿದ್ದಾಗ ‘ಲಾಡ್ಲಿ ಬೆಹನಾ’ ಹೆಸರಿನಲ್ಲಿ ಚುನಾವಣಾ ಘೋಷಣೆ ಮಾಡಿ ಏನು ಪ್ರಯೋಜನ?” ಎಂದು ಪ್ರಿಯಾಂಕಾ ಗಾಂಧಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಅತ್ಯಾಚಾರಕ್ಕೊಳಗಾಗಿದ್ದ ಬಾಲಕಿ ರಕ್ತಸ್ರಾವದಿಂದ ನರಳುತ್ತಿದ್ದ ಘಟನೆ ಮಧ್ಯಪ್ರದೇಶದ ಉಜ್ಜಯಿನಿ ನಗರದ ರಸ್ತೆಯೊಂದರಲ್ಲಿ ಬುಧವಾರ ನಡೆದಿದೆ. ಬಾಲಕಿಯ ಸ್ಥಿತಿಯನ್ನು ಕಂಡ ದೇವಸ್ಥಾನದ ಅರ್ಚಕರೊಬ್ಬರು ಪೊಲೀಸರಿಗೆ ಮಾಹಿತಿ ನೀಡಿ, ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದರು. ತಜ್ಞ ವೈದ್ಯರ ತಂಡವು ಶಸ್ತ್ರಚಿಕಿತ್ಸೆಗೆ ಒಳಪಡಿಸಿದೆ. ಆದರೂ ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಅತ್ಯಾಚಾರಕ್ಕೊಳಗಾದ ಬಳಿಕ ಬಾಲಕಿ ನಡೆದುಕೊಂಡು ಹೋಗುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಘಟನೆಯ ಅತ್ಯಂತ ದುರದೃಷ್ಟಕರ ಸಂಗತಿ ಏನೆಂದರೆ, ಬಾಲಕಿಯ ಪರಿಸ್ಥಿತಿ ನೋಡಿಯೂ ಯಾರೂ ಕೂಡ ಸಹಾಯ ಮಾಡಲು ಮುಂದಾಗಿಲ್ಲ ಎಂಬುದು. ಈ ಎಲ್ಲ ದೃಶ್ಯಗಳು ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ. ಘಟನೆಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X