ಬೆಳಗಾವಿ | ಕಿತ್ತೂರು ಉತ್ಸವ: ಕವಿಗೋಷ್ಠಿಗೆ ಕವನ ಆಹ್ವಾನ

Date:

Advertisements

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ಆಯೋಜಿಸಿರುವ ಕಿತ್ತೂರು ಉತ್ಸವ ಅಂಗವಾಗಿ ಅಕ್ಟೋಬರ್ ತಿಂಗಳಿನಲ್ಲಿ ಕವಿಗೋಷ್ಠಿ ನಡೆಯಲಿದೆ. ಕವಿಗೋಷ್ಠಿಯಲ್ಲಿ ಕವಿತೆ ವಾಚನ ಮಾಡಲು ಕವಿ-ಕವಯಿತ್ರಿಗಳು ನೋಂದಾಯಿಸಿಕೊಳ್ಳಲು ಕವನ ಆಹ್ವಾನಿಸಲಾಗಿದೆ.

ಈ ಕುರಿತು ಕಸಾಪ ಪತ್ರಿಕಾ ಪ್ರಕರಣೆ ಹೊರಡಿಸಿದೆ. “ಉದಯೋನ್ಮುಖ ಹಾಗೂ ಪ್ರತಿಭಾವಂತ ಕವಿಗಳಿಂದ ವೀರರಾಣಿ ಕಿತ್ತೂರು‌ ಚನ್ನಮ್ಮ, ಸ್ವಾತಂತ್ರ್ಯ ಹೋರಾಟಗಾರರು, ಕನ್ನಡ ನಾಡು, ನುಡಿ, ಇತಿಹಾಸ, ಸಂಸ್ಕೃತಿ, ಪರಂಪರೆ, ಪರಿಸರ ಪ್ರೇಮ, ರಾಷ್ಟ್ರಪ್ರೇಮ, ಮಾನವೀಯ ಮೌಲ್ಯಗಳು ವಿಷಯಗಳಿಗೆ ಸಂಬಂಧಿಸಿದಂತೆ ಕವನಗಳನ್ನು ಆಹ್ವಾನಿಸಲಾಗಿದೆ” ಎಂದು ಹೇಳಿದೆ.

“ಕವನ ನೋಂದಾಯಿಸಲು ಇಚ್ಚಿಸುವವರು ಕವನವು 30 ಸಾಲುಗಳನ್ನು ಮೀರಿದಂತೆ ಬರೆಯಬೇಕು. ಆ ಕವನವನ್ನು ಕಾಗದದ ಒಂದೇ ಮಗ್ಗುಲಲ್ಲಿ ಬರೆದು ಡಿಟಿಪಿ ಮಾಡಿಸಿ ಸ್ವ-ವಿಳಾಸ, ಕಿರುಪರಿಚಯ, ಭಾವಚಿತ್ರ, ವಾಟ್ಸ್‌ಆ್ಯಪ್‌ ಮೊಬೈಲ್ ಸಂಖ್ಯೆಯೊಂದಿಗೆ ಸೆ.30ರ ಒಳಗೆ ಕಳುಹಿಸಬೇಕು” ಎಂದು ಹೇಳಿದೆ.

Advertisements

“ಕವನವನ್ನು ಮಂಜುಳಾ ಶೆಟ್ಟರ್, ಗೌರವ ಕಾರ್ಯದರ್ಶಿಗಳು, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಕೇರ್‌ ಆಪ್‌ ರಾಜು ಹಕ್ಕಿ, ಮೆಳೆಪ್ಪನವರ ಚಾಳ, ಬೈಲಹೊಂಗಲ, ಬೆಳಗಾವಿ ಜಿಲ್ಲೆ 591102 – ಈ ವಿಳಾಸಕ್ಕೆ ಕಳಿಸಬೇಕು. ಹೆಚ್ಚಿನ ಮಾಹಿತಿಗೆ ಮೊ.ನಂ. 9945326808, 9844491490 ಸಂಪರ್ಕಿಸಬಹುದು” ಎಂದು ಹೇಳಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

Download Eedina App Android / iOS

X