ಬೆಳಗಾವಿ | ಗಣೇಶ ವಿಸರ್ಜನೆಗೆ 8 ಸ್ಥಳಗಳಲ್ಲಿ ವ್ಯವಸ್ಥೆ; ಬಿಗಿ ಭದ್ರತೆ

Date:

Advertisements

ಬೆಳಗಾವಿ ನಗರದಲ್ಲಿ ಸೆಪ್ಟೆಂಬರ್ 28ರಂದು ನಡೆಯಲ್ಲಿರುವ ಗಣೇಶ ವಿಸರ್ಜನೆಗೆ 8 ಸ್ಥಳಗಳಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ತಿಳಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಗಣೇಶ ಮೂರ್ತಿಗಳ ವಿಸರ್ಜನೆಗಾಗಿ ಕಪಿಲೇಶ್ವರ ದೇವಸ್ಥಾನ ಬಳಿಯ ಹಳೆ ಮತ್ತು ಹೊಸ ಹೊಂಡ, ಜಕ್ಕೇರಿ ಹೊಂಡ, ಅನಗೋಳದ ಕೆರೆ ಸೇರಿದಂತೆ 8 ಕಡೆ ವ್ಯವಸ್ಥೆ ಮಾಡಲಾಗಿದ್ದು, ವೀಕ್ಷಿಸಲು ಬರುವವರಿಗೆ ಅನುಕೂಲವಾಗಲೆಂದು ಸಮರ್ಪಕ ಬೆಳಕಿನ ವ್ಯವಸ್ಥೆ ಮಾಡಲಾಗಿದೆ. ಧರ್ಮವೀರ ಸಂಭಾಜಿ ವೃತ್ತದಲ್ಲಿ ವೀಕ್ಷಕರ ಗ್ಯಾಲರಿ ನಿರ್ಮಿಸಲಾಗಿದೆ. ಗಣೇಶ ವಿಸರ್ಜನೆ ಪ್ರಕ್ರಿಯೆ ಸುಗಮವಾಗಿ ಮುಗಿಸಲು ಎಲ್ಲ ತಯಾರಿ ಮಾಡಿಕೊಳ್ಳಲಾಗಿದೆ” ಎಂದು ಹೇಳಿದರು.

“ಬೆಳಗಾವಿ ನಗರದ ಬಡಾವಣೆಗಳಲ್ಲಿ 378 ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದ್ದು, ಹುತಾತ್ಮ ಚೌಕ್‌ನಲ್ಲಿ ಸಂಜೆ 4ಕ್ಕೆ ಮೂರ್ತಿಗಳ ಮೆರವಣಿಗೆಗೆ ಚಾಲನೆ ಸಿಗಲಿದೆ. ಅಲ್ಲಿಂದ ರಾಮದೇವ ಗಲ್ಲಿ, ಸಮಾದೇವಿ ಗಲ್ಲಿ, ಯಂಡೇಖೂಟ, ಕಾಲೇಜು ರಸ್ತೆ, ಧರ್ಮವೀರ ಸಂಭಾಜಿ ವೃತ್ತ, ಕಿರ್ಲೋಸ್ಕರ್‌ ರಸ್ತೆ, ರಾಮಲಿಂಗಖಿಂಡ್‌ ಗಲ್ಲಿ ರಸ್ತೆ, ಟಿಳಕ ಚೌಕ, ಹೆಮು ಕಲಾನಿ ಚೌಕ್‌, ಪಾಟೀಲ ಗಲ್ಲಿಯ ಶನಿ ಮಂದಿರ, ಕಪಿಲೇಶ್ವರ ರೈಲ್ವೆ ಮೇಲ್ಸೇತುವೆ ಮಾರ್ಗವಾಗಿ ಸಂಚರಿಸಲು ಅವಕಾಶ ಮಾಡಿಕೊಡಲಾಗಿದೆ. ಈ ರಸ್ತೆಗಳಲ್ಲಿ ಗುಂಡಿಗಳನ್ನು ಮುಚ್ಚಲಾಗಿದ್ದು, ಮೂರ್ತಿ ಸಾಗಿಸುವ ವಾಹನಗಳಿಗೆ ಅಡ್ಡಿಯಾಗಬಹುದಾದ ವಿದ್ಯುತ್ ಪರಿಕರಗಳನ್ನು ತೆರವುಗೊಳಿಸಲಾಗಿದೆ. ಮೆರವಣಿಗೆ ವೇಳೆ ನಿರಂತರವಾಗಿ ವಿದ್ಯುತ್‌ ಸರಬರಾಜು ಮಾಡಲು ಮತ್ತು ಅಗತ್ಯ ಸುರಕ್ಷತೆ ವಹಿಸಲು ಹೆಸ್ಕಾಂ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಕಿತ್ತೂರು ಉತ್ಸವ: ಕವಿಗೋಷ್ಠಿಗೆ ಕವನ ಆಹ್ವಾನ

“ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನೆ ಹಿನ್ನೆಲೆಯಲ್ಲಿ ನಗರದಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಮೆರವಣಿಗೆ ಮಾರ್ಗ ಮತ್ತು ಆಯಕಟ್ಟಿನ ಸ್ಥಳಗಳಲ್ಲಿ 487 ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ. ಪ್ರತಿ ಚಟುವಟಿಕೆ ಮೇಲೆ ನಿಗಾ ವಹಿಸಲು 8 ಡ್ರೋನ್‌ ಕ್ಯಾಮೆರಾ ಬಳಸಲಾಗುತ್ತಿದೆ. ಬೆಳಗಾವಿ ಮತ್ತು ಬೇರೆ ಜಿಲ್ಲೆಗಳ ಪೊಲೀಸ್‌ ಅಧಿಕಾರಿಗಳು, ಸಿಬ್ಬಂದಿ, 10 ಕೆಎಸ್‌ಆರ್‌ಪಿ ತುಕಡಿ, 8 ಸಿಎಆರ್‌ ತುಕಡಿಗಳನ್ನು ಬೆಳಗಾವಿ ಗಣೇಶ ವಿಸರ್ಜನೆ ಭದ್ರತೆಗಾಗಿ ಬಳಸಲಾಗುತ್ತಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X