ಭಾರತದ ‘ಹಸಿರು ಕ್ರಾಂತಿ’ಯ ಪಿತಾಮಹ ಎಂ ಎಸ್‌ ಸ್ವಾಮಿನಾಥನ್‌ ನಿಧನ

Date:

Advertisements

ಭಾರತದ ‘ಹಸಿರು ಕ್ರಾಂತಿ’ಯ ಪಿತಾಮಹ ಎಂದು ಖ್ಯಾತರಾಗಿದ್ದ ಎಂ ಎಸ್ ಸ್ವಾಮಿನಾಥನ್ ಗುರುವಾರ(ಸೆ.28) ಚೆನ್ನೈನಲ್ಲಿ ತಮ್ಮ 98ನೇ ವಯಸ್ಸಿನಲ್ಲಿ ನಿಧನರಾದರು.

ಮೂವರು ಪುತ್ರಿಯರಾದ ಸೌಮ್ಯ, ಮಧುರಾ ಮತ್ತು ನಿತ್ಯ ಅವರನ್ನು ಸ್ವಾಮಿನಾಥನ್ ಅಗಲಿದ್ದಾರೆ. ಅವರ ಪತ್ನಿ ಮೀನಾ 2022ರಲ್ಲಿ ನಿಧನರಾಗಿದ್ದಾರೆ.

ಆಗಸ್ಟ್ 7, 1925 ರಂದು ತಮಿಳುನಾಡಿನ ತಂಜಾವೂರು ಜಿಲ್ಲೆಯಲ್ಲಿ ಜನಿಸಿದ ಅವರು ಕೃಷಿ ವಿಜ್ಞಾನಿ, ಸಸ್ಯ ತಳಿಶಾಸ್ತ್ರಜ್ಞ, ಆಡಳಿತಗಾರ ಮತ್ತು ಮಾನವತಾವಾದಿಯಾಗಿದ್ದರು. ಭಾರತದ ಕಡಿಮೆ ಆದಾಯದ ರೈತರು ಹೆಚ್ಚು ಉತ್ಪಾದಿಸಲು ಸಹಾಯ ಮಾಡುವ ಹೆಚ್ಚಿನ ಇಳುವರಿ ನೀಡುವ ಭತ್ತದ ತಳಿಗಳನ್ನು ಅಭಿವೃದ್ಧಿಪಡಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದಾರೆ.

Advertisements

ಭಾರತದಲ್ಲಿ ಹೆಚ್ಚು ಇಳುವರಿ ನೀಡುವ ಗೋಧಿ ಮತ್ತು ಅಕ್ಕಿ ತಳಿಗಳ ಪರಿಚಯವನ್ನು ಅಭಿವೃದ್ಧಿಪಡಿಸಲು ಮತ್ತು ಮುನ್ನಡೆಸಿದ್ದಕ್ಕಾಗಿ, ಅವರು 1987 ರಲ್ಲಿ ಮೊದಲ ವಿಶ್ವ ಆಹಾರ ಪ್ರಶಸ್ತಿಯನ್ನು ಪಡೆದರು. ನಂತರ ಅವರು ಚೆನ್ನೈನಲ್ಲಿ ಎಂ ಎಸ್ ಸ್ವಾಮಿನಾಥನ್ ಸಂಶೋಧನಾ ಪ್ರತಿಷ್ಠಾನವನ್ನು ಸ್ಥಾಪಿಸಿದರು. ಸ್ವಾಮಿನಾಥನ್ ಅವರಿಗೆ 1971 ರಲ್ಲಿ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ಮತ್ತು 1986 ರಲ್ಲಿ ಆಲ್ಬರ್ಟ್ ಐನ್‌ಸ್ಟೈನ್ ವರ್ಲ್ಡ್ ಸೈನ್ಸ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಮಣಿಪುರ ಹೆಚ್ಚಾದ ಹಿಂಸಾಚಾರ: ಇಡೀ ರಾಜ್ಯವನ್ನು ‘ಪ್ರಕ್ಷುಬ್ಧ ಪ್ರದೇಶ’ವೆಂದು ಘೋಷಿಸಿದ ಸರ್ಕಾರ

ಕೃಷಿ ವಿಜ್ಞಾನದಲ್ಲಿ ಅವರ ತೀವ್ರ ಆಸಕ್ತಿ ಮತ್ತು ಸ್ವಾತಂತ್ರ್ಯ ಚಳವಳಿಯಲ್ಲಿ ಅವರ ತಂದೆ ಭಾಗವಹಿಸುವಿಕೆ ಮತ್ತು ಮಹಾತ್ಮ ಗಾಂಧಿಯವರ ಪ್ರಭಾವವು ಕೃಷಿ ವಿಷಯದಲ್ಲಿ ಉನ್ನತ ಅಧ್ಯಯನವನ್ನು ಮುಂದುವರಿಸಲು ಸ್ವಾಮಿನಾಥನ್‌ ಅವರನ್ನು ಪ್ರೇರೇಪಿಸಿತು. ಇಲ್ಲದಿದ್ದರೆ, ಅವರು ಪೊಲೀಸ್ ಅಧಿಕಾರಿಯಾಗುತ್ತಿದ್ದರು. ಅದಕ್ಕಾಗಿ ಅವರು 1940 ರ ದಶಕದ ಉತ್ತರಾರ್ಧದಲ್ಲಿ ಎರಡು ಪದವಿಗಳನ್ನು ಪಡೆದಿದ್ದರು.

ಡಾ. ಸ್ವಾಮಿನಾಥನ್ ಅವರು ‘ಹಸಿರು ಕ್ರಾಂತಿ’ಯ ಯಶಸ್ಸಿಗಾಗಿ ಇಬ್ಬರು ಕೇಂದ್ರ ಕೃಷಿ ಮಂತ್ರಿಗಳಾದ ಸಿ. ಸುಬ್ರಮಣ್ಯಂ (1964-67) ಮತ್ತು ಜಗಜೀವನ್ ರಾಮ್ (1967-70 ಮತ್ತು 1974-77) ಅವರೊಂದಿಗೆ ನಿಕಟ ಸಂಪರ್ಕದಲ್ಲಿದ್ದು ಕೆಲಸ ಮಾಡಿದರು. ರಾಸಾಯನಿಕ-ಜೈವಿಕ ತಂತ್ರಜ್ಞಾನದ ಅಳವಡಿಕೆಯ ಮೂಲಕ ಗೋಧಿ ಮತ್ತು ಅಕ್ಕಿಯ ಉತ್ಪಾದನೆಯನ್ನು ಹೆಚ್ಚುಗೊಳಿಸುವ ಕಾರ್ಯಕ್ರಮವನ್ನು ದೇಶದಾದ್ಯಂತ ಜಾರಿಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಪ್ರಸಿದ್ಧ ಅಮೆರಿಕನ್ ಕೃಷಿ ವಿಜ್ಞಾನಿಯಾದ ನಾರ್ಮನ್ ಬೋರ್ಲಾಗ್ ಅವರು ಸ್ವಾಮಿನಾಥನ್ ರೀತಿಯಲ್ಲಿಯೇ ಗೋಧಿಯ ಮೇಲಿನ ಹೆಚ್ಚು ಉತ್ಪಾದನೆಗಾಗಿ ಸಂಶೋಧನೆ ಮಾಡಿದ ಪರಿಣಾಮ 1970 ರಲ್ಲಿ ನೊಬೆಲ್ ಪ್ರಶಸ್ತಿಗೆ ಭಾಜನರಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X