ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ (ಎಚ್‌ಡಿಎಂಸಿ) ಪೌರಕಾರ್ಮಿಕರಿಗಾಗಿ ‘ಭೀಮಾಶ್ರಯ’ ವಿಶ್ರಾಂತಿ ಕೊಠಡಿಗಳನ್ನು ಪ್ರಾರಂಭಿಸಿದ್ದು, ಪೌರಕಾರ್ಮಿಕರು ಕೆಲಸದ ಸಮಯದಲ್ಲಿ ಇದನ್ನು ಬಳಸಬಹುದು. ಈ ವಿಶ್ರಾಂತಿ ಕೊಠಡಿಗಳಲ್ಲಿ ಶೌಚಾಲಯಗಳು, ಕುಡಿಯುವ ನೀರು, ವಿಶ್ರಾಂತಿ ಕೇಂದ್ರಗಳು ಸೇರಿದಂತೆ ಇತರ ಸೌಲಭ್ಯಗಳನ್ನು ಅಳವಡಿಸಿದ್ದಾರೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸೆಪ್ಟೆಂಬರ್ 23 ರಂದು ‘ಪೌರ ಕಾರ್ಮಿಕರ ದಿನಾಚರಣೆ’ ಆಚರಿಸಿದ ಸಂದರ್ಭದಲ್ಲಿ ವಿಶ್ರಾಂತಿ ಕೊಠಡಿಗಳಿಗೆ ಚಾಲನೆ ನೀಡಿದೆ.
ಪೌರ ಕಾರ್ಮಿಕರಿಗೆ ವಿಶ್ರಾಂತಿ ಕೊಠಡಿಗಳ ಕಲ್ಪನೆಯನ್ನು ಮೊದಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ (ಬಿಬಿಎಂಪಿ) ಪರಿಚಯಿಸಲಾಯಿತು. ಆ ಯೋಜನೆಯನ್ನು ಅನುಸರಿಸಿ, ಎಚ್‌ಡಿಎಂಸಿ ಈಗ ಇದನ್ನು ಪ್ರಾಯೋಗಿಕ ಯೋಜನೆಯಾಗಿ ಜಾರಿಗೆ ತಂದಿದೆ. ನಾಗರಿಕ ಸಂಸ್ಥೆಯ ವ್ಯಾಪ್ತಿಯಲ್ಲಿ 24 ಕಂಟೇನರ್ ಮಾದರಿಯ ವಿಶ್ರಾಂತಿ ಕೊಠಡಿಗಳನ್ನು ನಿರ್ಮಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಧಾರವಾಡ | ಅವಳಿ ನಗರಗಳಿಗೆ 5 ತಿಂಗಳಲ್ಲಿ 100 ಹೊಸ ಸಿಟಿ ಬಸ್‌ಗಳು ರಸ್ತೆಗಿಳಿಯಲಿವೆ: ಸಾರಿಗೆ ಸಚಿವ
ಪೌರಕಾರ್ಮಿಕರು ನೆಲದ ಮೇಲೆ ಅಥವಾ ಬಯಲಿನಲ್ಲಿ ಕುಳಿತು ಊಟ ಮಾಡುವುದು ನಗರಾದ್ಯಂತ ಸಾಮಾನ್ಯ ದೃಶ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಕಳೆದ 10 ವರ್ಷಗಳಿಂದ ಶೌಚಾಲಯಕ್ಕೆ ಬೇಡಿಕೆ ಇಟ್ಟಿದ್ದರು. ಈಗ, ಕಾರ್ಮಿಕರು ಅಂತಿಮವಾಗಿ ಈ ವಿಶ್ರಾಂತಿ ಕೊಠಡಿಗಳಿಂದ ಅಪಾರ ಪ್ರಯೋಜನ ಪಡೆಯಬಹುದು ಎಂಬುದು ಸಾರ್ವಜನಿಕರ ಅಭಿಪ್ರವಾಗಿದೆ.