ಚಿನ್ನದ ಪದಕ ಗೆದ್ದ ಮಹಿಳಾ ಅಂಧ ಕ್ರಿಕೆಟ್‌ ತಂಡದ ಕರ್ನಾಟಕ ಆಟಗಾರರಿಗೆ ಸಿಎಂ ಅಭಿನಂದನೆ

Date:

Advertisements
  • ರಜತ ಪದಕ ಗೆದ್ದಿರುವ ಪುರುಷರ ಕ್ರಿಕೆಟ್ ತಂಡಕ್ಕೂ ಸಿಎಂ ಅಭಿನಂದನೆ
  • ತಂಡಗಳ ಬೇಡಿಕೆ ಈಡೇರಿಸುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ

ಐ.ಬಿ.ಎಸ್.ಎ ವಿಶ್ವ ಕ್ರಿಕೆಟ್ ಪಂದ್ಯಾವಳಿಗಳಲ್ಲಿ (ಕ್ರಿಕೆಟ್ ಫಾರ್ ಬ್ಲೈಂಡ್) ಪಾಲ್ಗೊಂಡು ಚಿನ್ನದ ಪದಕ ಗೆದ್ದಿರುವ ಭಾರತದ ಮಹಿಳಾ ಅಂಧ ಕ್ರಿಕೆಟ್ ತಂಡ ಹಾಗೂ ರಜತ ಪದಕ ಗೆದ್ದಿರುವ ಪುರುಷರ ಕ್ರಿಕೆಟ್ ತಂಡದ ಕರ್ನಾಟಕದ ಆಟಗಾರರನ್ನು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಗೃಹ ಕಚೇರಿ ಕೃಷ್ಣಾದಲ್ಲಿ ಅಭಿನಂದಿಸಿದರು.

ಭಾರತೀಯ ಅಂಧ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಕರ್ನಾಟಕದ ವರ್ಷಾ ಯು ಹಾಗೂ ತಂಡದ ಆಟಗಾರರಾದ, ದೀಪಿಕಾ, ಗಂಗವ್ವ ಮತ್ತು ಪುರುಷರ ತಂಡದ ಪ್ರಕಾಶ್ ಜೆ, ಸುನೀಲ್ ಕುಮಾರ್, ಬಸಪ್ಪ ಒಡ್ಡಗೋಲ್ ಅವರನ್ನು ಮುಖ್ಯಮಂತ್ರಿಗಳು ಅಭಿನಂದಿಸಿದರು.

ಕರ್ನಾಟಕ ರಾಜ್ಯ ಒಲಿಂಪಿಕ್ ಸಂಸ್ಥೆ ಅಧ್ಯಕ್ಷರೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳೂ ಆದ ಗೋವಿಂದ ರಾಜು ಅವರ ನೇತೃತ್ವದಲ್ಲಿ ಪದಕ ವಿಜೇತ ಆಟಗಾರರ ತಂಡ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ತಮ್ಮ ಬೇಡಿಕೆಗಳನ್ನು ಮುಂದಿಟ್ಟಿತು. ಗೋವಿಂದರಾಜು ಅವರ ಜತೆ ಪ್ರತ್ಯೇಕವಾಗಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಂಡು ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವರ್ತಮಾನದ ಕೃಷಿ ಬಿಕ್ಕಟ್ಟು ಮತ್ತು ಎಂ ಎಸ್ ಸ್ವಾಮಿನಾಥನ್ ಸೃಷ್ಟಿಸಿದ ಚರಿತ್ರೆ

ಕ್ರಿಕೆಟ್‌ಗೆ ಹೇಗೆ ತರಬೇತಿ ಪಡೆಯುತ್ತೀರಿ, ಬಾಲನ್ನು ಹೇಗೆ ಗುರುತಿಸುತ್ತೀರಿ, ಎಷ್ಟು ಪಂದ್ಯಗಳನ್ನು ಆಡಿದ್ದೀರಿ ಎನ್ನುವುದೂ ಸೇರಿದಂತೆ ಹಲವು ಕುತೂಹಲಕಾರಿ ಪ್ರಶ್ನೆಗಳ ಮೂಲಕ ಆಟಗಾರರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಲ ಕಾಲ ಸಂವಾದ ನಡೆಸಿದರು.

ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ನಸೀರ್ ಅಹಮದ್, ಕ್ರಿಕೆಟ್ ಅಸೋಸಿಯೇಷನ್ ಫಾರ್ ಬ್ಲೈಂಡ್ ಇಂಡಿಯಾದ ಆಜೀವ ಅಧ್ಯಕ್ಷ ಮಹಾಂತೇಶ್, ಕ್ಯಾಬಿ ಅಧ್ಯಕ್ಷ ಬೂಸಾಗೌಡ ಸಮರ್ಥನಮ್ ಟ್ರಸ್ಟ್ ನ ಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X