ತಮಿಳುನಾಡಿಗೆ ಅಕ್ಟೋಬರ್ 15ರವರೆಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಮತ್ತೆ ಆದೇಶ ಹೊರಡಿಸಿದೆ.
ಮುಂದಿನ 18 ದಿನ, ಪ್ರತಿದಿನವೂ ಮೂರು ಸಾವಿರ ಕ್ಯೂಸೆಕ್ ನೀರು ಬಿಡುವಂತೆ ದೆಹಲಿಯಲ್ಲಿಂದು ನಡೆದ ಸಭೆಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕರ್ನಾಟಕಕ್ಕೆ ಸೂಚನೆ ನೀಡಿದೆ.
ಈ ಹಿಂದೆ ಕಾವೇರಿ ನೀರು ನಿಯಂತ್ರಣಾ ಸಮಿತಿ(ಸಿಡಬ್ಲ್ಯೂಆರ್ಸಿ) ಆದೇಶ ಪಾಲಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(ಸಿಡಬ್ಲ್ಯೂಎಂಎ) ತಿಳಿಸಿದೆ. ಕರ್ನಾಟಕದಲ್ಲಿ ಕಾವೇರಿ ಹೋರಾಟವು ತೀವ್ರಗೊಳ್ಳುತ್ತಿರುವ ನಡುವೆಯೇ ಈ ಆದೇಶ ಹೊರಬಂದಿದೆ.