ಕರ್ನಾಟಕ ಅರಣ್ಯ ಇಲಾಖೆ ವತಿಯಿಂದ ನಡೆಯುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ನೀಡುವ ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅರಣ್ಯ ಇಲಾಖೆಯ 2020 ಹಾಗೂ 2021ನೇ ಸಾಲಿನ ಮುಖ್ಯಮಂತ್ರಿಗಳ ಪದಕಕ್ಕೆ ಆಯ್ಕೆಯಾಗಿರುವ 50 ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಪದಕ ಪ್ರದಾನ ಮಾಡಿದರು.
ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆ ಸಚಿವರಾದ ಈಶ್ವರ್ ಬಿ. ಖಂಡ್ರೆ ಅವರು ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರಾದ ಪ್ರಿಯಾಂಕ್ ಖರ್ಗೆ, ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಅರಣ್ಯ ಇಲಾಖೆಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಅರಣ್ಯ ಪಡೆ ಮುಖ್ಯಸ್ಥರಾದ ರಾಜೀವ್ ರಂಜನ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.