ಬಹಳಷ್ಟು ಮಂದಿ ಜೆಡಿಎಸ್-ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಬರುಲು ಸಿದ್ದರಾಗಿದ್ದಾರೆ. ಎಲ್ಲದಕ್ಕೂ ಕಾಲ ಕೂಡಿ ಬರಬೇಕು ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ಹೇಳಿದ್ದಾರೆ.
ರಾಜ್ಯದಲ್ಲಿ ಆಪರೇಷನ್ ಹಸ್ತ ನಡೆಸಲು ಕಾಂಗ್ರೆಸ್ ಮುಂದಾಗಿದೆ ಎಂಬ ಮಾತುಗಳು ಕಳೆದ ಕೆಲವು ದಿನಗಳಿಂದ ಕೇಳಿಬರುತ್ತಿವೆ. ಆದರೆ, ಅಂತಹ ಯಾವುದೇ ಪ್ರಯತ್ನ ಅಥವಾ ಯೋಜನೆಯನ್ನು ಕಾಂಗ್ರೆಸ್ ಮಾಡುತ್ತಿಲ್ಲವೆಂದು ಮಾಜಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದರು. ಆದರೆ, ಇದೀಗ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಬೆನ್ನಲ್ಲೇ ಮತ್ತೆ ಆಪರೇಷನ್ ಹಸ್ತದ ಚರ್ಚೆ ಮುನ್ನೆಲೆಗೆ ಬಂದಿದೆ. ಲಕ್ಷ್ಮಣ್ ಸವದಿ ಅವರು ಪರೋಕ್ಷವಾಗಿ ಅದರ ಸುಳಿವು ನೀಡಿದ್ದಾರೆ ಎನ್ನಲಾಗುತ್ತಿದೆ.
“ಲೋಕಸಭೆ ಚುನಾವಣೆ ವೇಳೆಗೆ ಹಲವರು ಕಾಂಗ್ರೆಸ್‌ಗೆ ಬರುತ್ತಾರೆ. ರಮೇಶ್ ಕತ್ತಿ ಕಾಂಗ್ರೆಸ್ ಸೇರುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಕಾಲ ಕೂಡಿ ಬಂದಾಗ ಎಲ್ಲವೂ ನಡೆಯುತ್ತವೆ” ಎಂದು ಅವರು ಹೇಳಿದ್ದಾರೆ.