‘ಕರ್ನಾಟಕ ಬಂದ್’ ಬಹುತೇಕ ಶಾಂತಿಯುತ: ಕೆಲವು ಜಿಲ್ಲೆಗಳಲ್ಲಿ ಮಿಶ್ರ ಪ್ರತಿಕ್ರಿಯೆ

Date:

Advertisements

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ವಿವಿಧ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ‘ಕರ್ನಾಟಕ ಬಂದ್’ ಶಾಂತಿಯುತವಾಗಿ ಮುಕ್ತಾಯಗೊಂಡಿದೆ. ಬೆಂಗಳೂರಿನ ಪುರಭವನ ಎದುರು ಬಿಎಂಟಿಸಿ ಬಸ್‌ ಗಾಜು ಒಡೆದ ಘಟನೆ ಹೊರತುಪಡಿಸಿದರೆ ಬಂದ್‌ ಬಹುತೇಕ ಶಾಂತಿಯುತವಾಗಿತ್ತು.

ಕಾವೇರಿ ಕಣಿವೆ ಭಾಗದ ಜಿಲ್ಲೆಗಳಲ್ಲಿ ಬಂದ್​ಗೆ ಉತ್ತಮ ವ್ಯಕ್ತವಾಗಿದ್ದರೆ, ಕಾವೇರಿಯ ಉಗಮ ಸ್ಥಾನವಾದ ಕೊಡಗು ಜಿಲ್ಲೆಗೆ ಬಂದ್‌ಗೆ ಬಿಸಿ ತಟ್ಟಿಲ್ಲ. ಅಲ್ಲದೆ, ಕೆಲವು ಜಿಲ್ಲೆಗಳಲ್ಲಿ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ರಾಜಧಾನಿ ಬೆಂಗಳೂರು ಸೇರಿದಂತೆ ಬಂದ್‌ಗೆ ಸಹಕಾರ ನೀಡಿದ ಜಿಲ್ಲೆಗಳಲ್ಲಿ ಅಗತ್ಯ ಸೇವೆ ಬಿಟ್ಟು ಉಳಿದೆಲ್ಲವೂ ಬಹುತೇಕ ಬಂದ್ ಆಗಿದ್ದವು, ಕರ್ನಾಟಕ ಬಂದ್​ಗೆ ಸುಮಾರು ಎರಡು ಸಾವಿರ ಸಂಘಟನೆಗಳ ಸಾಥ್ ನೀಡಿದ್ದವು. ಹೋಟೆಲ್, ಮಾಲ್, ಚಲನಚಿತ್ರ ಮಂದಿರಗಳು ಸೇರಿದಂತೆ ವಾಣಿಜ್ಯ ಮಳಿಗೆಗಳು ಬಂದ್ ಆಗಿದ್ದವು.

Advertisements

ಬೆಂಗಳೂರಿನಲ್ಲಿ ಸಿನಿಮಾ ನಟರು, ನಿರ್ಮಾಪಕರು ಹಾಗೂ ತಂತ್ರಜ್ಞರು ಕಾವೇರಿಗಾಗಿ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಹೋರಾಟಕ್ಕೆ ತಮ್ಮ ಬೆಂಬಲ ವ್ಯಕ್ತಪಡಿಸಿದರು. ಇದೇ ವೇಳೆ ನಟ ಶಿವರಾಜ್‌ಕುಮಾರ್ ಅವರು ತಮಿಳು ನಟ ಸಿದ್ದಾರ್ಥ್‌ ಅವರನ್ನು ಕ್ಷಮೆಯೂ ಕೇಳಿದರು.

ಬಂದ್‌ಗೆ ಕರೆ ಕೊಟ್ಟಿದ್ದ ಸಂಘಟಕರಲ್ಲೊರ್ವರಾದ ಕನ್ನಡ ಚಳವಳಿ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ಖಾಲಿ ಕೊಡ ಹಿಡಿದು, ಬುರ್ಖಾ ಧರಿಸಿ ಪ್ರತಿಭಟಿಸಿ, ಗಮನ ಸೆಳೆದಿದ್ದಾರೆ.

ಬೆಂಗಳೂರು, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಹಾಸನ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಪ್ರತಿಭಟನೆಗೆ ಭಾರೀ ಬೆಂಬಲ ವ್ಯಕ್ತವಾಯಿತು. ವಿವಿಧ ಸಂಘಟನೆಗಳು ಬೀದಿಗಿಳಿದು ತಮ್ಮ ಆಕ್ರೋಶ ಹೊರಹಾಕಿದರು. ಖಾಲಿ ಕೊಡ ಹಿಡಿದು, ಉರುಳು ಸೇವೆ ಮಾಡಿ, ಸಂಸದ ಅಣಕು ಶವಯಾತ್ರೆ ನಡೆಸಿ, ತಮಿಳು ಸಿನಿಮಾಗಳ ಪೋಸ್ಟರ್ ಹರಿದು ಪ್ರತಿಭಟನೆ ನಡೆಸಿದರು.

ಬೆಂಗಳೂರಿನಲ್ಲಿ ಮೆಟ್ರೊ ಸಂಚಾರ ಎಂದಿನಂತೆಯೇ ಇತ್ತು. ಬಿಎಂಟಿಸಿ ಸಂಚಾರ ಇತ್ತಾದರೂ ಎರಡು ಸಾವಿರಕ್ಕೂ ಹೆಚ್ಚು ಟ್ರಪ್‌ಗಳು ನಡೆಯಲಿಲ್ಲ. ವಿಮಾನ ನಿಲ್ದಾಣದಲ್ಲೂ ಪ್ರತಿಭಟನೆ ನಡೆಯಿತು. ಜತೆಗೆ ಅಲ್ಲಿಗೆ ಹೋಗಲು ಪ್ರಯಾಣಿಕರಿಗೆ ವಾಹನ ಸೌಕರ್ಯ ಇಲ್ಲದ ಕಾರಣ 44 ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿತ್ತು.

ಕಳೆದ ಮಂಗಳವಾರ ಬೆಂಗಳೂರು ಬಂದ್, ಇಂದು ( ಸೆ29) ಕರ್ನಾಟಕ ಬಂದ್​ಗೆ ವಿವಿಧ ಸಂಘಟನೆಗಳು ಕರೆ ನೀಡಿದ್ದವು. ಬಿಜೆಪಿ ಮತ್ತು ಜೆಡಿಎಸ್ ಈ ಬಂದ್​ಗೆ ಬಾಹ್ಯ ಬೆಂಬಲವನ್ನು ನೀಡಿದ್ದವು.

ಎರಡೆರಡು ಬಂದ್ ನಡೆದರು ಕೂಡ ಕರ್ನಾಟಕದ ಸಂಕಷ್ಟ ಮುಗಿಯಲಿಲ್ಲ. ಅಕ್ಟೋಬರ್ 15ರವರೆಗೆ ಪ್ರತಿ ದಿನ 3000 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸೂಚನೆ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X