ಕಾವೇರಿ ನೀರು ಹಂಚಿಕೆಯಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಖಂಡಿಸಿ ಕನ್ನಡಪರ ಸಂಘಟನೆ ಕಾರ್ಯಕರ್ತರು ರಾಯಚೂರು ನಗರದ ಗ್ರಾಮದೇವತೆ ಕಂದುಗಡ್ಡೆ ಮಾರಮ್ಮದೇವಿಗೆ ಪೂಜೆ ಸಲ್ಲಿಸಿ ವಿನೂತನ ಪ್ರತಿಭಟನೆ ನಡೆಸಿದ್ದಾರೆ.
ಕಾವೇರಿಗೆ ನೀರು ಹಂಚಿಕೆ ಅನ್ಯಾಯ ಖಂಡಿಸಿ ಶುಕ್ರವಾರ ಕರ್ನಾಟಕ ಬಂದ್ ಮಾಡಲಾಗಿತ್ತು. ಬಂದ್‌ಗೆ ಬೆಂಬಲ ನೀಡಿ ಪ್ರತಿಭಟನೆ ನಡೆಸಿರುವ ಪ್ರತಿಭಟನಾಕಾರರು ಮಾರಮ್ಮದೇವಿಗೆ ಪೂಜೆ ಸಲ್ಲಿಸಿದ್ದಾರೆ.
“ಕಾವೇರಿ ನೀರು ನಿಯಂತ್ರಣ ಸಮಿತಿ ಅಕ್ಟೋಬರ್ 15ರವರೆಗೆ ಪ್ರತಿದಿನ 3,000 ಕ್ಯೂಸೆಕ್ ನೀರು ಹರಿಸುವಂತೆ ಆದೇಶಿಸಿರುವುದು ರಾಜ್ಯದ ರೈತರಿಗೆ ಮರಣ ಶಾಸನವಾಗಿದೆ. ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ಜಲಾಶಯಗಳು ಬರಿದಾಗಿದ್ದು, ತಮಿಳುನಾಡಿಗೆ ನೀರು ಹರಿಸುವ ಪರಸ್ಥಿತಿಯಿಲ್ಲ. ರಾಜ್ಯದ ರೈತರನ್ನು ರಕ್ಷಿಸಬೇಕು” ಎಂದು ಪೂಜೆ ಸಲ್ಲಿಸಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕೂಡಲೇ ಮಧ್ಯಸ್ಥಿಕೆ ವಹಿಸಿ ರಾಜ್ಯಕ್ಕೆ ನ್ಯಾಯ ಕೊಡಿಸಬೇಕು. ಕನ್ನಡಿಗರ ರಕ್ಷಣೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮುಂದಾಗಬೇಕು” ಎಂದು ಆಗ್ರಹಿಸಿದರು.
ಈ ಸುದ್ದಿ ಓದಿದ್ದೀರಾ? ಬೀದರ್ | ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಸರ್ಕಾರದ ಹಸ್ತಕ್ಷೇಪ: ಉಮಾಕಾಂತ ನಾಗಮಾರಪಳ್ಳಿ
ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ(ಶಿವರಾಮೇಗೌಡ) ಜಿಲ್ಲಾಧ್ಯಕ್ಷ ಅಶೋಕ ಕುಮಾರ ಜೈನ್, ಕರ್ನಾಟಕ ರಣಧೀರ ಪಡೆಯ ಜಿಲ್ಲಾಧ್ಯಕ್ಷ ರಮೇಶ, ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ವೆಂಕಟಗಿರಿ ಸಾಗರ, ವೆಂಕಟೇಶ ಯರಮರಸ್, ಮಲ್ಲಿಕಾರ್ಜುನ, ಸಂಗಮೇಶ, ಕಿಶನರಾವ್, ಆಸೀಫ್, ಅಜೀಜ್, ನಾಗರಾಜ, ಸುದರ್ಶನ, ವೀರನಗೌಡ, ಮಲ್ಲಿಕಾರ್ಜುನ ತಾತ, ನರಸಿಂಹಲು, ಸಂಜಯ, ವೈಷ್ಣವ್, ಬನದಯ್ಯಸ್ವಾಮಿ, ಮೌನೇಶ, ದೀನೇಶ ಚೌದ್ರಿ, ಆಕಾಶ, ಭೀಮೇಷ, ವೀರೇಶ ಏಗನೂರು ಸೇರಿದಂತೆ ಬಹುತೇಕರು ಇದ್ದರು.
ವರದಿ : ಹಫೀಜುಲ್ಲ, ಸಿಟಿಜನ್ ಜರ್ನಲಿಸ್ಟ್, ರಾಯಚೂರು