ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ : ಹಿಂದೂ ಸಂಘಟನೆ ಕಾರ್ಯಕರ್ತನ ಬಂಧನ

Date:

Advertisements

ಸಾಹಿತಿಗಳಿಗೆ ಅನಾಮಧೇಯ ಪತ್ರದ ಮೂಲಕ ಜೀವ ಬೆದರಿಕೆ ಪತ್ರ ಕಳುಹಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ದಾವಣಗೆರೆಯ ಮೂಲದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.

ಪತ್ರ ಬರೆಯುತ್ತಿದ್ದ ಹಿಂದೂ ಸಂಘಟನೆ ಕಾರ್ಯಕರ್ತ ಶಿವಾಜಿ ರಾವ್‌ ಜಾಧವ್ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ.

ಸುಮಾರು ಎರಡು ವರ್ಷಗಳಿಂದ ಕೊಲೆ ಬೆದರಿಕೆ ಪತ್ರ ಬರೆಯುತ್ತಿದ್ದ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಸಿಸಿಬಿ ಎಸಿಪಿ ನವೀನ್ ಕುಲಕರ್ಣಿ ಮತ್ತು ತಂಡ ದಾವಣಗೆರೆಯಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

Advertisements

ದಾವಣಗೆರೆ ಸೇರಿದಂತೆ ಕೆಲವೆಡೆ ಕಾರ್ಯಾಚರಣೆ ನಡೆಸಿದ ಸಿಸಿಬಿ, ಪತ್ರ ಬರೆದಿರುವ ಶಂಕೆಯ ಮೇರೆಗೆ 8 ಮಂದಿಯನ್ನು ವಶಕ್ಕೆ ಪಡೆದಿತ್ತು. ಈ ಪೈಕಿ ಶಿವಾಜಿ ರಾವ್‌ ಜಾಧವ್ ಮೇಲೆ ಸಿಸಿಬಿಗೆ ಪ್ರಬಲ ಗುಮಾನಿ ವ್ಯಕ್ತವಾಗಿತ್ತು.

ಖ್ಯಾತ ಸಾಹಿತಿಗಳಾದ ಕುಂ.ವೀರಭದ್ರಪ್ಪ, ಬಂಜಗೆರೆ ಜಯಪ್ರಕಾಶ್, ಬಿ.ಎಲ್.ವೇಣು, ಬಿ.ಟಿ.ಲಲಿತಾ ನಾಯಕ್‌, ವಸುಂಧರ ಭೂಪತಿ ಸೇರಿದಂತೆ ಕೆಲವು ಸ್ವಾಮೀಜಿಗಳಿಗೆ ಅನಾಮಧೇಯ ಹೆಸರಿನಲ್ಲಿ ಜೀವ ಬೆದರಿಕೆ ಪತ್ರಗಳು ಬಂದಿದ್ದವು. ಈ ಪತ್ರಗಳನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರವು, ಇದರ ಹಿಂದಿರುವವರನ್ನು ಪತ್ತೆ ಹಚ್ಚಲು ಸಿಸಿಬಿಗೆ ತನಿಖೆಗೆ ವಹಿಸಿತ್ತು.

ಪತ್ರಗಳು ನಿರಂತರವಾಗಿ ಬರುತ್ತಿದ್ದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಏಳು ಕಡೆಗಳಲ್ಲಿ ಎಫ್‌ಐಆರ್ ದಾಖಲಾಗಿತ್ತು.

ಬರವಣಿಗೆ ಹೋಲಿಕೆ?
ಈ ಸಾಹಿತಿಗಳಿಗೆ ಓರ್ವ ವ್ಯಕ್ತಿಯಿಂದಲೇ ಪತ್ರ ಬಂದಿರುವ ಬಗ್ಗೆ ಸಿಸಿಬಿ ಅನುಮಾನ ವ್ಯಕ್ತಪಡಿಸಿ, ಈ ಆಧಾರದ ಮೇರೆಗೆ ಪತ್ರ ಬರೆದ ಶಿವಾಜಿ ರಾವ್‌ನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X