ಗದಗ | ಜನತಾದರ್ಶನ: ವೃದ್ಧೆಗೆ ಆಧಾರ್ ಕಾರ್ಡ್, ಮಾಸಾಶನ ಆದೇಶ ಪತ್ರ ವಿತರಣೆ

Date:

Advertisements

ಶತಾಯುಷಿ ವೃದ್ಧೆಯೊಬ್ಬರು ಆಧಾರ್ ಕಾರ್ಡ್‌ ಇಲ್ಲದ ಕಾರಣ, ಮಾಸಾಶನ ಪಡೆಯಲು ಸಾಧ್ಯವಾಗಿರಲಿಲ್ಲ. ಅವರಿಗೆ ಗದಗದಲ್ಲಿ ನಡೆದ ಜಿಲ್ಲಾಮಟ್ಟದ ಜನತಾ ದರ್ಶನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ ಪಾಟೀಲ್‌ ಅವರು ಆಧಾರ್ ಮಾಡಿಸಿ ಕೊಟ್ಟಿದ್ದು, ಮಾಸಾಶನದ ಆದೇಶ ಪತ್ರಿಯನ್ನೂ ನೀಡಿದ್ದಾರೆ.

ಶನಿವಾರ, ಗದಗ ಜಿಲ್ಲಾಡಳಿತ ಭವನದ ಎದುರು ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಅಲ್ಲಿಗೆ ಬಂದಿfದ, ಗದಗ-ಬೆಟಗೇರಿಯ ಹೆಲ್ತ್‌ಕ್ಯಾಂಪ್ ನಿವಾಸಿ ಕಮಲಾಬಾಯಿ ಹನುಮಂತಭಟ್ ಜೋಶಿ ಅವರು ಶತಾಯುಷಿಯಾಗಿದ್ದರೂ ಆಧಾರ್ ಕಾರ್ಡ್ ಹೊಂದಿರಲಿಲ್ಲ. ಮಾಸಿಕವಾಗಿ ಬರುತ್ತಿದ್ದ ಮಾಸಾಶನವೂ ಸ್ಥಗಿತವಾಗಿ ಸಂಕಷ್ಟ ಅನುಭವಿಸುತ್ತಿದ್ದರು. ಜನತಾ ದರ್ಶನದಲ್ಲಿ ಸಮಸ್ಯೆ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಿದ್ದರು. ವೃದ್ಧೆಯು ಸಲ್ಲಿಸಿದ ಅರ್ಜಿಯನ್ನು ಮೊದಲ ಆದ್ಯತೆಯಾಗಿ ಪರಿಗಣಿಸಿದ ಸಚಿವರು ಆಧಾರ್ ಕಾರ್ಡ್ ಜೊತೆಗೆ ಮಾಸಾಶನ ಆದೇಶ ಪತ್ರ ವಿತರಿಸಿದ್ದಾರೆ.

ಸಮಸ್ಯೆ ಪರಿಹಾರವಾದ ಬಗ್ಗೆ ವೃದ್ಧೆ ಕಮಲಾಬಾಯಿ ಸಂತಸ ವ್ಯಕ್ತಪಡಿಸಿದ್ದು, “ಆಧಾರ್ ನೋಂದಣಿ ಕೇಂದ್ರದಲ್ಲಿ‌ ತಮ್ಮ ಬೆರಳಚ್ಚು ಗುರುತು ಸ್ವೀಕೃತವಾಗದ ಕಾರಣ ಈವರೆಗೆ ಆಧಾರ್ ಕಾರ್ಡ್ ಬಂದಿರಲಿಲ್ಲ. ಆಧಾರ್ ಕಾರ್ಡ್ ಇಲ್ಲದೆ ಕಳೆದ ಒಂದೂವರೆ ವರ್ಷದಿಂದ ಮಾಸಾಶನ ಸ್ಥಗಿತವಾಗಿತ್ತು. ಜನತಾದರ್ಶನ ಮೂಲಕ ಸಮಸ್ಯೆ ಸರಿಪಡಿಸಲಾಗಿದೆ” ಎಂದು ಸಚಿವರಿಗೆ ಧನ್ಯವಾದ ತಿಳಿಸಿದ್ದಾರೆ.

Advertisements

ಅಲ್ಲದೆ, ಮಾಸಾಶನ, ಮನೆ ಮಂಜೂರಾತಿ, ವಿಧವಾ ವೇತನ, ಭೂ ದಾಖಲಾತಿ ಸೇರಿದಂತೆ ಹಲವು ಸಮಸ್ಯೆಗಳನ್ನು ಹೊತ್ತು ಬಂದ ಕೆಲ ಸಾರ್ವಜನಿಕರಿಗೆ ಸ್ಥಳದಲ್ಲೇ ಪರಿಹಾರ ಒದಗಿಲಾಗಿದೆ. ಇನ್ನೂ ಕೆಲವರಿಗೆ ಸಮಯಾವಕಾಶ ನೀಡಿ ಸಮಸ್ಯೆಗಳನ್ನು ಪರಿಹರಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಶಿಕ್ಷಕರ ಸಂಘರ್ಷ; ಶಾಲೆಗೆ ಬೀಗ ಜಡಿದು ಪ್ರತಿಭಟನೆ

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಿ. ಶಿಖಾ, ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ ಎಸ್ ನೇಮಗೌಡ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ ಸೇರಿದಂತೆ ಹಲವು ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X