ರಾಜಸ್ಥಾನ | ಬೈಕ್ ಅಪಘಾತ : ಮುಸ್ಲಿಂ ಎನ್ನುವ ಕಾರಣಕ್ಕೆ ಯುವಕನನ್ನು ಬಡಿದುಕೊಂದ ಗುಂಪು

Date:

Advertisements

ಎರಡು ಬೈಕ್ ಪರಸ್ಪರ ಅಪಘಾತವಾದ ಬಳಿಕ ಮುಸ್ಲಿಂ ಯುವಕನೋರ್ವನನ್ನು ಗುಂಪೊಂದು ದೊಣ್ಣೆ ಹಾಗೂ ರಾಡ್‌ಗಳಿಂದ ಬಡಿದು ಕೊಂದಿರುವ ದಾರುಣ ಘಟನೆ ರಾಜಸ್ಥಾನದ ಜೈಪುರದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.

ಹಲ್ಲೆಗೊಳಗಾಗಿ ಮೃತಪಟ್ಟ ಮುಸ್ಲಿಂ ಯುವಕನನ್ನು ಜೈಪುರದ ರಾಮಗಂಜ್ ಬಜಾರ್‌ನ ಮುಹಮ್ಮದ್ ಮಜೀದ್ ಎಂಬವರ ಪುತ್ರ ಮುಹಮ್ಮದ್ ಇಕ್ಬಾಲ್(18) ಎಂದು ಗುರುತಿಸಲಾಗಿದೆ.

ಅಪಘಾತ ಬಳಿಕ ಉಂಟಾದ ವಾಗ್ವಾದದ ಬಳಿಕ ಗುಂಪಿನಲ್ಲಿ ಬಂದ ಜನರು, ಹತ್ಯೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

Advertisements

ಕುಟುಂಬದವರ ನೀಡಿರುವ ಮಾಹಿತಿಯ ಪ್ರಕಾರ, ಮೃತ ಇಕ್ಬಾಲ್ ತನ್ನ ಅಜ್ಜಿ ಮನೆಯಿಂದ ಹಿಂದಿರುಗುತ್ತಿದ್ದಾಗ ಅಪಘಾತವಾಗಿದೆ. ಈ ವೇಳೆ ಆತನ ಹೆಸರನ್ನು ಕೇಳಿದ ನಂತರ ಆತನ ಮೇಲೆ ದೊಣ್ಣೆ ಮತ್ತು ರಾಡ್‌ಗಳಿಂದ ಗುಂಪಿನಲ್ಲಿ ಬಂದ ಜನರು ಹೊಡೆದು ಕೊಂದಿರುವುದಾಗಿ ತಿಳಿಸಿದ್ದಾರೆ.

ಹಲ್ಲೆ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಗುಂಪಿನಲ್ಲಿ ಮಹಿಳೆಯರು ಕೂಡ ಇದ್ದರು ಎಂದು ವರದಿಯಾಗಿದೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಬೈಕ್ ಅಪಘಾತವಾಗಿತ್ತು. ಈ ವೇಳೆ ಜಗಳ ನಡೆದಿದ್ದು, ಆಗ ಸ್ಥಳಕ್ಕೆ ಬಂದ ಕೆಲವು ವ್ಯಕ್ತಿಗಳು ಇಕ್ಬಾಲ್ ಅವರ ಮೇಲೆ ದೊಣ್ಣೆ ಮತ್ತು ರಾಡ್‌ಗಳಿಂದ ಹಲ್ಲೆ ನಡೆಸಿದ್ದಾರೆ. ಇದರಿಂದಾಗಿ ಅವರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಘಟನೆಯ ಸಂಬಂಧ ಮಾಹಿತಿ ಕಲೆ ಹಾಕಿ ಕೆಲ ಶಂಕಿತರನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಚಿವ ಕೆ ಎನ್ ರಾಜಣ್ಣ ರಾಜೀನಾಮೆ ನೀಡಿಲ್ಲ, ಬದಲಿಗೆ ಸಂಪುಟದಿಂದ ಉಚ್ಚಾಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರಿಗೆ...

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X