ಯಾದಗಿರಿ | ಕಾರ್ಮಿಕರ ಸಂಖ್ಯೆ ಕಡಿತಗೊಳಿಸುವ ಆದೇಶ ಹಿಂಪಡೆಯಲು ಆಗ್ರಹ

Date:

Advertisements

ಸಮಾಜ ಕಲ್ಯಾಣ ಇಲಾಖೆಯಿಂದ ಇತ್ತೀಚೆಗೆ ಉಲ್ಲೇಖಿತ ಸುತ್ತೋಲೆಯಲ್ಲಿ ಹಾಸ್ಟೆಲ್ ಹೊರಗುತ್ತಿಗೆ ಕಾರ್ಮಿಕರ ಸಂಖ್ಯೆಯನ್ನು ಕಡಿತಗೊಳಿಸಬೇಕೆಂದು ಹೊರಡಿಸಿರುವ ಆದೇಶವನ್ನು ಹಿಂಪಡೆಯಬೇಕು ಎಂದು ಕರ್ನಾಟಕ ರಾಜ್ಯ ಸಂಯುಕ್ತ ವಸತಿನಿಲಯ ಕಾರ್ಮಿಕರ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡಸಿದ್ದಾರೆ.

ಯಾದಗಿರಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ಹಲವಾರು ವರ್ಷಗಳಿಂದ ಕನಿಷ್ಠ ವೇತನಕ್ಕೆ ಅಡುಗೆ, ಅಡಿಗೆ ಸಹಾಯಕ, ರಾತ್ರಿ ಕಾವಲುಗಾರರಾಗಿ ಹೊರಗುತ್ತಿಗೆ ಆಧಾರದ ಮೇಲೆ ಮಹತ್ವದ ಸೇವೆ ಸಲ್ಲಿಸುತ್ತಿರುವ ಹಾಸ್ಟೆಲ್ ಕಾರ್ಮಿಕರಿಗೆ ಈ ಸುತ್ತೋಲೆಯ ಆದೇಶದಿಂದ ಅನ್ಯಾಯವಾಗಲಿದೆ. ಇಪಿಎಫ್ ಮತ್ತು ಇಎಸ್‌ಐ ಸೌಲಭ್ಯ ಸಮರ್ಪಕವಾಗಿ ಪಡೆಯದಿದ್ದರೂ ಕಾರ್ಮಿಕರು ಹಲವಾರು ತೊಂದರೆಗಳನ್ನು ಅನುಭವಿಸುತ್ತಾ ಇಲಾಖೆಯ ಹಾಸ್ಟೆಲ್‌ಗಳಲ್ಲಿ, ಅಡುಗೆ, ವಸತಿ ನಿಲಯ ಸ್ವಚ್ಛತೆ, ಸುರಕ್ಷತೆ ಸೇರಿದಂತೆ ಮಕ್ಕಳ ಉತ್ತಮ ವಿದ್ಯಾಭ್ಯಾಸಕ್ಕೆ ಪೂರಕ ವಾತಾವರಣ ಸೃಷ್ಟಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಪ್ರಸ್ತುತ ಪರಿಸ್ಥಿತಿ ನೋಡುವುದಾದರೆ ಕಲ್ಯಾಣ ಕರ್ನಾಟಕದಂತದ ನಮ್ಮ ಭಾಗದಲ್ಲಿ ರೊಟ್ಟಿ ಮತ್ತು ಚಪಾತಿ ತಟ್ಟುವುದು ಅತ್ಯಂತ ಕಠಿಣದ ಕೆಲಸವಾಗಿದೆ. ಒಬ್ಬ ಅಡುಗೆ ಸಿಬ್ಬಂದಿ ಒಂದು ಊಟಕ್ಕೆ ತಲಾ ಒಬ್ಬರು ಒಂದುನೂರು ರೊಟ್ಟಿ, ಚಪಾತಿಗಳನ್ನು ತಟ್ಟುತ್ತಾ ಬರುತ್ತಿದ್ದಾರೆ. ಇದರ ಜೊತೆಗೆ ಸ್ವಚ್ಛತೆ ಸೇರಿದಂತೆ ಹಲವು ಕೆಲಸಗಳು ಇವರ ಹೆಗಲ ಮೇಲೆಯೇ ಇವೆ. ಆದ್ದರಿಂದ ಕಾರ್ಮಿಕರ ಪರಿಶ್ರಮ ಪರಿಗಣಿಸಿ, ಅವರಿಗಿದ್ದ ಕೆಲಸದ ಹೊರೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಹೆಚ್ಚುವರಿ ಸಿಬ್ಬಂದಿ ನೇಮಕಕ್ಕೆ ಆದೇಶ ಹೊರಡಿಸಿರುವುದು ಈ ಘಳಿಗೆಯ ಅವಶ್ಯವಾಗಿತ್ತು. ಹೀಗೆ ಮಾಡುವ ಮೂಲಕ ಸರ್ಕಾರ ಮಾದರಿ ಮಾಲೀಕನಾಗಬೇಕಿತ್ತು. ಆದರೆ ಇದಕ್ಕೆ ವಿರುದ್ಧವಾಗಿ ಕಾರ್ಮಿಕರನ್ನು ಕಡಿತ ಮಾಡಬೇಕೆನ್ನುವ ಸರ್ಕಾರದ ಕ್ರಮ ಅತ್ಯಂತ ಕಾರ್ಮಿಕ ವಿರೋಧಿಯಾಗಿದೆ” ಎಂದು ಆರೋಪಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಬೀದರ್‌ | ಸಣ್ಣ ಕೈಗಾರಿಕೆಗಳು ಉದ್ಯೋಗ ಸೃಷ್ಠಿಸುವಲ್ಲಿ ಪ್ರಮುಖ ಪಾತ್ರ ವಹಿಸಿವೆ : ಸಚಿವ ಶರಣಬಸಪ್ಪ ದರ್ಶನಾಪೂರ

“ಕಾರ್ಮಿಕರ ಸಂಖ್ಯೆ ಕಡಿಮೆ ಮಾಡಿ ಎಂದು ಹೊರಡಿಸಿರುವ ಆದೇಶವನ್ನು ಹಿಂಪಡೆದು, ಹಲವು ವರ್ಷಗಳಿಂದ ಸೇವೆ ಸಲ್ಲಿಸಿರುವ ಕಾರ್ಮಿಕರನ್ನು ಅವರವರ ಹುದ್ದೆಗಳಲ್ಲೇ ಸೇವೆಯಲ್ಲಿ ಮುಂದುವರಿಸುವಂತೆ ತುರ್ತು ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಈ ನಿಯೋಗದಲ್ಲಿ ಎಐಯುಟಿಯುಸಿ ಜಿಲ್ಲಾಧ್ಯಕ್ಷೆ ಡಿ ಉಮಾದೇವಿ, ಸಂಘದ ಜಿಲ್ಲಾಧ್ಯಕ್ಷ ಶರಣಪ್ಪ ಜಿ ತೆಳಿಗೇರಿಕರ್, ಉಪಾಧ್ಯಕ್ಷ ತಾಜುದ್ಧೀನ್, ಪದಾಧಿಕಾರಿಗಳಾದ ಶ್ರೀಕಾಂತ್ ಚಿಕ್ಕಮೇಟಿ, ಭೀಮಶಂಕರ್, ಜಗದೇವಿ, ಸರಿತಾ, ಮಮ್ಮಾದೇವಿ, ನಿಂಗಮ್ಮ, ಲಕ್ಷ್ಮೀ ಕಟ್ಟಿಮನಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X