ಇಂದಿನಿಂದ ಭಾರತದಲ್ಲಿನ ಅಫ್ಘಾನಿಸ್ತಾನ ರಾಯಭಾರ ಕಚೇರಿ ಕಾರ್ಯಾಚರಣೆ ಸ್ಥಗಿತ

Date:

Advertisements
  • ಭಾರತ ಸರ್ಕಾರವು ಸರಿಯಾದ ಬೆಂಬಲ ನೀಡುತ್ತಿಲ್ಲ ಎಂದು ಆರೋಪಿಸಿದ ರಾಯಭಾರ ಕಚೇರಿ
  • ಸಾಕಷ್ಟು ಪ್ರಮಾಣದಲ್ಲಿ ಸಿಬ್ಬಂದಿ ಹಾಗೂ ಸಂಪನ್ಮೂಲಗಳ ಲಭ್ಯತೆ ಇಲ್ಲ’ ಎಂದ ಅಧಿಕಾರಿಗಳು

ಭಾರತದಲ್ಲಿ ಕಾರ್ಯಾಚರಿಸುತ್ತಿದ್ದ ಅಫ್ಘಾನಿಸ್ತಾನ ರಾಯಭಾರ ಕಚೇರಿಯು ಅ.1ರ ಭಾನುವಾರದಿಂದ ತನ್ನ ಕಾರ್ಯಾಚರಣೆ ಸ್ಥಗಿತಗೊಳಿಸುವುದಾಗಿ ಪ್ರಕಟಿಸಿದೆ.

ಮುಚ್ಚಲು ನಿರ್ಧರಿಸಿರುವ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅಫ್ಘಾನಿಸ್ತಾನ ರಾಯಭಾರ ಕಚೇರಿಯ ಅಧಿಕಾರಿಗಳು, ಭಾರತ ಸರ್ಕಾರದಿಂದ ಸಾಕಷ್ಟು ಬೆಂಬಲ ಸಿಗುತ್ತಿಲ್ಲ ಎಂದು ಆರೋಪಿಸಿದ್ದಾರೆ.

“ಅಫ್ಘಾನಿಸ್ತಾನದ ಹಿತಾಸಕ್ತಿಗಳನ್ನು ಪೂರೈಸುವ ನಿರೀಕ್ಷೆಯನ್ನು ನಮಗೆ ತಲುಪಲು ಸಾಧ್ಯವಾಗುತ್ತಿಲ್ಲ. ಜೊತೆಗೆ ರಾಯಭಾರ ಕಚೇರಿಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಸಿಬ್ಬಂದಿ ಹಾಗೂ ಸಂಪನ್ಮೂಲಗಳ ಲಭ್ಯತೆ ಇಲ್ಲ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಿದೆ.

Advertisements

ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತ ಶುರುವಾಗುವುದಕ್ಕೂ ಮುಂಚೆ ಇದ್ದ ಅಶ್ರಫ್ ಘನಿ ಸರ್ಕಾರ ನೇಮಕ ಮಾಡಿದ್ದ ರಾಯಭಾರಿ ಫರೀದ್ ಮಮುಂಡ್‌ಜಾಯ್ ನೇತೃತ್ವದಲ್ಲಿ ರಾಯಭಾರ ಕಚೇರಿಯು ಕಾರ್ಯ ನಿರ್ವಹಣೆ ಮಾಡುತ್ತಿತ್ತು. 2021ರಲ್ಲಿ ತಾಲಿಬಾನ್ ಆಳ್ವಿಕೆ ಶುರುವಾದ ಬಳಿಕವೂ ಅದನ್ನು ಮುಂದುವರಿಸಲಾಗಿತ್ತು. ಈ ನಡುವೆ ಭಾರತದಲ್ಲಿನ ಅಫ್ಘಾನಿಸ್ತಾನ ರಾಯಭಾರ ಕಚೇರಿ ಇಂದಿನಿಂದ ತನ್ನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವುದಾಗಿ ಘೋಷಿಸಿದೆ.

ಅಫ್ಘಾನಿಸ್ತಾನ ಮತ್ತು ಭಾರತದ ನಡುವಿನ ದೀರ್ಘಕಾಲದ ಬಾಂಧವ್ಯ ಮತ್ತು ಸ್ನೇಹವನ್ನು ಪರಿಗಣಿಸಿ ಎಚ್ಚರಿಕೆಯಿಂದ ಯೋಚಿಸಿದ ನಂತರವೇ ಈ ಕಠಿಣ ನಿರ್ಧಾರವನ್ನು ತೆಗೆದುಕೊಂಡಿರುವುದಾಗಿ ಆಫ್ಘಾನಿಸ್ತಾನ ರಾಯಭಾರ ಕಚೇರಿ ತಿಳಿಸಿದೆ.

“ನವದೆಹಲಿಯಲ್ಲಿರುವ ಅಫ್ಘಾನಿಸ್ತಾನದ ರಾಯಭಾರ ಕಚೇರಿಯು ತನ್ನ ಕಾರ್ಯಾಚರಣೆಯನ್ನು ನಿಲ್ಲಿಸುವ ಈ ನಿರ್ಧಾರವನ್ನು ಪ್ರಕಟಿಸಲು ಆಳವಾದ ದುಃಖ, ವಿಷಾದ ಮತ್ತು ನಿರಾಶೆಯಾಗಿದೆ” ಎಂದು ರಾಯಭಾರ ಕಚೇರಿಯ ಅಧಿಕಾರಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

‘ನಮ್ಮ ನ್ಯೂನತೆಗಳನ್ನು ನಾವು ಒಪ್ಪಿಕೊಳ್ಳುತ್ತೇವೆ’ ಎಂದಿರುವ ರಾಯಭಾರ ಕಚೇರಿಯು, ಭಾರತದ ಅಸಹಕಾರವಲ್ಲದೆ, ಇನ್ನಿತರ ಕೆಲವು ಅಂಶಗಳನ್ನುಕೂಡ ಪಟ್ಟಿ ಮಾಡಿದೆ.

“ಭಾರತದಲ್ಲಿ ರಾಜತಾಂತ್ರಿಕ ಬೆಂಬಲದ ಕೊರತೆ ಮತ್ತು ಕಾಬೂಲ್‌ನಲ್ಲಿ ಕಾನೂನುಬದ್ಧವಾಗಿ ಕಾರ್ಯನಿರ್ವಹಿಸುವ ಸರ್ಕಾರದ ಅನುಪಸ್ಥಿತಿಯಿಂದಾಗಿ ಅಫ್ಘಾನಿಸ್ತಾನ ಮತ್ತು ಅದರ ನಾಗರಿಕರ ಉತ್ತಮ ಹಿತಾಸಕ್ತಿಗಳನ್ನು ಪೂರೈಸಲು ಅಗತ್ಯವಾದ ನಿರೀಕ್ಷೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸುವಲ್ಲಿ ನಮ್ಮ ನ್ಯೂನತೆಗಳನ್ನು ನಾವು ಒಪ್ಪಿಕೊಳ್ಳುತ್ತೇವೆ” ಎಂದು ರಾಯಭಾರ ಕಚೇರಿ ಹೇಳಿಕೆಯಲ್ಲಿ ತಿಳಿಸಲಾಗಿದೆ.

“ಅಫ್ಘಾನಿಸ್ತಾನ ಹಾಗೂ ಅದರ ನಾಗರಿಕರ ಹಿತಾಸಕ್ತಿಗೆ ಅನುಗುಣವಾಗಿ ಅಗತ್ಯವಾದ ಕೆಲಸಗಳು ಹಾಗೂ ನಿರೀಕ್ಷೆಗಳನ್ನು ನಡೆಸುವುದು ನಮಗೆ ಸಾಧ್ಯವಾಗುತ್ತಿಲ್ಲ ಎಂಬ ವೈಫಲ್ಯವನ್ನು ಕೂಡ ಒಪ್ಪಿಕೊಳ್ಳುತ್ತೇವೆ” ಎಂದು ಅಫ್ಘಾನಿಸ್ತಾನ ರಾಯಭಾರ ಕಚೇರಿ ಹೇಳಿಕೆಯಲ್ಲಿ ಉಲ್ಲೇಖಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

ಬಿಹಾರದಲ್ಲಿ ಒಂದು ಮತವನ್ನೂ ಕದಿಯಲು ನಾವು ಬಿಡಲ್ಲ: ರಾಹುಲ್ ಗಾಂಧಿ

ಮತಗಳನ್ನು ಕದಿಯಲು ಚುನಾವಣಾ ಆಯೋಗ ಮತ್ತು ಬಿಜೆಪಿ ಪಾಲುದಾರಿಕೆ ಹೊಂದಿದೆ ಎಂದು...

Download Eedina App Android / iOS

X