ಬೆಂಗಳೂರಿನ ಆರ್‌ಆರ್ ನಗರದಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ. ಇದರಲ್ಲಿ ಆರ್‌ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಕೂಡ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಮುನಿರತ್ನ ವಿರುದ್ಧ ಯುವಕನೊಬ್ಬ ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.
ತಮ್ಮ ಕ್ಷೇತ್ರದಲ್ಲಿ ವಾರ್ಡ್ ಒಂದರಲ್ಲಿ 14 ಕೆ.ಜಿ ಗಾಂಜಾ ಮಾರಾಟವಾಗುತ್ತದೆ ಎಂದು ಇತ್ತೀಚೆಗೆ ಮುನಿರತ್ನ ಹೇಳಿದ್ದರು. ಅವರು ಬಹಿರಂಗವಾಗಿ ಹೇಳಿಕೆ ನೀಡಿದ ಬೆನ್ನಲ್ಲೇ, ಯುವಕ ಸಂತೋಷ್ ಎಂಬಾತ ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದಾನೆ. ಗಾಂಜಾ ಮಾರಾಟದ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾನೆ. ಆತನ ದೂರು ದಾಖಲಿಸಿಕೊಂಡಿರುವ ಸಿಸಿಬಿ ಪೊಲೀಸರು ತಿನಿಖೆ ನಡೆಸಲು ಮುಂದಾಗಿದ್ದಾರೆ ಎಂದು ಮಾಹಿತಿ ದೊರೆತಿದೆ.
ಈ ಹಿಂದೆ ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಆರೋಪ ಕೇಳಿಬಂದಿತ್ತು. ಸಚಿವರಾಗಿದ್ದಾಗ ಮುನಿರತ್ನ ಹನಿಟ್ರ್ಯಾಪ್ ಮಾಡಿಸುತ್ತಿದ್ದರು. ಅದಕ್ಕಾಗಿಯೇ ಸ್ಟುಡಿಯೋ ಇಟ್ಟುಕೊಂಡಿದ್ದಾರೆ. ಅವರು ಸಿನಿಮಾ ನಿರ್ಮಾಪಕರಲ್ಲವೇ. ಹೀಗಾಗಿ ಹನಿಟ್ರ್ಯಾಪ್ ಮಾಡಿಸಿ ಹೆದರಿಸುತ್ತಾರೆ ಎಂದು ಬಿಬಿಎಂಪಿ ಮಾಜಿ ಕಾರ್ಪೊರೇಟರ್ ವೇಲು ನಾಯ್ಕರ್ ಗಂಭೀರ ಆರೋಪ ಮಾಡಿದ್ದರು.