ಆರು ತಿಂಗಳಲ್ಲಿ ಕಾಂಗ್ರೆಸ್‌ ಸರ್ಕಾರ ಪತನ; ರಾಜಕೀಯ ಸಮರ ಸೃಷ್ಟಿಸಿದ ಎಚ್‌ಡಿಕೆ ಹೇಳಿಕೆ

Date:

Advertisements

ಇನ್ನು ಆರು ತಿಂಗಳಲ್ಲಿ ಕರ್ನಾಟಕ ಸರ್ಕಾರ ಪತನವಾಗಲಿದೆ ಎಂಬ ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆ ಜೆಡಿಎಸ್‌ ಮತ್ತು ಕಾಂಗ್ರೆಸ್ ನಡುವೆ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿದೆ.

ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, “ಕುಮಾರಸ್ವಾಮಿ ಅವರು ಕಾಂಗ್ರೆಸ್ ಸರ್ಕಾರದ ಭವಿಷ್ಯದ ಬಗ್ಗೆ ಚಿಂತಿಸುವುದನ್ನು ಬಿಟ್ಟು ತಮ್ಮ ಪಕ್ಷದ ಬಗ್ಗೆ ಯೋಚಿಸಬೇಕು” ಎಂದು ಹೇಳಿದ್ದಾರೆ.

“ಆರು ತಿಂಗಳಲ್ಲಿ ಸರ್ಕಾರ ಬೀಳುತ್ತದೆ ಎಂಬ ಹೇಳಿಕೆ ವಾರದ ಅತ್ಯುತ್ತಮ ಹಾಸ್ಯವಾಗಿದೆ. ಅವರು ನಮ್ಮ ಸರ್ಕಾರದ ಭವಿಷ್ಯದ ಬಗ್ಗೆ ಚಿಂತಿಸುವುದನ್ನು ಬಿಟ್ಟು, ಈಗಾಗಲೇ ಜನರ ಮನಸ್ಸಿನಿಂದ ಹೊರಹೋಗಿರುವ ಅವರ ಪಕ್ಷದ ಭವಿಷ್ಯದ ಬಗ್ಗೆ ಚಿಂತಿಸಲಿ” ಎಂದು ಗುಂಡೂರಾವ್ ಹೇಳಿದ್ದಾರೆ.

Advertisements

“‘ಅಧಿಕಾರವಿಲ್ಲದೆ ಅತೃಪ್ತ ಆತ್ಮವಾಗಿರೋ ಎಚ್‌.ಡಿ ಕುಮಾರಸ್ವಾಮಿ ಹತಾಶೆಯಿಂದ ಸರ್ಕಾರ ಬೀಳುವ ಕನಸು ಕಾಣುತ್ತಿದ್ದಾರೆ” ಎಂದು ವ್ಯಂಗ್ಯವಾಡಿದ್ದಾರೆ.

“ಸ್ಥಾಪಿತ ಸರ್ಕಾರವನ್ನು ಕೆಡವುವ ಕೆಟ್ಟ ಚಾಳಿ ಆರಂಭಿಸಿದ್ದೇ ಬಿಜೆಪಿ. ಸಹವಾಸ ದೋಷದಿಂದ ಸನ್ಯಾಸಿ ಕೆಟ್ಟ ಎಂಬಂತೆ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡ ತಕ್ಷಣವೆ ಕುಮಾರಸ್ವಾಮಿ ಅವರಿಗೂ ಆ ಚಾಳಿ ಅಂಟಿಕೊಂಡಂತಿದೆ. ಹೀಗಾಗಿ ಸರ್ಕಾರ ಬೀಳಿಸುವ ಮಾತನಾಡುತ್ತಿದ್ದಾರೆ. ಆದರೆ ಅದು ಸಾಧ್ಯವಾಗದ ಮಾತು‌. ಇದು ಕೊನೆಗೆ, ಸಿಗದ ದ್ರಾಕ್ಷಿ ಹುಳಿ ಎಂಬ ನರಿಯ ಕಥೆಯಂತಾಗುತ್ತದೆ” ಎಂದಿದ್ದಾರೆ.

“ಮುಂದಿನ ಲೋಕಸಭೆ ಚುನಾವಣೆಗ ಮುನ್ನ ಕಾಂಗ್ರೆಸ್ ನಾಯಕರನ್ನು ಭಯಭೀತಗೊಳಿಸಲು ಐಟಿ, ಇಡಿ, ಸಿಬಿಐ ಬಳಸಿಕೊಳ್ಳಲು ಕುಮಾರಸ್ವಾಮಿ ಅವರು ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರಬಹುದು” ಎಂದು ಆರ್‌ಡಿಪಿಆರ್ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.

“ಕಾಂಗ್ರೆಸ್ ಶಾಸಕರನ್ನು ಬೇಟೆಯಾಡಲು ‘ಆಪರೇಷನ್ ಕಮಲ’ ನಡೆಸಲು ಕುಮಾರಸ್ವಾಮಿ ಮತ್ತು ಬಿಜೆಪಿ ಚಿಂತನೆ ನಡೆಸುತ್ತಿದೆ” ಎಂದು ಪ್ರಿಯಾಂಕ್ ದೂರಿದ್ದಾರೆ.

ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಮಾತನಾಡಿ, “ಚುನಾಯಿತ ಸರ್ಕಾರಗಳ ದೀರ್ಘಾಯುಷ್ಯದ ಬಗ್ಗೆ ಭವಿಷ್ಯ ನುಡಿಯುವುದು ಕುಮಾರಸ್ವಾಮಿ ಅವರಿಗೆ ಹೊಸದೇನಲ್ಲ. ಏಕೆಂದರೆ ಯಾವುದೇ ಸರ್ಕಾರ ಪೂರ್ಣಾವಧಿಯನ್ನು ಪೂರ್ಣಗೊಳಿಸಲು ಅವರು ಬಯಸುವುದಿಲ್ಲ” ಎಂದು ಟೀಕಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

3 COMMENTS

  1. ಮೂರು ತಿಂಗಳ ಹಿಂದೆ ಕರ್ನಾಟಕದಲ್ಲಿ ವಿಧಾನ ಸಭೆಗೆ ಚುನಾವಣೆ ನಡೆಯಿತು. ಅನೇಕ ಜನ ರಾಜಕಾರಣಿಗಳು, ರಾಜಕೀಯ ವಿಷ್ಲೇಷಕರು, ಪ್ರಸಿದ್ಧ ಜ್ಯೋತಿಷಿಗಳು , ಸ್ವಾಮೀಜಿಗಳು ಫಲಿತಾಂಶ ಯಾವ ಪಕ್ಷದ ಪರವಾಗಿ ಬರಬಹುದು ಎಂಬುದರ ಬಗ್ಗೆ ಭವಿಷ್ಯ ನುಡಿದರು.

    ಉಡುಪಿ ಮೂಲದ ವೃತ್ತಿಪರ ಜ್ಯೋತಿಷಿಯೊಬ್ಬರು ಬಿಜೆಪಿಯ ಗೆಲುವು ನಿಶ್ಚಿತ ಎಂದು ಗಟ್ಟಿ ಧ್ವನಿಯಲ್ಲಿ ಹೇಳಿದರು. ಕರ್ನಾಟಕದ ಇನ್ನೊಬ್ಬ ವ್ಯಕ್ತಿ ಅದೇನೋ ಕೈಯಲ್ಲಿ ಎರಡು ಬೇರೆ ಬೇರೆ ವಿಧದ ವಸ್ತುಗಳನ್ನು ಹಿಡಿದು, ಅವುಗಳ ಮುಂದೆ ಪಕ್ಷಗಳ ಚಿಹ್ನೆಗಳನ್ನು ಸ್ಕ್ರೀನ್ ಮಾಡಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಭವಿಷ್ಯ ನುಡಿದರು.

    ಆದದ್ದಾದರೂ ಏನು ?

    ಬಿಜೆಪಿ ಸೋತಿತು. ಕಾಂಗ್ರೆಸ್ ಗೆದ್ದಿತು. ಭವಿಷ್ಯ ಸುಳ್ಳಾಯಿತು !

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X