ಕರ್ನಾಟಕದ ಹಲವೆಡೆ ಮಳೆ ಸೂಚನೆ; ಕರಾವಳಿ ಭಾಗದಲ್ಲಿ ಭಾರೀ ಮಳೆ

Date:

Advertisements

ಕರ್ನಾಟಕದ ಹಲವು ಭಾಗಗಳಲ್ಲಿ ಭಾನುವಾರ ಮಳೆಯಾಗಲಿದೆ. ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದೆ. ಈಗಾಗಲೇ ಸುರಲ್ಕತ್‌ ಸೇರಿದಂತೆ ಹಲವು ಕಡೆ ಬೆಳಿಗ್ಗೆಯಿಂದಲೇ ಮಳೆ ಸುರಿಯುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಬೆಂಗಳೂರು ಹವಾಮಾನ ಕೇಂದ್ರ ಮಾಹಿತಿ ನೀಡಿದೆ.

ಕೊಡಗು, ಚಿಕ್ಕಮಗಳೂರು, ಬೆಳಗಾವಿ, ಬೀದರ್‌, ಕಲಬುರಗಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸೂಚನೆಯನ್ನೂ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಶನಿವಾರವೂ ಕರ್ನಾಟಕದ ಹಲವು ಕಡೆ ಉತ್ತಮ ಮಳೆಯಾದ ವರದಿಗಳು ಬಂದಿದ್ದು, ಕೊಡಗಿನ ಹಲವು ಕಡೆಗಳಲ್ಲಿ ಮಳೆಯಾಗುತ್ತಿದೆ. ಕಾವೇರಿ ನದಿ ನೀರಿನ ಪ್ರಮಾಣದಲ್ಲಿ ಏರಿಕೆ ಕಂಡುಬಂದಿದೆ.

Advertisements

ಅಕ್ಟೋಬರ್‌ 2ರ ಸೋಮವಾರ ಬೆಳಿಗ್ಗೆವರೆಗೂ ಕರಾವಳಿಯ ಬಹುತೇಕ ಕಡೆಗಳಲ್ಲಿ ಮಳೆಯಾಗಲಿದೆ. ಅದರಲ್ಲೂ ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಕಡೆ ಭಾರೀ ಮಳೆಯಾಗಲಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಮುನ್ಸೂಚನೆ ಕಂಡುಬಂದಿದೆ.

ಉತ್ತರ ಒಳನಾಡಿನ ಬೆಳಗಾವಿ, ಬೀದರ್‌, ಕಲಬುರಗಿ ಜಿಲ್ಲೆಯಲ್ಲೂ ಮಳೆ ಸುರಿಸುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಈಗಾಗಲೇ ಮುನ್ನೆಚ್ಚರಿಕೆ ನೀಡಿದೆ.

“ಮುಂದಿನ ನಲವತ್ತೆಂಟು ಗಂಟೆಗಳಲ್ಲೂ ಕರಾವಳಿ ಕರ್ನಾಟಕದ ಎಲ್ಲ ಜಿಲ್ಲೆಗಳ ಒಂದೆರಡು ಕಡೆ ಭಾರೀ ಮಳೆಯಾಗಬಹುದು. ಕರ್ನಾಟಕದ ಕೆಲವು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ವಾತಾವರಣವೂ ಇರಲಿದೆ. ಬಿರುಗಾಳಿಯೂ ಗಂಟೆಗೆ 30-40 ರಿಂದ ಕಿ.ಮಿ ವೇಗದಲ್ಲಿ ಸಂಚರಿಸಲಿದೆ” ಎಂದು ಹಮಾಮಾನ ಇಲಾಖೆ ತನ್ನ ದೈನಂದಿನ ವರದಿಯಲ್ಲಿ ತಿಳಿಸಿದೆ.

“ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ ಭಾಗದಲ್ಲಿ ಚಂಡಮಾರುತದ ವಾತಾವರಣ ಇರಲಿದೆ. ಗಾಳಿಯು ಗಂಟೆಗೆ 45-55 ರಿಂದ 65 ಕಿಮೀ ವೇಗದಲ್ಲಿ ಸಂಚರಿಸುವ ಸಾಧ್ಯತೆ ಹೆಚ್ಚಾಗಿದೆ. ಇದರಿಂದ ಕರಾವಳಿ ಭಾಗದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯುವುದು ಸೂಕ್ತವಲ್ಲ” ಎಂದು ಸೂಚನೆ ನೀಡಿದೆ.

ಬೆಂಗಳೂರಿನಲ್ಲೂ ಭಾನುವಾರ ಹಾಗೂ ಸೋಮವಾರ ಸಾಧಾರಣ ಮಳೆ ಇರಲಿದೆ. ಬೆಂಗಳೂರು ಮಹಾನಗರ ಸೇರಿದಂತೆ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶದಲ್ಲಿಯೂ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಕಂಡುಬರಲಿದೆ. ಒಂದೆರಡು ಕಡೆ ಹಗುರದಿಂದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯೂ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿಯೂ ಬೆಂಗಳೂರು ನಗರದಲ್ಲಿ ಬೀಸಲಿದೆ. ದಿನದ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್‌ನಷ್ಟು ದಾಖಲಾಗಲಿದೆ.

ಕರ್ನಾಟಕದ ಹಲವು ಕಡೆ ಶನಿವಾರವೂ ಭಾರೀ ಮಳೆ ಸುರಿದ ವರದಿಯಾಗಿದ್ದು, ಚಿಕ್ಕಮಗಳೂರು ಜಿಲ್ಲೆ ಕೊಟ್ಟಿಗೆಹಾರದಲ್ಲಿ ಅತ್ಯಧಿಕ 11 ಸೆ.ಮೀನಷ್ಟು ಮಳೆ ದಾಖಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಬೇಲಿಕೇರಿ, ಕ್ಯಾಸಲ್‌ ರಾಕ್‌ನಲ್ಲಿ ತಲಾ 10 ಸೆ.ಮೀ, ದಕ್ಷಿಣ ಕನ್ನಡದ ಉಪ್ಪಿನಂಗಡಿಯಲ್ಲಿ 8 ಸೆ.ಮೀ, ಕಾರವಾರ ಹಾಗೂ ಗೋಕರ್ಣದಲ್ಲಿ ತಲಾ ಏಳು ಸೆ.ಮೀ ಮಳೆಯಾದ ವರದಿಗಳು ಬಂದಿವೆ.

ಬೀದರ್‌ ಜಿಲ್ಲೆಯ ಔರಾದ್‌, ಹುಮನಾಬಾದ್‌, ನಿರ್ಣಾ, ಭಾಲ್ಕಿ, ಮಂಠಾಳ, ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ, ಪುತ್ತೂರು, ಬೆಳ್ತಂಗಡಿ, ಧರ್ಮಸ್ಥಳ, ಮಂಗಳೂರು ವಿಮಾನ ನಿಲ್ದಾಣ, ಪಣಂಬೂರು, ಮುಲ್ಕಿ, ಉಡುಪಿ ಜಿಲ್ಲೆಯ ಕೊಲ್ಲೂರು, ಸಿದ್ದಾಪುರ, ಕೋಟಾ, ಕುಂದಾಪುರ, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ, ಜಗಲಬೆಟ್‌, ಮಂಕಿ. ಮಂಚಿಕೇರಿ, ಕುಮಟಾ, ಜೋಯಿಡಾ, ಶಿರಾಲಿ, ಹೊನ್ನಾವರ, ಯಲ್ಲಾಪುರ, ಗೇರುಸೊಪ್ಪ, ಚಿಕ್ಕಮಗಳೂರು ಜಿಲ್ಲೆಯ ಕಮ್ಮರಡಿ, ಕಳಸ, ಶೃಂಗೇರಿ, ಚಿಕ್ಕಮಗಳೂರು, ಕೊಪ್ಪ, ಶಿವಮೊಗ್ಗ ಜಿಲ್ಲೆಯ ಕೋಣಂದೂರು, ಹುಂಚದಕಟ್ಟೆ, ಲಿಂಗನಮಕ್ಕಿ, ತಾಳಗುಪ್ಪದಲ್ಲಿ ಮಳೆಯಾಗಿದೆ. ಬೆಳಗಾವಿ ಜಿಲ್ಲೆಯ ಲೋಂಡಾ, ಗುಂಜ್‌, ಬೆಳಗಾವಿ ವಿಮಾನ ನಿಲ್ದಾಣ, ಬೆಳಗಾವಿ ನಗರ, ಕಲಬುರಗಿ ಜಿಲ್ಲೆಯ ಅಳಂದ, ಅಡಕಿ, ಯಡ್ರಾಮಿ, ಕಮಲಾಪುರ, ಅಫಜಲಪುರದಲ್ಲಿ ಮಳೆ ಸುರಿದಿದೆ.

ಈ ಸುದ್ದಿ ಓದಿದ್ದೀರಾ? ಮೈಸೂರು | ಅಜ್ಜಿ ತಿಥಿ ಕಾರ್ಯಕ್ಕೆ ಬಂದಿದ್ದ ಕುಟುಂಬ ನೀರುಪಾಲು

ಕೆಲವು ದಿನಗಳಿಂದ ಬಿಡುವು ಕೊಟ್ಟಿದ್ದ ಕೊಡಗಿನಲ್ಲಿ ಮಳೆ ವಾತಾವರಣ ಮತ್ತೆ ಶುರುವಾಗಿದೆ. ಈಗಾಗಲೇ ಭಾನುವಾರ ಹಾಗೂ ಸೋಮವಾರವೂ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಅದರಲ್ಲೂ ಭಾಗಮಂಡಲ ಭಾಗದಲ್ಲಿ ಮಳೆಯಾಗುತ್ತಿರುವುದು ಸಂತಸ ತಂದಿದೆ. ಶನಿವಾರವೂ ಕೊಡಗಿನ ಭಾಗಮಂಡಲ, ವೀರಾಜಪೇಟೆ, ಸೋಮವಾರಪೇಟೆ, ಪೊನ್ನಂಪೇಟೆ, ನಾಪೊಕ್ಲು, ಮೂರ್ನಾಡು, ಮಡಿಕೇರಿಗಳಲ್ಲಿ ಮಳೆಯಾದ ವರದಿಯಾಗಿದ್ದು, ಕಾವೇರಿ ನದಿ ನೀರಿನ ಪ್ರಮಾಣದಲ್ಲಿ ಏರಿಕೆ ಕಂಡುಬಂದಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X