ವಿದ್ಯುತ್ ತಂತಿ ತಗುಲಿ ದಂಪತಿ ಸ್ಥಳದಲ್ಲೇ ಮೃತಪಟ್ಟ ಧಾರುಣ ಘಟನೆ ಬೀದರ್ ತಾಲೂಕಿನ ಮನ್ನಳ್ಳಿ ಗ್ರಾಮದಲ್ಲಿ ಭಾನುವಾರ ಜರುಗಿದೆ.
ಮಲ್ಲಿಕಾರ್ಜುನ (51) ಹಾಗೂ ಶರಣಮ್ಮ (40) ಸಾವಿಗೀಡಾದ ರೈತ ದಂಪತಿ. ತಮ್ಮ ಹೊಲದಲ್ಲಿ ಕೃಷಿ ಕೆಲಸಕ್ಕೆಂದು ತೆರಳುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೀದರ್ | ಅನಧಿಕೃತ ಡಿಜಿಟಲ್ ಖಾತಾ ಹಂಚಿಕೆ: ಪಿಡಿಒ ಅಮಾನತು
ಈ ಬಗ್ಗೆ ಮನ್ನಳ್ಳಿ ಪೋಲೀಸ್ ಠಾಣೆ ಪಿಎಸ್ಐ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಮಲ್ಲಿಕಾರ್ಜುನ್ ಹಾಗೂ ಶರಣಮ್ಮ ಎಂಬ ದಂಪತಿ ತಮ್ಮ ಹೊಲದಲ್ಲಿ ಕೃಷಿ ಕೆಲಸಕ್ಕೆಂದು ತೆರಳುವ ದಾರಿ ಮಧ್ಯೆ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಅವಘಡ ಸಂಭವಿಸಿದ್ದು, ದಂಪತಿ ಮೃತಪಟ್ಟಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಸಲಾಗಿದೆ, ಪ್ರಕರಣ ದಾಖಲಿಸಿಕೊಳ್ಳುತ್ತೇವೆ” ಎಂದು ತಿಳಿಸಿದ್ದಾರೆ.