ನ.25-26ರಂದು ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ ನಡೆಯಲಿದೆ ಕರಾವಳಿಯ ‘ಕಂಬಳ’

Date:

Advertisements
  • ಕಂಬಳ ವೀಕ್ಷಿಸಲು 9 ಲಕ್ಷ ಮಂದಿ ಬರುವ ನಿರೀಕ್ಷೆ ಇದೆ ಎಂದ ಪುತ್ತೂರು ಶಾಸಕ ಅಶೋಕ್ ಕುಮಾರ್‌ ರೈ
  • ಬೆಂಗಳೂರು ಕಂಬಳ ಸಮಿತಿಯ ಅಧ್ಯಕ್ಷ, ಪುತ್ತೂರು ಶಾಸಕ ಅಶೋಕ ಕುಮಾರ್‌ ರೈ ಮಾಹಿತಿ

‘ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್‌ 25 ಮತ್ತು 26ರಂದು ಪ್ರಥಮ ಬಾರಿಗೆ ‘ನಮ್ಮ ಕಂಬಳ’ ನಡೆಯಲಿದೆ. ಇದರಲ್ಲಿ ಅಂದಾಜು 125 ಜೋಡಿ ಕೋಣಗಳು ಭಾಗವಹಿಸಲಿವೆ ಎಂದು ಬೆಂಗಳೂರು ಕಂಬಳ ಸಮಿತಿಯ ಅಧ್ಯಕ್ಷ, ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್‌ ರೈ ತಿಳಿಸಿದರು.

ಬೆಂಗಳೂರು ಕಂಬಳಕ್ಕೆ ಕೋಣಗಳನ್ನು ಕೊಂಡೊಯ್ಯುವ ಕುರಿತು ಅವುಗಳನ್ನು ಸಾಕುವ ಯಜಮಾನರ ಜೊತೆ ಮಂಗಳೂರಿನಲ್ಲಿ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕ ರೈ, ‘ಅಂದಾಜು 125 ಜೋಡಿ ಕೋಣಗಳು ಭಾಗವಹಿಸಲಿವೆ. ಈ ಕೋಣಗಳನ್ನು ನ.23ರಂದು ಬೆಂಗಳೂರಿಗೆ ಮೆರವಣಿಗೆಯಲ್ಲಿ ಕೊಂಡೊಯ್ಯಲಾಗುತ್ತದೆ. 6 ಕೋಟಿ ವೆಚ್ಚವಾಗಲಿದ್ದು, ಎರಡು ದಿನದಲ್ಲಿ 8ರಿಂದ 9 ಲಕ್ಷ ಜನರು ಭೇಟಿ ನೀಡುವ ನಿರೀಕ್ಷೆ ಇದೆ’ ಎಂದು ತಿಳಿಸಿದರು.

‘ಕಂಬಳ ಕೋಣಗಳನ್ನು ಲಾರಿಗಳಲ್ಲಿ ಬೆಂಗಾವಲು ವಾಹನ ವ್ಯವಸ್ಥೆಯೊಂದಿಗೆ ಕೊಂಡೊಯ್ಯಲಾಗುವುದು. ಪಶು ಆಂಬುಲೆನ್ಸ್‌ಗಳು ಹಾಗೂ ಪಶು ವೈದ್ಯರು ಜೊತೆಯಲ್ಲಿರುತ್ತಾರೆ. ಕೋಣಗಳಿಗೆ ಹಾಸನದಲ್ಲಿ 2 ಗಂಟೆ ವಿಶ್ರಾಂತಿ ಒದಗಿಸಲಾಗುವುದು. ಕೋಣಗಳಿಗೆ ಕುಡಿಯುವ ನೀರು ಹಾಗೂ ಮೇವುಗಳನ್ನೂ ಮಂಗಳೂರಿನಿಂದಲೇ ಕೊಂಡೊಯ್ಯಲಾಗುತ್ತದೆ ಎಂದು ಅಶೋಕ್ ಕುಮಾರ್‌ ರೈ ಮಾಹಿತಿ ನೀಡಿಸಿದರು.

Advertisements

‘ನಮ್ಮ ಕಂಬಳ’ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂಬಳ ಉದ್ಘಾಟಿಸುವರು. ಬೆಂಗಳೂರು ಕಂಬಳ ಸಮಿತಿಯ ಗೌರವಾಧ್ಯಕ್ಷರಾಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವರು, ಉನ್ನತ ಅಧಿಕಾರಿಗಳು ಭಾಗವಹಿಸಲಿದ್ದಾರೆ.

mla ashok kumar rai

ನಟಿ ಐಶ್ವರ್ಯ ರೈ ಹಾಗೂ ನಟ ರಜನಿಕಾಂತ್‌ ಅವರನ್ನು ಸಂಪರ್ಕಿಸಲಾಗಿದ್ದು, ಅವರೂ ಭಾಗವಹಿಸುವ ನಿರೀಕ್ಷೆ ಇದೆ. ಬಾಲಿವುಡ್‌ ಹಾಗೂ ಸ್ಯಾಂಡಲ್‌ವುಡ್‌ನ ತಾರೆಯರು ಕೂಡ ಭಾಗವಹಿಸಲಿದ್ದಾರೆ. ನಟ ರಿಷಬ್‌ ಶೆಟ್ಟಿ, ಅನುಷ್ಕಾ ಶೆಟ್ಟಿ, ಸಂಗೀತ ನಿರ್ದೇಶಕ ಗುರುಕಿರಣ್‌ ಭಾಗವಹಿಸಲು ಒಪ್ಪಿದ್ದಾರೆ. ಕಂಬಳದಲ್ಲಿ ತಾರಾ ಮೆರುಗು ಇರಲಿದೆ ಎಂದು ಶಾಸಕರು ತಿಳಿಸಿದರು.

‘ಕಂಬಳ ವೀಕ್ಷಿಸಲು 9 ಲಕ್ಷ ಮಂದಿ ಬರುವ ನಿರೀಕ್ಷೆ ಇದೆ. 145 ಮೀ ಉದ್ದದ ಕಂಬಳದ ಕರೆ ನಿರ್ಮಿಸಲಾಗುತ್ತದೆ. ಸುಮಾರು 15 ಸಾವಿರ ಆಸನಗಳ ಗ್ಯಾಲರಿ ನಿರ್ಮಾಣವಾಗಲಿದೆ. 2 ಸಾವಿರ ಅತಿಥಿ ಗಣ್ಯರಿಗೆ ಆಸನ ಕಲ್ಪಿಸಲಾಗುತ್ತಿದೆ. 6 ಸಾವಿರ ವಾಹನಗಳ ನಿಲುಗಡೆಗೆ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಕರಾವಳಿಯ ಸೊಗಡನ್ನು ಬಿಂಬಿಸುವ 150ಕ್ಕೂ ಹೆಚ್ಚು ಪ್ರದರ್ಶನ ಮತ್ತು ಮಾರಾಟ ಮಳಿಗೆಗಳನ್ನು ಸ್ಥಾಪಿಸಲಾಗುತ್ತದೆ’ ಎಂದರು.

‘ಕಾನೂನು ಚೌಕಟ್ಟಿನಡಿಯಲ್ಲೇ ಕಂಬಳ ನಡೆಯಲಿದ್ದು, ಸುಪ್ರೀಂ ಕೋರ್ಟ್ ಆದೇಶ ಪಾಲಿಸಲಿದ್ದೇವೆ. ಈ ಕಂಬಳಕ್ಕೆ ₹6 ಕೋಟಿ ವೆಚ್ಚವಾಗುವ ನಿರೀಕ್ಷೆ ಇದೆ. ಕರಾವಳಿಯ ಈ ಕ್ರೀಡೆ ಜಗದ್ವಿಖ್ಯಾತವಾಗಬೇಕು ಎಂಬ ಆಶಯ ನಮ್ಮದು. ಬೆಂಗಳೂರಿನಲ್ಲಿ 1 ಎಕರೆ ವಿಶಾಲ ಪ್ರದೇಶದಲ್ಲಿ ತುಳುಭವನ, ಪಿಲಿಕುಳದಲ್ಲಿ ಕಂಬಳ ಭವನ ನಿರ್ಮಿ ಸುವ ಉದ್ದೇಶವಿದ್ದು, ಈ ಕುರಿತು ಸರ್ಕಾರಕ್ಕೆ ಬೇಡಿಕೆ ಸಲ್ಲಿಸುತ್ತೇವೆ’ ಎಂದರು.

‘ತುಳು ಮತ್ತು ಕನ್ನಡ ಭಾಷೆಗಳೆರಡರಲ್ಲೂ ಕಂಬಳದ ಧಾಟಿಯಲ್ಲೇ ವೀಕ್ಷಕ ವಿವರಣೆ ನೀಡಲಾಗುತ್ತದೆ. ಮೊದಲ ಬಹುಮಾನ ಗೆದ್ದ ಕೋಣಗಳಿಗೆ ಎರಡು ಪವನ್‌ (16 ಗ್ರಾಂ) ಚಿನ್ನ, ದ್ವಿತೀಯ ಸ್ಥಾನ ಪಡೆದ ಕೋಣಗಳಿಗೆ ಒಂದು ಪವನ್ (8 ಗ್ರಾಂ) ಚಿನ್ನ ನೀಡಲಿದ್ದೇವೆ’ ಎಂದು ಬಹುಮಾನದ ನೀಡುವ ಬಗ್ಗೆ ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ಗೌರವಾಧ್ಯಕ್ಷ ಬಾರ್ಕೂರು ಶಾಂತಾರಾಮ ಶೆಟ್ಟಿ, ಪದಾಧಿಕಾರಿಗಳಾದ ಚಂದ್ರಹಾಸ ಸಾಧು ಸನಿಲ್, ವಿಜಯ ಕುಮಾರ್ ಜೈನ್‌, ಮುರಳೀಧರ ರೈ, ರೋಹಿತ್‌ ಹೆಗ್ಡೆ, ಲೋಕೇಶ್‌ ಶೆಟ್ಟಿ ಮುಚ್ಚೂರು ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಿ ಕೆ ಶಿವಕುಮಾರ್ ಬಳಿಕ ಕಾಂಗ್ರೆಸ್ ಶಾಸಕ ರಂಗನಾಥ್‌ರಿಂದ ಆರ್‌ಎಸ್‌ಎಸ್ ಗೀತೆ ಗುಣಗಾನ!

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಬಳಿಕ ಇದೀಗ ಕಾಂಗ್ರೆಸ್ ಶಾಸಕ...

ಆಗಸ್ಟ್ 26ರಿಂದ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಾದ್ಯಂತ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 26ರಿಂದ ಭಾರೀ ಮಳೆಯಾಗಲಿದೆ...

ಧರ್ಮಸ್ಥಳ ಪ್ರಕರಣ | ನನ್ನ ಬಂಧನ ರಾಜಕೀಯ ಪಿತೂರಿಯ ಭಾಗ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

Download Eedina App Android / iOS

X