ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಬಳಕೆಯ 19 ಕೆಜಿ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು 209 ರೂ.ಗಳಿಗೆ ಹೆಚ್ಚಿಸಿವೆ. ಇಂದಿನಿಂದಲೇ(ಅಕ್ಟೋಬರ್ 1) ಜಾರಿಗೆ ಬರುವಂತೆ ಸಿಲಿಂಡರ್ ದರವನ್ನು 209 ರೂ.ಗಳಷ್ಟು ಹೆಚ್ಚಿಸಲಾಗಿದೆ.
ಈ ಹೆಚ್ಚಳದ ನಂತರ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ನ ಚಿಲ್ಲರೆ ಮಾರಾಟ ಬೆಲೆ ಇಂದಿನಿಂದ ಪ್ರತಿ ಸಿಲಿಂಡರ್ಗೆ 1731.50 ರೂ. ಆಗಲಿದೆ ಎಂದು ತಿಳಿಸಿವೆ.
ಅದೇ ರೀತಿ ಬೆಂಗಳೂರಿನಲ್ಲಿ 1,813 ರೂ., ಮುಂಬೈನಲ್ಲಿ 1,684 ರೂ., ಲಖನೌನಲ್ಲಿ 1,845 ರೂ.,ಚೆನ್ನೈನಲ್ಲಿ 1,898 ರೂ. ಮತ್ತು ಕೋಲ್ಕತ್ತಾದಲ್ಲಿ 1839 ರೂ. ಏರಿಕೆಯಾಗಲಿದೆ. ಈ ಮೂಲಕ ವಾಣಿಜ್ಯ ಬಳಕೆಯ ಸಿಲಿಂಡರ್ಗಳನ್ನು ಜುಲೈನಿಂದ ಸತತ ನಾಲ್ಕು ತಿಂಗಳು ಹೆಚ್ಚಳ ಮಾಡಿದಂತಾಗುತ್ತದೆ.
ಈ ತಿಂಗಳ ಆರಂಭದಲ್ಲಿ ಕೇಂದ್ರ ಸಚಿವ ಸಂಪುಟ ಉಜ್ವಲ ಯೋಜನೆಯಡಿ ಹೆಚ್ಚುವರಿ 75 ಲಕ್ಷ ಹೊಸ ಎಲ್ಪಿಜಿ ಸಂಪರ್ಕಗಳನ್ನು ಅನುಮೋದಿಸಿತು. ಅದನ್ನು ಮುಂದಿನ 3 ವರ್ಷಗಳಲ್ಲಿ ನೀಡಲಾಗುತ್ತಿದ್ದೆ. ಈ ಸಂಪರ್ಕಗಳ ಒಟ್ಟು ವೆಚ್ಚ 1,650 ಕೋಟಿ ರೂ. ಆಗಿದೆ. ಉಜ್ವಲಾ ಯೋಜನೆಯಡಿ ನೀಡಲಾಗುತ್ತಿರುವ ಅಸ್ತಿತ್ವದಲ್ಲಿರುವ ಠೇವಣಿ ಮುಕ್ತ ಸಂಪರ್ಕಗಳ ಮುಂದುವರಿಕೆಯಲ್ಲಿ ಈ ಹೊಸ ಸಂಪರ್ಕಗಳನ್ನು ನೀಡಲಾಗುತ್ತದೆ.
ಈ ಸುದ್ದಿ ಓದಿದ್ದೀರಾ? 26/11 ಮುಂಬೈ ದಾಳಿಯ ರೂವಾರಿ ಹಫೀಜ್ ಸಯೀದ್ನ ಪ್ರಮುಖ ನಿಕಟವರ್ತಿ ಕರಾಚಿಯಲ್ಲಿ ಗುಂಡಿಕ್ಕಿ ಹತ್ಯೆ
ಎಟಿಎಫ್ ಬೆಲೆಯು ಏರಿಕೆ
ಸರ್ಕಾರಿ ಸ್ವಾಮ್ಯದ ಇಂಧನ ಚಿಲ್ಲರೆ ವ್ಯಾಪಾರಿಗಳ ಬೆಲೆ ಅಧಿಸೂಚನೆಯ ಪ್ರಕಾರ, ಏವಿಯೇಷನ್ ಟರ್ಬೈನ್ ಇಂಧನ (ಎಟಿಎಫ್) ಬೆಲೆಯನ್ನು ರಾಷ್ಟ್ರ ರಾಜಧಾನಿಯಲ್ಲಿ ಪ್ರತಿ ಕಿಲೋಲೀಟರ್ಗೆ 5,779.84 ರೂ. ಅಥವಾ ಶೇಕಡಾ 5.1 ರಷ್ಟು ಹೆಚ್ಚಿಸಲಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆ ಮಾನದಂಡಗಳಿಗನುಗುಣವಾಗಿ ಈ ಹೆಚ್ಚಳವಾಗಿದೆ ಎಂದು ತೈಲ ನಿಗಮ ಕಂಪನಿಗಳು ತಿಳಿಸಿವೆ.
ಎಟಿಎಫ್ ಬೆಲೆಯನ್ನು ಈ ವರ್ಷದಲ್ಲಿ ನಾಲ್ಕನೇ ಬಾರಿ ಹೆಚ್ಚಿಸಲಾಗುತ್ತಿದ್ದು,ಇದು ವಿಮಾನಯಾನ ಸಂಸ್ಥೆಯ ನಿರ್ವಹಣಾ ವೆಚ್ಚದ ಶೇಕಡಾ 40 ರಷ್ಟು ಹೊಂದಿರಲಿದೆ. ಈ ಹೆಚ್ಚಳವು ಈಗಾಗಲೇ ಆರ್ಥಿಕವಾಗಿ ಒತ್ತಡದಲ್ಲಿರುವ ವಿಮಾನಯಾನ ಸಂಸ್ಥೆಗಳ ಮೇಲೆ ಹೊರೆಯನ್ನು ಹೆಚ್ಚಿಸಲಿದೆ.
ನಾಲ್ಕು ಬಾರಿ ಹೆಚ್ಚಳದಿಂದ ಎಟಿಎಫ್ ಬೆಲೆ ಪ್ರತಿ ಕೆಜಿಗೆ 29,391.08 ರೂ.ಗೆ ಏರಿಕೆಯಾಗಿದೆ. ಸರ್ಕಾರಿ ಸ್ವಾಮ್ಯದ ಇಂಡಿಯನ್ ಆಯಿಲ್ ಕಾರ್ಪೊರೇಷನ್, ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ಹಿಂದಿನ ತಿಂಗಳ ಸರಾಸರಿ ಅಂತಾರಾಷ್ಟ್ರೀಯ ಬೆಲೆಯನ್ನು ಆಧರಿಸಿ ಪ್ರತಿ ತಿಂಗಳ 1 ರಂದು ಅಡುಗೆ ಅನಿಲ ಮತ್ತು ಎಟಿಎಫ್ ಬೆಲೆಗಳನ್ನು ಪರಿಷ್ಕರಿಸುತ್ತದೆ.