ಗದಗ ಜಿಲ್ಲಾಡಳಿತ ಭವನದಲ್ಲಿ ಜರಗಿದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮವು ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸುವುದರ ಜೊತೆಗೆ ಜನಸಾಮಾನ್ಯರು ಸ್ವಾಭಿಮಾನದ ಬದುಕು ಸಾಗಿಸಲು ಸರ್ಕಾರ ಸದಾ ಬದ್ಧವಾಗಿದೆ ಎಂಬುದಕ್ಕೆ ಸಾಕ್ಷಿಯಾಯಿತು.
ಜಿಲ್ಲಾಡಳಿತ ಭವನದಲ್ಲಿ ಶನಿವಾರದಂದು ಜರುಗಿದ ಜನತಾದರ್ಶನ ಕಾರ್ಯಕ್ರಮಕ್ಕೆ ಆಗಮಿಸಿದ್ದ ನೀಲಗುಂದ ಗ್ರಾಮದ ಶರಣ ಬಸಯ್ಯ ಅವರು ಸ್ವಯಂ ಉದ್ಯೋಗದಿಂದ ಸ್ವಾಭಿಮಾನದ ಬದುಕು ಸಾಗಿಸಲು ಅನುಕೂಲವಾಗುವಂತೆ ಲ್ಯಾಪ್‌ಟಾಪ್ ಹಾಗೂ ಪ್ರಿಂಟರ್‌ಗಳನ್ನು ಒದಗಿಸುವಂತೆ ಸಚಿವರಿಗೆ ಮನವಿ ಮಾಡಿದರು.
ಈ ಸುದ್ದಿ ಓದಿದ್ದೀರಾ? ಗದಗ | ಜನತಾದರ್ಶನ: ವೃದ್ಧೆಗೆ ಆಧಾರ್ ಕಾರ್ಡ್, ಮಾಸಾಶನ ಆದೇಶ ಪತ್ರ ವಿತರಣೆ
ಇದಕ್ಕೆ ಸ್ಪಂದಿಸಿದ ಸಚಿವ ಎಚ್ ಕೆ ಪಾಟಿಲ್ ಅವರು ವಿಶೇಷ ಮುತುವರ್ಜಿ ವಹಿಸಿ ಕೆಲವೇ ಗಂಟೆಗಳಲ್ಲಿ ವಿಕಲಚೇತನ ಶರಣ ಬಸಯ್ಯ ಅವರಿಗೆ ಲ್ಯಾಪ್‌ಟಾಪ್ ಹಾಗೂ ಪ್ರಿಂಟರ್ ವಿತರಿಸುವುದರ ಮೂಲಕ ಸ್ವಾಭಿಮಾನದ ಬದುಕು ಸಾಗಿಸುವಂತೆ ಬೆನ್ನು ತಟ್ಟಿದರು.