ಕಾಮನ್ ವೆಲ್ತ್ ಪಾರ್ಲಿಮೆಂಟ್ ಅಸೋಸಿಯೇಷನ್ (ಸಿಪಿಎ) ವತಿಯಿಂದ ಯೂರೋಪ್ ಹಾಗೂ ಆಫ್ರಿಕಾ ಪ್ರಾಂತ್ಯದ ವಿವಿಧ ದೇಶಗಳಲ್ಲಿ ಹಮ್ಮಿಕೊಳ್ಳುವ ಸ್ಪೀಕರ್ಸ್ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಲು ಕರ್ನಾಟಕ ರಾಜ್ಯದಿಂದ ವಿಧಾನಸಭೆಯ ಸಭಾಧ್ಯಕ್ಷರಾದ ಯು ಟಿ ಖಾದರ್ ಹಾಗೂ ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ ತೆರಳಲಿದ್ದು, ಇಂದು ರಾತ್ರಿ(ಅ.01) ಬೆಂಗಳೂರು ವಿಮಾನ ನಿಲ್ದಾಣ ಮೂಲಕ ಹೊರಡಲಿದ್ದಾರೆ.
ಈ ಸುದ್ದಿ ಓದಿದ್ದೀರಾ? ಏಷ್ಯನ್ ಗೇಮ್ಸ್ 2023 | ಕನ್ನಡತಿ ಅದಿತಿ ಅಶೋಕ್‌ಗೆ ಬೆಳ್ಳಿ;ಗಾಲ್ಫ್‌ನಲ್ಲಿ ಪದಕ ಗೆದ್ದ ಭಾರತದ ಮೊದಲ ಮಹಿಳಾ ಕ್ರೀಡಾಪಟು
ಈ ಸಂದರ್ಭಗಳಲ್ಲಿ ಅನಿವಾರ್ಯ ಕಾರ್ಯಗಳಿಗಾಗಿ ಸಾರ್ವಜನಿಕರು ಸಭಾಧ್ಯಕ್ಷರ ಬೆಂಗಳೂರು ಹಾಗೂ ಮಂಗಳೂರು ಕಚೇರಿಗೆ ಭೇಟಿ ಮಾಡಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದೆಂದು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ