ರಾಯಚೂರು | ಹೊಸ ಮದ್ಯದಂಗಡಿಗಳಿಗೆ ಪರವಾನಿಗೆ ಪ್ರಸ್ತಾವನೆ ವಿರೋಧಿಸಿ ಅಹೋರಾತ್ರಿ ಧರಣಿ

Date:

Advertisements

ಮದ್ಯ ಮಾರಾಟ ನಿಷೇಧಿಸಬೇಕು. ಅಕ್ರಮವಾಗಿ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಮದ್ಯ ನಿಷೇಧ ಆಂದೋಲನ ಹಾಗೂ ಗ್ರಾಮೀಣ ಕೂಲಿಕಾರ ಸಂಘಟನೆಯ ಕಾರ್ಯಕರ್ತರು ರಾಯಚೂರಿನಲ್ಲಿ ಅಹೋರಾತ್ರಿ ಧರಣಿ ನಡೆಸಿದರು.

ನಗರದ ಅಂಬೇಡ್ಕರ್ ವೃತ್ತದಲ್ಲಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ಹಾಗೂ ರಾಜ್ಯ ಮಹಿಳಾ ಒಕ್ಕೂಟ ಸಹಯೋಗದಲ್ಲಿ ಪ್ರತಿಭಟನೆ ನಡೆದಿದೆ. “ಸರ್ಕಾರ ಮದ್ಯ ಮಾರಾಟ ಪರವಾನಗಿ ನೀಡುವ ನಿರ್ಧಾರವನ್ನು ಕರ್ನಾಟಕ ಪಂಚಾಯತ್ ಕಾನೂನಿನ್ವಯ ಗ್ರಾಮಸಭೆಗೆ ಪರಮಾಧಿಕಾರ ಕೊಡಬೇಕು. ಮಹಿಳೆಯರು ಕೆಳ ಮಟ್ಟದಿಂದ ಪಂಚಾಯಿತಿ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ಪರವಾನಗಿ ನೀಡಬಾರದು ಎಂದು ಗ್ರಾಮಸಭೆಯಲ್ಲಿ ನಿರ್ಧರಿಸಿದರೆ, ಸರ್ಕಾರ ಅದನ್ನು ಎತ್ತಿ ಹಿಡಿಯಬೇಕು” ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

“ರಾಜ್ಯ ಸರ್ಕಾರ ಹೊಸದಾಗಿ 1,000 ಮದ್ಯದಂಗಡಿಗಳಿಗೆ ಪರವಾನಿಗೆ ಹಾಗೂ ಸೂಪರ್ ಮಾರ್ಕೆಟ್‌, ಮಾಲ್‌ಗಳಲ್ಲಿ ಮಾರಾಟ ಮಾಡುವ ಪ್ರಸ್ತಾವನೆ ಕೂಡಲೇ ಹಿಂತೆಗೆದುಕೊಳ್ಳಬೇಕು. ಮಹಿಳೆಯರು ಮಾತ್ರವಲ್ಲ, ಸಮಾಜದ ನೆಮ್ಮದಿ, ಆರೋಗ್ಯ ಹಾಳು ಮಾಡುವ ವಿಚಾರಗಳನ್ನು ಬಿಟ್ಟು, ಮಹಾತ್ಮಾ ಗಾಂಧೀಜಿಯವರ ಆಶಯಗಳನ್ನು ಅನುಷ್ಠಾನಕ್ಕೆ ತರಬೇಕು” ಎಂದು ಆಗ್ರಹಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ರಾಯಚೂರು | 9 ವರ್ಷಗಳಿಂದ ಅಂಗನವಾಡಿ ಕಟ್ಟಡಕ್ಕಿಲ್ಲ ಉದ್ಘಾಟನೆ ಭಾಗ್ಯ

ಪ್ರತಿಭಟನೆಯಲ್ಲಿ ಗ್ರಾಕೂಸ್‌ ನ ಕಾರ್ಯಕರ್ತರಾದ ಮಾರೆಮ್ಮ ನೀರಮಾನ್ವಿ, ಮುಖಂಡ ಗುರುರಾಜ್ ರಾಯಚೂರು ಸೇರಿದಂತೆ ಸಂಘಟನೆಯ ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X