ರಾಜ್ಯ ಸರ್ಕಾರ ಸರ್ವ ಸಮ್ಮತ ಸಂಕಷ್ಟ ಸೂತ್ರ ಸಿದ್ಧಪಡಿಸಲಿ: ಬೊಮ್ಮಾಯಿ ಆಗ್ರಹ

Date:

Advertisements
  • ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲು ಹೋರಾಟ ಅಗತ್ಯ
  • ಮೇಕೆದಾಟು ಯೋಜನೆ ಜಾರಿಗೆ ರಾಜ್ಯ ಸರ್ಕಾರ ಮುಂದಾಗಲಿ

ರಾಜ್ಯ ಸರ್ಕಾರ ಕಾವೇರಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ರಾಜ್ಯದ ಕಾನೂನು ತಜ್ಞರು, ಹೋರಾಟಗಾರರು ಹಾಗೂ ಪ್ರತಿಪಕ್ಷಗಳ ಅಭಿಪ್ರಾಯ ಪಡೆದು ಸರ್ವ ಸಮ್ಮತವಾದ ಸಂಕಷ್ಟ ಸೂತ್ರ ಸಿದ್ಧಪಡಿಸಿ ಸಿಡಬ್ಲುಎಂಎ ಹಾಗೂ ಸುಪ್ರೀಂ ಕೋರ್ಟ್ ಮುಂದೆ ಮಂಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.

ಮಂಡ್ಯದಲ್ಲಿ ರೈತ ಹಿತರಕ್ಷಣಾ ಸಮಿತಿಯವರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಂಡ್ಯದಲ್ಲಿ ಕಾವೇರಿ ಹೋರಾಟವನ್ನು ಜೀವಂತ ಇಟ್ಟಿರುವ ಸುನಂದಮ್ಮ, ಅಂಬುಜಮ್ಮ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುವುದಾಗಿ ತಿಳಿಸಿದರು.

“ನಾವು ಎಲ್ಲರೂ ನಿಮ್ಮ ಜೊತೆಗೆ ಇದ್ದೇವೆ. ಇಡೀ ಕರ್ನಾಟಕ ವಿಶೇಷವಾಗಿ ಬೆಂಗಳೂರಿನ ಜನ ಹೋರಾಟಗಾರರ ಜೊತೆಗೆ ಇದ್ದೇವೆ. ಕಾವೇರಿ ವಿವಾದ ಯಾಕೆ ಪದೇ ಪದೇ ಹುಟ್ಟಿಕೊಳ್ಳುತ್ತದೆ. ಇದಕ್ಕೆ ಪರಿಹಾರ ಯಾವಾಗ ಅನ್ನುವುದರ ಆಧಾರದ ಮೇಲೆ ನಮ್ಮ ಹೋರಾಟ ನಡೆಯುತ್ತದೆ. ಕಾವೇರಿ ನದಿ ಹುಟ್ಟಿ ಅತೀ ಹೆಚ್ಚು ನೀರು ಹರಿಯುವುದು ನಮ್ಮ ರಾಜ್ಯದಲ್ಲಿ. ಕಡಿಮೆ ಕ್ಯಾಚಮೆಂಟ್ ಏರಿಯಾ ಇದ್ದರೂ ಅತೀ ಹೆಚ್ಚು ನೀರು ಹರಿಯುತ್ತಿದೆ” ಎಂದರು.

Advertisements

“ತಮಿಳುನಾಡಿಗೆ ಎರಡು ಮನ್ಸೂನ್‌ಗಳಿವೆ. ಅವರಿಗೆ ನೀರಿನ ಕೊರತೆಯಿಲ್ಲ. ಅವರು ಹೆಚ್ಚುವರಿ ನೀರು ಸಮುದ್ರಕ್ಕೆ ಬಿಡುತ್ತಾರೆ. ನಾವು ನೀರು ಉಳಿಸಿಕೊಳ್ಳಲು ನಾಲ್ಕು ಡ್ಯಾಮ್ ಕಟ್ಟಿದ್ದೇವೆ. ಅವರು ಕಾವೇರಿ ಉಳಿಸಿಕೊಳ್ಳಲು ಹೆಚ್ಚಿನ ಪ್ರಯತ್ನವನ್ನೇ ಮಾಡಲಿಲ್ಲ. ಕೇವಲ ಎರಡು ಡ್ಯಾಮ್ ಕಟ್ಟಿದ್ದಾರೆ. ಶತಮಾನಗಳಿಂದಲೂ ಕನ್ನಂಬಾಡಿ ಕಟ್ಟುವಾಗಲೇ ತಮಿಳುನಾಡಿನ ವಿರೋಧ ಇತ್ತು. ಅವರ ಜೊತೆಗೆ ಮಾಡಿಕೊಂಡ ಒಪ್ಪಂದದಿಂದ ಈ ಪರಿಸ್ಥಿತಿ ಬಂದಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬುರ್ನಾಸು ಬಿಜೆಪಿ ಬಿಟ್ಟು ಒಂದಾಗುವರೆ ಯಡಿಯೂರಪ್ಪ ಮತ್ತು ಕುಮಾರಸ್ವಾಮಿ? 

ನೀರು ಬಿಡುವುದಿಲ್ಲ ಎಂದಿದ್ದೆ

2012ರಲ್ಲಿ ಸುಪ್ರೀಂ 12 ಟಿಎಂಸಿ ನೀರು ಬಿಡುವಂತೆ ಹೇಳಿತ್ತು. ಆಗ ಪ್ರತಿಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ಅವರು ಸುಪ್ರೀಂ ಕೋರ್ಟ್ ಆದೇಶ ಪಾಲಿಸುತ್ತೀರಾ ಇಲ್ಲಾ ನೀರು ಬಿಡುತ್ತೀರಾ ಎಂದು ಕೇಳಿದರು. ನಾನು ಆಗ ನೀರಾವರಿ ಸಚಿವನಾಗಿದ್ದೆ, ಸುಪ್ರೀಂ ಕೋರ್ಟ್ ಆದೇಶ ಪಾಲಿಸುತ್ತೇನೆ ನೀರು ಬಿಡುವುದಿಲ್ಲ ಎಂದು ಹೇಳಿದೆ. ದೆಹಲಿಗೆ ತೆರಳಿ ನಮ್ಮ ವಕೀಲರನ್ನು ಭೇಟಿ ಮಾಡಿ, ನೀರು ಬಿಡಲು ಆಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಮುಂದೆ ಹೇಳಲು ಹೇಳಿದ್ದೆ” ಎಂದರು.

ಸಂಕಷ್ಟ ಸೂತ್ರ ರಚಿಸಲಿ

“ರಾಜ್ಯ ಸರ್ಕಾರ ಕಾವೇರಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ತನ್ನ ಕಾನೂನು ತಜ್ಞರೊಂದಿಗೆ ಕುಳಿತು ಸಂಕಷ್ಟ ಸೂತ್ರ ಏನಿರಬೇಕೆಂದು ತೀರ್ಮಾನ ಮಾಡಿ, ಪ್ರತಿಪಕ್ಷಗಳು ಹಾಗೂ ಹೋರಾಟಗಾರರ ಅಭಿಪ್ರಾಯ ಪಡೆದು ಸಂಕಷ್ಟ ಸೂತ್ರ ರಚನೆ ಮಾಡಬೇಕು. ಸಂಕಷ್ಟ ಸೂತ್ರ ಸರ್ವ ಸಮ್ಮತವಾಗಿರಬೇಕು” ಎಂದರು.

“ಮೇಕೆದಾಟು ಯೋಜನೆ ಜಾರಿ ಕುರಿತು ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಬಲವಾಗಿ ವಾದ ಮಾಡಬೇಕು. ಇದು ತಕ್ಷಣ ಆಗದಿದ್ದರೂ ಮುಂದಿನ ಜನಾಂಗಕ್ಕಾದರೂ ಅನುಕೂಲ ಆಗುತ್ತದೆ. ರಾಜ್ಯ ಸರ್ಕಾರ ಕಾವೇರಿ ವಿಚಾರದಲ್ಲಿ ಮೊದಲಿನಿಂದಲೂ ಎಡವುತ್ತಿದೆ‌. ಸರ್ವ ಪಕ್ಷಗಳ ಸಭೆಯಲ್ಲಿ ನೀರು ಕಡಿಮೆ ಬಿಡುತ್ತಿರುವುದೇ ಸಾಧನೆ ಎನ್ನುವಂತೆ ಬಿಂಬಿಸಿಕೊಳ್ಳುತ್ತಿದ್ದಾರೆ. ರಾಜ್ಯ ಸರ್ಕಾರ ಮೊದಲು ಸುಪ್ರೀಂ ಕೊರ್ಟ್ ನಲ್ಲಿ ಐಎ ಹಾಕಿದ್ದರೆ ನಮಗೆ ವಾಸ್ತವ ಸ್ಥಿತಿ ಹೇಳಲು ಹೆಚ್ಚು ಅವಕಾಶ ಇರುತ್ತದೆ” ಎಂದರು.

ಪ್ರತಿಭಟನೆಯಲ್ಲಿ ಮಾಜಿ ಡಿಸಿಎಂ ಆರ್ ಅಶೋಕ್, ಶಾಸಕ ರವಿ ಸುಬ್ರಮಣ್ಯ, ವಿಧಾನ ಪರಿಷತ್ ಮಾಜಿ ಸದಸ್ಯ ಅಶ್ವಥ್ ನಾರಾಯಣ ಬಿಬಿಎಂಪಿ ಮಾಜಿ ಕಾರ್ಪೊರೇಟರ್‌ಗಳು ಹಾಗೂ ಮತ್ತಿತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X