ಗೋಕಾಕ್‌ : ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಐವರ ಬಂಧನ

Date:

Advertisements
  • ಸೆ.5ರಂದು ಪುಸಲಾಯಿಸಿ ಮನೆಗೆ ಕರೆದುಕೊಂಡು ಹೋಗಿ ಕೃತ್ಯ
  • ಸೆ.29ರಂದು ಗೋಕಾಕ್ ನಗರ ಪೊಲೀಸ್ ಠಾಣೆಗೆ ನೊಂದ ಮಹಿಳೆ ದೂರು

ಹಾಡಹಗಲೇ ವಿವಾಹಿತ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಪ್ರಕರಣ ಬೆಳಗಾವಿಯ ಗೋಕಾಕ್‌ನ ಮನೆಯೊಂದರಲ್ಲಿ ನಡೆದಿದ್ದು, ಸೆ.5ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಪ್ರಕರಣ ಸಂಬಂಧ ಒಟ್ಟು ಐವರನ್ನು ಬಂಧಿಸಲಾಗಿದ್ದು, ಬಂಧನದ ವೇಳೆ ಓರ್ವ ಆರೋಪಿ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ತಲೆ ಮರೆಸಿಕೊಂಡಿರುವ ಮತ್ತೋರ್ವನಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

ಬಂಧಿತರನ್ನು ರಮೇಶ ಉದ್ದಪ್ಪ ಬಿಗಾಗಿ, ದುರ್ಗಪ್ಪ ಸೋಮಲಿಂಗಪ್ಪ ವಡ್ಡರ, ಯಲ್ಲಪ್ಪ ಸಿದ್ಧಪ್ಪ ಗೀಸನಿಂಗವ್ವಗೋಳ, ಕೃಷ್ಣಾಪ್ರಕಾರ ಪೂಜೇರಿ, ರಾಮಸಿದ್ದ ಗುರಶಿದ್ದಪ್ಪ ತಪ್ಪಿ ಎಂದು ಗುರುತಿಸಲಾಗಿದೆ. ಮತ್ತೋರ್ವ ಆರೋಪಿ ಬಸವರಾಜ ವಸಂತ ಖಿಲಾರಿ ಪರಾರಿಯಾಗಿದ್ದು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Advertisements
sp bheemashankar guled

ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ್, “ಸೆ.5ರ ಶಿಕ್ಷಕರ ದಿನಾಚರಣೆಯಂದು ಘಟನೆ ನಡೆದಿದೆ. ಇತ್ತೀಚಿನ ಡಕಾಯಿತಿ ಪ್ರಕರಣದಲ್ಲಿ ಬಂಧಿಸಲಾಗಿದ್ದ ಬೆಣಚಿನಮರಡಿ ಖಿಲಾರಿ ಗ್ಯಾಂಗ್ ಮತ್ತು ಗೋಕಾಕ್ ಎಸ್ಪಿ ಸರ್ಕಾರ್ ಎಂಬ ಗ್ಯಾಂಗ್‌ನ ಆರು ಸದಸ್ಯರು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಸೆ. 29ರಂದು ನೊಂದ ಮಹಿಳೆ ಗೋಕಾಕ್ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣದ ಬೆನ್ನತ್ತಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ” ಎಂದರು.

ಪ್ರಕರಣದ ಪ್ರಮುಖ ಆರೋಪಿ ರಮೇಶ ಉದ್ದಪ್ಪ ಖಿಲಾರಿ ಬಂಧನ ವೇಳೆ ತಪ್ಪಿಸಿಕೊಂಡು ಹೋಗುತ್ತಿದ್ದಾಗ ಬೈಕ್‌ನಿಂದ ಬಿದ್ದು ಗಾಯಗೊಂಡಿದ್ದಾನೆ. ಈತನನ್ನು ಗೋಕಾಕ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸ್ ಕಣ್ಗಾವಲಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿಸಿದ್ದಾರೆ.

gang rape belgam

ಪ್ರಕರಣದ ಹಿನ್ನೆಲೆ ಏನು?
ಕಳೆದ ಸೆ. 5ರಂದು ಆರೋಪಿ ಬಸವರಾಜ ಬಿಲಾರಿ, ಸಂತ್ರಸ್ತ ಮಹಿಳೆ ಮತ್ತು ಮತ್ತೋರ್ವ ವ್ಯಕ್ತಿಯ ಮುಖ ಪರಿಚಯವಿದ್ದ ಹಿನ್ನೆಲೆಯಲ್ಲಿ ಪುಸಲಾಯಿಸಿ ಚಹಾ ಕುಡಿಯಲು ತಮ್ಮ ಮನೆಗೆ ಕರೆದುಕೊಂಡು ಹೋಗಿದ್ದಾನೆ. ಆ ಬಳಿಕ ತನ್ನ ಡಕಾಯಿತಿ ಗ್ಯಾಂಗ್ ಸದಸ್ಯರನ್ನೂ ಮನೆಗೆ ಕರೆಸಿಕೊಂಡಿದ್ದಾನೆ. ಆರೋಪಿಗಳು ಒಬ್ಬೊಬ್ಬರಾಗಿ ಮಹಿಳೆ ಮೇಲೆ ನಿರಂತರವಾಗಿ ಅತ್ಯಾಚಾರ ಮಾಡಿದ್ದಾರೆ.

ಅತ್ಯಾಚಾರಕ್ಕೊಳಗಾದ ಮಹಿಳೆ ಮತ್ತು ಜೊತೆಗಿದ್ದ ಪುರುಷನ ಬಳಿಯಿದ್ದ ಹಣ, ಚಿನ್ನಾಭರಣ, ಎಟಿಎಂ ಪಾಸ್‌ವರ್ಡ್ ಪಡೆದು ಹಣವನ್ನೂ ದೋಚಿದ್ದಾರೆ. ಆರೋಪಿಗಳು ಆ ಮಹಿಳೆ ಮತ್ತು ಪುರುಷನ ವಿಡಿಯೋ ಮಾಡಿ ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರೆ ನಿಮ್ಮ ಮಾನ ಹರಾಜು ಹಾಕುವುದಲ್ಲದೆ ಕೊಲ್ಲುವುದಾಗಿಯೂ ಜೀವ ಬೆದರಿಕೆ ಹಾಕಿದ್ದಾರೆ.

ಪ್ರಕರಣದ ಹೆಚ್ಚಿನ ತನಿಖೆ ಮುಂದುವರೆದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ್ ತಿಳಿಸಿದರು.

ಪ್ರಕರಣವನ್ನು ಹೆಚ್ಚುವರಿ ಎಸ್ಪಿ ವೇಣುಗೋಪಾಲ ಹಾಗೂ ಡಿಎಸ್ಪಿ ಡಿ.ಎಸ್.ಮುಲ್ಲಾ ಮಾರ್ಗದರ್ಶನದಲ್ಲಿ ಸಿಪಿಐ ಗೋಪಾಲ ರಾಠೋಡ್ ನೇತೃತ್ವದ ತಂಡ ಭೇದಿಸಿದ್ದು, ಅಭಿನಂದನೆ ಸಲ್ಲಿಸುತ್ತೇವೆ. ಸೂಕ್ತ ಬಹುಮಾನ ಕೂಡ ಘೋಷಿಸುತ್ತೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಮಹಾರಾಷ್ಟ್ರದಲ್ಲಿ ಮಳೆ – ಬೆಳಗಾವಿ ಜಿಲ್ಲೆಯ ನದಿ ತೀರದ ಗ್ರಾಮಗಳಲ್ಲಿ ಪ್ರವಾಹದ ಆತಂಕ

ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿ ಇರುವ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

Download Eedina App Android / iOS

X