ಹಗರಿಬೊಮ್ಮನಹಳ್ಳಿ | ಗಾಂಧಿ ಜಯಂತಿ ಪ್ರಯುಕ್ತ ರಕ್ತದಾನ ಶಿಬಿರ

Date:

Advertisements

ಹಗರಿಬೊಮ್ಮನಹಳ್ಳಿಯಲ್ಲಿ ಪ್ರಗತಿಪರ ಶಿಕ್ಷಕರ ವೇದಿಕೆ ಮತ್ತು ದಲಿತ ವಿದ್ಯಾರ್ಥಿ ಪರಿಷತ್ ಸಂಯುಕ್ತಾಶ್ರಯದಲ್ಲಿ, ಸ್ವಯಂಪ್ರೇರಿತ ರಕ್ತದಾನ ಶಿಬಿರ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಪಟ್ಟಣದ ಗುರುಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಕ್ಷೇತ್ರ ಶಿಕ್ಷಣಾಧಿಕಾರಿ ಮೈಲೇಶ್ ಬೇವೂರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ರಕ್ತದಾನ ಎಂಬುದು ಕೇವಲ ದಾನವಲ್ಲ. ಅದು, ಜೀವದಾನವಿದ್ದಂತೆ. ನಿರಂತರ ರಕ್ತದಾನ ಮಾಡುವುದರಿಂದ ಅನೇಕ ಕಾಯಿಲೆಗಳು ದೂರವಾಗಿ ಆರೋಗ್ಯದಲ್ಲಿ ಚೇತರಿಕೆಯಾಗುತ್ತದೆ. ಈ ಸಂಬಂಧ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿಜಿಯವರ ಕೊಡುಗೆ ಅಪಾರವಾದದ್ದು” ಎಂದು ಸ್ಮರಿಸಿದರು.

Advertisements

ಪ್ರಗತಿಪರ ಶಿಕ್ಷಕರ ವೇದಿಕೆಯ ಮುಖಂಡ ಕೆ.ಹುಸೇನ್ ಸಾಹೇಬ್ ಪ್ರಾಸ್ತಾವಿಕವಾಗಿ ಮಾತನಾಡಿದರು.

“ಪ್ರಗತಿಪರ ಶಿಕ್ಷಕರ ವೇದಿಕೆ, ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಸರ್ಕಾರಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಲೇಖನ ಸಾಮಗ್ರಿ ವಿತರಿಸುವಂತಹ ಕೆಲಸ ಮತ್ತು ಸ್ವಯಂಪ್ರೇರಿತ ರಕ್ತದಾನ ಶಿಬಿರ, ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಂಡಿದೆ. ಮುಂದಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಅನಾಥ ಮಕ್ಕಳಿಗೆ ಲೇಖನ ಸಾಮಗ್ರಿಗಳನ್ನ ವಿತರಿಸುವಂತಹ ಕೆಲಸ ಮಾಡುತ್ತದೆ” ಎಂದು ಅವರು ಹೇಳಿದರು.

ವೈದ್ಯ ಡಾ. ಎಚ್. ಆನಂದ್ ಮತ್ತು  ಶ್ರೀಮತಿ  ಡಾ.ಪಿ. ಅಶ್ವಿನಿಯವರು ಎಲ್ಲರಿಗೂ ಉಚಿತ ಆರೋಗ್ಯ ತಪಾಸಣೆ ಮಾಡಿ. ಉಚಿತವಾಗಿ ಔಷಧಿಗಳನ್ನು ವಿತರಿಸಿದರು. ಈ ಆರೋಗ್ಯ ತಪಾಸಣೆ ಶಿಬಿರದಲ್ಲಿ 150 ಜನ ಭಾಗವಹಿಸಿದ್ದರು. ರಕ್ತದಾನ ಮಾಡಿದ ಎಲ್ಲ ರಕ್ತದಾನಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.

ದೈಹಿಕ ಶಿಕ್ಷಣ ಪರಿವೀಕ್ಷಕ ಕೊಟ್ರೇಶ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಲ್.ಡಿ.ರವಿ ನಾಯ್ಕ, ಶಿಕ್ಷಣ ಸಂಯೋಜಕ ಮುಸ್ತಾಕ್ ಅಹಮದ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಉಮಾಪತಿ ಶೆಟ್ಟರ್, ಜಿಲ್ಲಾ ಉಪಾಧ್ಯಕ್ಷ ಬುಡ್ಡಿ ಬಸವರಾಜ್, ಪ್ರಧಾನ ಕಾರ್ಯದರ್ಶಿ ಡಿ. ಭೀಮರಾಜ ನಾಯಕ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಗೌರವಾಧ್ಯಕ್ಷ ಕೆ. ಮಲ್ಲಿಕಾರ್ಜುನ, ಪ್ರಾಥಮಿಕ ಶಾಲಾ ಬಡ್ತಿ ಮುಖ್ಯ ಗುರುಗಳ ಸಂಘದ ಅಧ್ಯಕ್ಷ ಬಿ. ಚಂದ್ರಪ್ಪ, ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ತಿನ ಅಧ್ಯಕ್ಷರಾದ ಎ. ಸೋಮನಗೌಡ, ದಲಿತ ವಿದ್ಯಾರ್ಥಿ ಪರಿಷತ್ತಿನ ಅಧ್ಯಕ್ಷರಾದ ಬಿಬಿಜಿ ಗೌತಮ್ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.

df00500b086548aea6fcb813041e5bf0?s=150&d=mp&r=g
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | ಸೇವಾ ನಿವೃತ್ತಿ: ಮಾಹಿತಿ ಕೇಂದ್ರದ ಉಪನಿರ್ದೇಶಕಿ ಡಾ. ಡಿ ಮೀನಾಕ್ಷಿಗೆ ಬೀಳ್ಕೊಡುಗೆ

ಮಾಹಿತಿ‌ ಕೇಂದ್ರದ ಉಪನಿರ್ದೇಶಕಿ ಡಾ. ಡಿ ಮೀನಾಕ್ಷಿಯವರು ಸುಮಾರು 30 ವರ್ಷಗಳ...

ಬಳ್ಳಾರಿ | ಹಾಲು ಉತ್ಪಾದಕರ ಸಂಘ ಅಧ್ಯಕ್ಷ ಸ್ಥಾನಕ್ಕೆ ರಾಘವೇಂದ್ರ ಹಿಟ್ನಾಳ ಅವಿರೋಧ ಆಯ್ಕೆ

ಬಳ್ಳಾರಿ, ಕೊಪ್ಪಳ, ವಿಜಯನಗರ ಹಾಗೂ ರಾಯಚೂರು ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ...

ಮೈಸೂರು | ಅಣ್ಣಾವ್ರ ಅಭಿನಯದಲ್ಲಿ ಇತಿಹಾಸ ಪುರುಷರ ಕಾಣುವಂತಾಯಿತು; ನಟ ಮಂಡ್ಯ ರಮೇಶ್

ಮೈಸೂರಿನ, ಹೆಬ್ಬಾಳ ಹೊರ ವರ್ತುಲದಲ್ಲಿರುವ ಶೇಷಾದ್ರಿಪುರಂ ಕಾಲೇಜು ಸಭಾಂಗಣದಲ್ಲಿ ನಾಡೋಜ ಡಾ....

Download Eedina App Android / iOS

X