ರಾಗಿಗುಡ್ಡದಲ್ಲಿ ಎನ್‌ಕೌಂಟರ್ ನಡೆದಿಲ್ಲ, ಸುಳ್ಳು ಸುದ್ದಿ ಹರಡಿದರೆ ಕ್ರಮ: ಶಿವಮೊಗ್ಗ ಎಸ್‌ಪಿ

Date:

Advertisements
  • ‘ಓಮ್ನಿಯಲ್ಲಿ ಬಂದಿದ್ದವರು ದಾವಣಗೆರೆ ನ್ಯಾಮತಿಯ ಹಿಂದೂ-ಮುಸ್ಲಿಂ ಸ್ನೇಹಿತರು’ ಎಂದ ಶಿವಮೊಗ್ಗ ಎಸ್‌ಪಿ
  • ಸಾರ್ವಜನಿಕರು ಯಾವುದೇ ಅಪಪ್ರಚಾರ, ವದಂತಿಗಳಿಗೆ ಕಿವಿಗೊಡಬಾರದು ಎಂದ ಪೊಲೀಸ್ ಇಲಾಖೆ

ಮೀಲಾದುನ್ನಬಿ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ಘಟನೆಯ ಬಳಿಕ ಉಂಟಾದ ಪ್ರಕ್ಷುಬ್ಧ ವಾತಾವರಣದ ಬಳಿಕ, ‘ರಾಗಿಗುಡ್ಡದಲ್ಲಿ ಪೊಲೀಸ್ ಎನ್‌ಕೌಂಟರ್‌ನಿಂದ ಮುಸ್ಲಿಂ ಯುವಕನ ಮೃತ್ಯು ಎಂಬ ಸುಳ್ಳು ಸುದ್ದಿ’ ಹರಡಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಈ ಬಗ್ಗೆ ಸ್ಪಷ್ಟೀಕರಣ ನೀಡಿರುವ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್, “ಸಾಮಾಜಿಕ ಜಾಲತಾಣದಲ್ಲಿ ಶಿವಮೊಗ್ಗದ ರಾಗಿಗುಡ್ಡದಲ್ಲಿ ಪೊಲೀಸ್ ಎನ್‌ಕೌಂಟರ್‌ನಿಂದ ಮುಸ್ಲಿಂ ಯುವಕನ ಮೃತ್ಯು ಎಂಬ ಸುಳ್ಳು ಸುದ್ದಿ ಹರಿದಾಡುತ್ತಿದ್ದು, ಈ ರೀತಿ ಘಟನೆಯು ನಡೆದಿಲ್ಲ. ಸದರಿ ಸುಳ್ಳು ಸುದ್ಧಿಯನ್ನು ಹರಿಬಿಟ್ಟವರ ವಿರುದ್ಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಳ್ಳಲಾಗಿದೆ” ಎಂದು ತಿಳಿಸಿದ್ದಾರೆ.

ಓಮ್ನಿಯಲ್ಲಿ ಬಂದವರು ದಾವಣಗೆರೆ ಜಿಲ್ಲೆಯವರು
ರಾಗಿಗುಡ್ಡದಲ್ಲಿ ಮೀಲಾದ್ ಮೆರವಣಿಗೆ ವೇಳೆ ಓಮ್ನಿ ವಾಹನಗಳಲ್ಲಿ ಬಂದು ಕಲ್ಲು ತೂರಾಟ ನಡೆಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿರುವ ಎಸ್‌ಪಿ ಜಿ.ಕೆ.ಮಿಥುನ್ ಕುಮಾರ್‌, “ಓಮ್ನಿಯಲ್ಲಿ ಬಂದವರು ದಾವಣಗೆರೆ ಜಿಲ್ಲೆ ನ್ಯಾಮತಿಯವರು. ವಾಹನದಲ್ಲಿ ಮುಸ್ಲಿಮರು ಮಾತ್ರವಲ್ಲ ಹಿಂದೂಗಳು ಇದ್ದರು. ಎಲ್ಲರೂ ಸ್ನೇಹಿತರು. ಶಿವಮೊಗ್ಗದಲ್ಲಿ ಮೀಲಾದ್ ಮೆರವಣಿಗೆ ನೋಡಲು ಬಂದವರು ರಾಗಿಗುಡ್ಡಕ್ಕೂ ಬಂದಿದ್ದಾರೆ. ಅಲ್ಲಿ ಗಲಾಟೆ ಆರಂಭವಾಗುತ್ತಿದ್ದಂತೆಯೇ ಅವರೆಲ್ಲರೂ ತಮ್ಮೂರಿಗೆ ಮರಳಿದ್ದಾರೆ” ಎಂದು ತಿಳಿಸುವ ಮೂಲಕ ಕಲ್ಲೆಸೆತ ಘಟನೆಯ ಹಿಂದಿರುವವರು ಅವರಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Advertisements

“ನಾವು ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಆಧರಿಸಿ ವಾಹನವನ್ನು ಪತ್ತೆ ಮಾಡಿದ್ದೇವೆ. ತನಿಖೆಯ ವೇಳೆ ಓಮ್ನಿಯಲ್ಲಿ ಬಂದಿದ್ದವರು ನ್ಯಾಮತಿಯವರು ಎಂದು ತಿಳಿದುಬಂದಿದೆ. ಈ ವಿಚಾರದಲ್ಲಿ ಸಾರ್ವಜನಿಕರು ಯಾವುದೇ ಅಪಪ್ರಚಾರ, ವದಂತಿಗಳಿಗೆ ಕಿವಿಗೊಡಬಾರದು” ಎಂದು ಇದೇ ವೇಳೆ ಮನವಿ ಮಾಡಿದ್ದಾರೆ.

“ರಾಗಿಗುಡ್ಡಕ್ಕೆ ಕಾರಿನಲ್ಲಿ ಹೊರಗಿನವರು ಬಂದು ಗಲಾಟೆ ಮಾಡಿದ್ದಾರೆ” ಎಂದು ಕಲ್ಲು ತೂರಾಟದ ಬೆಳವಣಿಗೆಯ ಬೆನ್ನಲ್ಲೇ ಬಿಜೆಪಿ ಮುಖಂಡರು ಆರೋಪಿಸಿದ್ದರು. ಅಲ್ಲದೇ, ಕೆಲವೊಂದು ಮಾಧ್ಯಮಗಳು ಕೂಡ ಇದನ್ನು ವರದಿ ಮಾಡಿದ್ದವು. ಆದರೆ, ಈ ಆರೋಪವನ್ನು ಸ್ವತಃ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೇ ತಳ್ಳಿ ಹಾಕಿದ್ದಾರೆ.

ರಾಗಿಗುಡ್ಡದಲ್ಲಿ ಕಲ್ಲು ತೂರಾಟ ಪ್ರಕರಣ ಸಂಬಂಧ 60 ಮಂದಿಯನ್ನು ಬಂಧಿಸಲಾಗಿದ್ದು, 24 ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಎಸ್‌ಪಿ ಮಿಥುನ್‌ ಕುಮಾರ್‌ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X