ಶೋಧ ಕಾರ್ಯಾಚರಣೆಯ ಬಳಿಕ ‘ನ್ಯೂಸ್ ಕ್ಲಿಕ್’ ಕಚೇರಿಯನ್ನು ಜಪ್ತಿ ಮಾಡಿದ ದೆಹಲಿ ಪೊಲೀಸರು

Date:

Advertisements
  • ಯುಎಪಿಎ ಪ್ರಕರಣಕ್ಕೆ ಸಂಬಂಧಿಸಿದಂತೆ ಆ. 17ರಂದು ಎಫ್‌ಐಆರ್ ದಾಖಲಿಸಿರುವ ದೆಹಲಿ ಪೊಲೀಸ್
  • ನ್ಯೂಸ್‌ಕ್ಲಿಕ್ ಮತ್ತು ಅದರ ಪತ್ರಕರ್ತರಿಗೆ ಸಂಬಂಧಿಸಿದ 30 ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ; ಖಂಡನೆ

ಯುಎಪಿಎ ಪ್ರಕರಣಕ್ಕೆ ಸಂಬಂಧಿಸಿದಂತೆ ‘ನ್ಯೂಸ್‌ ಕ್ಲಿಕ್’ಸಂಸ್ಥೆಯ ವಿರುದ್ಧ ದಾಖಲಿಸಿಕೊಳ್ಳಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಮಂಗಳವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದ ದೆಹಲಿ ಪೊಲೀಸರ ವಿಶೇಷ ಸೆಲ್‌ನ ಅಧಿಕಾರಿಗಳು, ಶೋಧ ಕಾರ್ಯಾಚರಣೆಯ ಬಳಿಕ ‘ನ್ಯೂಸ್ ಕ್ಲಿಕ್’ ಕಚೇರಿಯನ್ನು ಜಪ್ತಿ ಮಾಡಿದ್ದಾರೆ.

ಚೀನಾ ಪರ ಪ್ರಚಾರಕ್ಕಾಗಿ ಹಣ ಪಡೆದ ಆರೋಪದ ಹಿನ್ನೆಲೆಯಲ್ಲಿ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣವನ್ನು ಆಗಸ್ಟ್ 17ರಂದು ದಿಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಹೀಗಾಗಿ, ಇಂದು ಬೆಳಗ್ಗೆ ನ್ಯೂಸ್‌ಕ್ಲಿಕ್ ಮತ್ತು ಅದರ ಪತ್ರಕರ್ತರಿಗೆ ಸಂಬಂಧಿಸಿದ 30 ಸ್ಥಳಗಳಲ್ಲಿ ಏಕಕಾಲಕಕ್ಕೆ ದಾಳಿ ನಡೆಸಿ, ಶೋಧ ನಡೆಸಿತ್ತು.

ಇದುವರೆಗೆ ಯಾರನ್ನೂ ಬಂಧಿಸಲಾಗಿಲ್ಲ ಎಂದು ತಿಳಿಸಿರುವ ಪೊಲೀಸರು, ನ್ಯೂಸ್‌ಕ್ಲಿಕ್‌ನ ಸ್ಥಾಪಕ ಮತ್ತು ಪ್ರಧಾನ ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಅವರನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ.

Advertisements

ಇವರು ಮಾತ್ರವಲ್ಲದೇ, ಪತ್ರಕರ್ತರಾದ ಊರ್ಮಿಲೇಶ್, ಔನಿಂದ್ಯೋ ಚಕ್ರವರ್ತಿ, ಅಭಿಸಾರ್ ಶರ್ಮಾ, ಪರಂಜಯ್ ಗುಹಾ ಠಾಕುರ್ತಾ ಮತ್ತು ಇತಿಹಾಸಕಾರ ಸೊಹೈಲ್ ಹಶ್ಮಿ ಅವರನ್ನು ಕೂಡ ವಿಚಾರಣೆ ನಡೆಸಿದ್ದು, ಮೊಬೈಲ್ ಹಾಗೂ ಲ್ಯಾಪ್‌ಟಾಪ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ದಾಳಿಗೊಳಗಾಗಿರು ಪತ್ರಕರ್ತರು, ಸಾಮಾಜಿಕ ಕಾರ್ಯಕರ್ತರು ಹಾಗೂ ವಿಡಂಬನಕಾರರ ವಿದೇಶಿ ಪ್ರವಾಸಗಳು, ಶಾಹೀನ್ ಬಾಗ್‌ನಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆ ವಿರುದ್ಧದ ಪ್ರತಿಭಟನೆಗಳು ಮತ್ತು ರೈತರ ಆಂದೋಲನ ಸೇರಿದಂತೆ ವಿವಿಧ ವಿಷಯಗಳಿಗೆ ಸಂಬಂಧಿಸಿದ 25 ಪ್ರಶ್ನೆಗಳ ಪಟ್ಟಿಯನ್ನು ಪೊಲೀಸರು ಮುಂದಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿರುವುದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ನ್ಯೂಸ್‌ಕ್ಲಿಕ್ ಮತ್ತು ಅದರ ಪತ್ರಕರ್ತರ ಮೇಲಿನ ಈ ದಾಳಿಯನ್ನು ಹಲವು ಮಂದಿ ಹಿರಿಯ ಪತ್ರಕರ್ತರ ಸಹಿತ ಪ್ರೆಸ್ ಕ್ಲಬ್ ಆಫ್ ಇಂಡಿಯಾ, ಎಡಿಗರ್ಸ್‌ ಗಿಲ್ಡ್ ಖಂಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X