ಉಜ್ವಲ ಫಲಾನುಭವಿಗಳಿಗೆ ಎಲ್‌ಪಿಜಿ ಸಿಲಿಂಡರ್‌ ಸಬ್ಸಿಡಿ ಮತ್ತೆ 100 ರೂ.ಗೆ ಹೆಚ್ಚಿಸಿದ ಕೇಂದ್ರ

Date:

Advertisements

ಪ್ರಧಾನಮಂತ್ರಿ ಉಜ್ವಲಾ ಯೋಜನೆಯ ಫಲಾನುಭವಿಗಳಿಗೆ ಸರ್ಕಾರವು ಪ್ರತಿ ಎಲ್‌ಪಿಜಿ ಸಿಲಿಂಡರ್‌ಗೆ 200 ರೂ. ಗಳಿಂದ 300 ರೂ.ಗಳಿಗೆ ಸಬ್ಸಿಡಿ ಮೊತ್ತವನ್ನು ಹೆಚ್ಚಿಸಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್‌ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಈ ನಿರ್ಧಾರದಿಂದಾಗಿ ಉಜ್ವಲ ಯೋಜನೆ ಫಲಾನುಭವಿಗಳು ಇದೀಗ ಎಲ್‌ಪಿಜಿ ಸಿಲಿಂಡರ್‌ಗೆ 300 ರೂಪಾಯಿ ಸಬ್ಸಿಡಿ ಪಡೆಯಲಿದ್ದಾರೆ. ಈ ಮೊದಲು 200 ರೂಪಾಯಿ ಸಬ್ಸಿಡಿ ನೀಡಲಾಗಿತ್ತು. ಇದರೊಂದಿಗೆ ಉಜ್ವಲಾ ಫಲಾನುಭವಿಗಳ ಗ್ಯಾಸ್ ಸಿಲಿಂಡರ್‌ಗೆ ಒಟ್ಟು 500 ರೂಪಾಯಿ ಇಳಿಕೆಯಾದಂತಾಗಿದೆ.

ಈ ಸುದ್ದಿ ಓದಿದ್ದೀರಾ? ವಿಶ್ವಕಪ್‌ ಏಕದಿನ ತಂಡಕ್ಕೆ ಸ್ಥಾನ ಪಡೆದ ಸ್ಪಿನ್ನರ್ ಆರ್‌ ಅಶ್ವಿನ್‌: ಬದಲಾವಣೆಯ 15ರ ಬಳಗದಲ್ಲಿ ಆಯ್ಕೆ

Advertisements

ಇನ್ಮುಂದೆ ಉಜ್ವಲಾ ಫಲಾನುಭವಿಗಳು ಎಲ್‌ಪಿಜಿ ಸಿಲಿಂಡರ್‌ಅನ್ನು 603 ರೂಪಾಯಿಗೆ ಖರೀದಿಸಬಹುದಾಗಿದೆ. 2024ರ ಲೋಕಸಭಾ ಚುನಾವಣೆ ಹಾಗೂ ಕೆಲವು ರಾಜ್ಯಗಳ ವಿಧಾನಸಭೆ ಚುನಾವಣೆಗೂ ಮುನ್ನ ಸಬ್ಸಿಡಿ ಏರಿಸಲಾಗಿದೆ.

2023-24ನೇ ಹಣಕಾಸು ವರ್ಷದಿಂದ 2025-26ರವರೆಗೆ ಮೂರು ವರ್ಷಗಳಲ್ಲಿ 75 ಲಕ್ಷ ಉಜ್ವಲಾ ಯೋಜನೆ ಎಲ್‌ಪಿಜಿ ಸಂಪರ್ಕಗಳ ಬಿಡುಗಡೆಗೆ ಕೇಂದ್ರ ಸಚಿವ ಸಂಪುಟ ಕಳೆದ ತಿಂಗಳು ಅನುಮೋದನೆ ನೀಡಿತ್ತು.  ಇದರೊಂದಿಗೆ ಉಜ್ವಲಾ ಸಂಪರ್ಕಗಳು ಒಟ್ಟು ಫಲಾನುಭವಿಗಳ ಸಂಖ್ಯೆಯು 10.35 ಕೋಟಿಯಷ್ಟಾಗಿದೆ.

ಈ ವರ್ಷ ರಾಜಸ್ಥಾನ, ಮಧ್ಯಪ್ರದೇಶ, ಮಿಜೋರಾಂ, ಛತ್ತೀಸ್‌ಗಢ ಮತ್ತು ತೆಲಂಗಾಣ ಚುನಾವಣೆಗಳು ನಡೆಯಲಿವೆ. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಸಬ್ಸಿಡಿ ಯೋಜನೆ ಪ್ರಕಟಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X