ಇತ್ತೀಚೆಗೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಘಟನೆಯನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ತಿಳಿಸಿದ್ದಾರೆ.
ಬೆಂಗಳೂರು ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಅಪರಾಧ ಪ್ರಕರಣಗಳ ವಿಮರ್ಶಾ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
“ರಾಗಿಗುಡ್ಡದಲ್ಲಿ ನಡೆದ ಗಲಭೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ರಾಜ್ಯದಲ್ಲಿ ಇಂತಹ ಘಟನೆಗಳು ಮುಂದೆಂದೂ ಆಗದಂತೆ ಮುನ್ನೆಚ್ಚರಿಕೆ ವಹಿಸಲಾಗುವುದು. ಪ್ರಸ್ತುತ ಪರಿಸ್ಥಿತಿ ಶಾಂತವಾಗಿದೆ” ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ ಗಲಭೆ | ಬಂಧಿತ ಆರೋಪಿಗಳ ಪೈಕಿ ಮೂರು ಸಮುದಾಯದವರೂ ಇದ್ದಾರೆ: ಎಸ್‌ಪಿ
“ಗಲಭೆಗೆ ಸಂಬಧಿಸಿದಂತೆ ಈವರೆಗೆ 27 ಪ್ರಕರಣಗಳು ದಾಖಲಾಗಿದ್ದು, 64 ಮಂದಿಯನ್ನು ಬಂಧಿಸಲಾಗಿದೆ. ಶಿವಮೊಗ್ಗದಲ್ಲಿ ಕೆಎಸ್‍ಆರ್‌ಪಿ ಮತ್ತು ಡಿಎಆರ್ ತುಕಡಿಗಳನ್ನು ನಿಯೋಜಿಸಲಾಗಿದೆ. ಹಿರಿಯ ಅಧಿಕಾರಿಗಳು ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದಾರೆ. ಸದ್ಯ ಪರಿಸ್ಥಿತಿ ಶಾಂತವಾಗಿದೆ” ಎಂದರು.