ಸಾಗುವಳಿ ಭೂ ಪರಿಶೀಲನೆಗೆ ಬಗರ್ ಹುಕುಂ ತಂತ್ರಾಂಶವನ್ನು ಶೀಘ್ರ ಕಾರ್ಯಯೋಜನೆಗೊಳಿಸಿ : ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸೂಚನೆ

Date:

Advertisements

ನಮೂನೆ 50, 53, 57 ಅರ್ಜಿಗಳ ನ್ಯಾಯಯುತ ವಿಲೇವಾರಿ ಹಾಗೂ ಅನಧಿಕೃತ ಸಾಗುವಳಿ ಭೂಮಿಯನ್ನು ಬಗರ್ ಹುಕುಂ ತಂತ್ರಾಶದ ಮೂಲಕ ಸಕ್ರಮಗೊಳಿಸುವ ಪ್ರಕ್ರಿಯೆಯನ್ನು ಶೀಘ್ರ ಮುಗಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಸೂಚಿಸಿದರು.

ಬುಧವಾರ ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಬಗರ್ ಹುಕುಂ ತಂತ್ರಾಶದ ಬಳಕೆಯ ಕುರಿತು ಸಚಿವರಿಗೆ ಪ್ರಾತ್ಯಕ್ಷಿಕೆ ತೋರಿಸಲಾಯಿತು. ಈ ವೇಳೆ ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವರು, “ರಾಜ್ಯಾದ್ಯಂತ ನಮೂನೆ 50, 53, 57 ಅರ್ಜಿಗಳ ಸಂಖ್ಯೆ ಏರಿಕೆಯಾಗುತ್ತಲೇ ಇದೆ.

ಅನಧೀಕೃತವಾಗಿ ಸಾಗುವಳಿದಾರರು ಕೃಷಿಯಲ್ಲಿ ತೊಡಗಿದರೆ, ಅಕ್ರಮ-ಸಕ್ರಮ ಅಡಿಯಲ್ಲಿ ಸಾಗುವಳಿ ಚೀಟಿ ನೀಡಲು ಇಲಾಖೆ ಬದ್ದವಾಗಿದೆ. ಆದರೆ, ಸಾವಿರಾರು ಎಕರೆ ಭೂಮಿ ಅಕ್ರಮ ಸಾಗುವಳಿದಾರರ ಪಾಲಾಗಿದೆ. ಪ್ರತಿಯೊಂದು ಭಾಗಕ್ಕೂ ಅಧಿಕಾರಿಗಳೇ ನೇರ ಹೋಗಿ ಕೃಷಿ ನಡೆಯುತ್ತಿದೆಯೇ? ಎಂದು ಪರಿಶೀಲಿಸುವುದು ಸಾಧ್ಯವಿಲ್ಲ.

Advertisements

ಈ ಸುದ್ದಿ ಓದಿದ್ದೀರಾ? ‘Scanning is the new Spinning’ ಎನ್ನುವ ಅಮೆರಿಕೆಯ ಕಾರ್ಲ್ ಬೆಂಗಳೂರಲ್ಲಿ ಮಾಡುತ್ತಿರುವುದೇನು?

ಹೀಗಾಗಿ ಬಗರ್ ಹುಕುಂ ತಂತ್ರಾಶದ ಮೂಲಕ ಅಕ್ರಮ ಸಾಗುವಳಿ ಭೂಮಿಯಲ್ಲಿ ಕೃಷಿ ಅಥವಾ ಇನ್ಯಾವುದೇ ಚಟುವಟಿಕೆ ಬಗ್ಗೆ ಸ್ಯಾಟಲೈಟ್ ಇಮೇಜ್ ಮೂಲಕ ಮಾಹಿತಿ ಪಡೆದು ಅರ್ಜಿ ವಿಲೇವಾರಿ ಮಾಡುವುದು ನ್ಯಾಯಸಮ್ಮತವಾಗಲಿದೆ. ಅಲ್ಲದೆ, ಶೀಘ್ರ ಪ್ರಕ್ರಿಯೆಗೂ ಈ ಆ್ಯಪ್ ಸಹಕಾರಿಯಾಗಲಿದೆ, ಜನರಿಗೂ ಈ ಮೂಲಕ ಸುಲಭ ಆಡಳಿತ ಸಿಗಲಿದೆ” ಎಂದರು.

ಮುಂದುವರೆದು, ಈ ಆ್ಯಪ್ ನಲ್ಲಿ ಯಾವುದೇ ಲೋಪದೋಷಗಳು ಇಲ್ಲದಂತೆ ಶೀಘ್ರದಲ್ಲೇ ಅಭಿವೃದ್ಧಿಪಡಿಸಿ ಕಾರ್ಯಯೋಜನೆಗೆ ತರುವಂತೆಯೂ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.

ಸಭೆಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟಾರಿಯಾ, ಕಂದಾಯ ಇಲಾಖೆ ಆಯುಕ್ತರಾದ ಸುನೀಲ್ ಕುಮಾರ್ ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X