ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ ಮಂಜುನಾಥಗೌಡ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಶಿವಮೊಗ್ಗ ಮತ್ತು ತೀರ್ಥಹಳ್ಳಿಯಲ್ಲಿರುವ ಮಂಜುನಾಥಗೌಡ ಅವರ ಮನೆಗಳ ಮೇಲೆ ಗುರುವಾರ ಬೆಳ್ಳಂಬೆಳಗ್ಗೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ತೀರ್ಥಹಳ್ಳಿಯ ಕರಕುಚ್ಚಿ ಮತ್ತು ಬೆಟ್ಟಮಕ್ಕಿಯಲ್ಲಿರುವ ಮನೆಗಳು, ಶಿವಮೊಗ್ಗದ ಶರಾವತಿ ನಗರದಲ್ಲಿರುವ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮನೆ ಸುತ್ತಲು ಶಸ್ತ್ರಾಸ್ತ್ರ ಸಜ್ಜಿತವಾಗಿ ಪೊಲೀಸರನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.