ಕಾವೇರಿ ವಿವಾದ | ಮಂಡ್ಯ: ಸಮಾಧಿ ಮಾಡಿಕೊಂಡು ರೈತ ಪ್ರತಿಭಟನೆ

Date:

Advertisements

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ರೈತರೊಬ್ಬರು ಗುಂಡಿಯಲ್ಲಿ ಕೂತು ತಲೆಯವರೆಗೆ ಮಣ್ಣು ಮುಚ್ಚಿಕೊಂಡು ಸಮಾಧಿ ಮಾಡಿಕೊಂಡು ಪ್ರತಿಭಟಸಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.

ರಾಜ್ಯದ ರೈತರಿಗೆ ಬೆಳೆ ಬೆಳೆಯಲು ನೀರಿಲ್ಲದ ಸಂದರ್ಭದಲ್ಲಿಯೂ ಕೆಆರ್‌ಎಸ್‌ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ. ಇದರಿಂದ ರಾಜ್ಯದ ರೈತರಿಗೆ ಅನ್ಯಾಯವಾಗಿದೆ ಎಂದು ರೈತ ಸಂಘಟನೆಗಳು ಆರೋಪಿಸುತ್ತಿವೆ. ಪ್ರತಿಭಟನೆಗಳನ್ನು ನಡೆಸುತ್ತಿವೆ. ಇದೇ ಹೊತ್ತಿನಲ್ಲಿ, ಮಂಡ್ಯದ ಉಪ್ಪಾರಕನಹಳ್ಳಿ ಗ್ರಾಮದ ರೈತ ಶಿವಕುಮಾರ್ ಆರಾಧ್ಯ ಅವರು ತಲೆವರೆಗೆ ಮಣ್ಣಿನಲ್ಲಿ ಹೂತುಕೊಂಡು ಪ್ರತಿಭಟನೆ ನಡೆಸಿದ್ದಾರೆ.

“ರಾಜ್ಯದ ರೈತರಿಗೆ ನೀರು ಕೊಡದೆ ತಮಿಳುನಾಡಿಗೆ ನೀರು ಹಿರಿಸುವ ಮೂಲಕ ರೈತರನ್ನು ಜೀವಂತ ಸಮಾಧಿ ಮಾಡಲಾಗುತ್ತಿದೆ. ಎಷ್ಟೇ ಪ್ರತಿಭಟನೆ ನಡೆಸಿದರೂ ಪ್ರಯೋಜನವಾಗಿಲ್ಲ. ತಮಿಳುನಾಡಿಗೆ ನೀರು ಹರಿಸುವುದನ್ನು ಸರ್ಕಾರ ನಿಲ್ಲಿಸುತ್ತಿಲ್ಲ. ರೈತರನ್ನು ಸಮಾಧಿ ಮಾಡುವುದನ್ನು ಬಿಟ್ಟು, ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

Advertisements

ಇತ್ತೀಚೆಗೆ, ಮಂಡ್ಯ ಬಂದ್‌ಗೆ ಕರೆಕೊಡಲಾಗಿತ್ತು. ಅಂದು ಬಿಜೆಪಿ ಕಾರ್ಯಕರ್ತರು ಚಡ್ಡಿ ಪ್ರತಿಭಟನೆ ನಡೆಸಿದ್ದರು. ರೈತಸಂಘದ ಕಾರ್ಯಕರ್ತರು ಕಾವೇರಿ ನದಿಯಲ್ಲಿ ನಿಂತು ಪ್ರತಿಭಟನೆ ನಡೆಸಿದ್ದರು. ಕಲವರು ಮದ್ಯದ ಬಾಟಲಿಗಳನ್ನು ಹಿಡಿದು, ಹಲವರು ಖಾಲಿ ಕೊಡ ಹಿಡಿದು ಪ್ರತಿಭಟನಡೆ ನಡೆಸಿದ್ದರು. ಇದೀಗ, ಈ ರೈತ ಸಮಾಧಿ ಮಾಡಿಕೊಂಡು ಪ್ರತಿಭಟನೆ ನಡೆಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

Download Eedina App Android / iOS

X