ಫ್ಯಾಕ್ಟ್ ಚೆಕ್‌ನ ಮೊಹಮ್ಮದ್ ಜುಬೇರ್‌ 2023ರ ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರಶಸ್ತಿಗೆ ನಾಮನಿರ್ದೇಶನ

Date:

Advertisements

ಫ್ಯಾಕ್ಟ್ ಚೆಕ್ ಮಾಡುವ ವೆಬ್ಸೈಟ್ ಆಲ್ಟ್ ನ್ಯೂಸ್‌ನ ಸಹ-ಸಂಸ್ಥಾಪಕ ಮತ್ತು ಪತ್ರಕರ್ತ ಮುಹಮ್ಮದ್ ಝುಬೈರ್ ಅವರು ಲಂಡನ್ ಮೂಲದ ʼಇಂಡೆಕ್ಸ್ ಆಫ್ ಸೆನ್ಸಾರ್ಶಿಪ್ʼ ನ ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ.

ʼಇಂಡೆಕ್ಸ್ ಆಫ್ ಸೆನ್ಸಾರ್ಶಿಪ್ʼ ನ ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರಶಸ್ತಿಯು ವಿಶ್ವದ ಯಾವುದೇ ಭಾಗದಲ್ಲಿ ಸೆನ್ಸಾರ್ಶಿಪ್ ವಿರುದ್ಧದ ಹೋರಾಟದಲ್ಲಿ ಗಮನಾರ್ಹ ಪರಿಣಾಮ ಬೀರಿದವರನ್ನು ಗುರುತಿಸಿ ನೀಡಲಾಗುತ್ತದೆ.

“ಸತ್ಯ-ಪರಿಶೀಲನಾ ವೇದಿಕೆ ಆಲ್ಟ್ ನ್ಯೂಸ್ ಅನ್ನು ಸ್ಥಾಪಿಸಿ ಮುಹಮ್ಮದ್ ಝುಬೈರ್ ಅವರು ಆಡಳಿತ ಪಕ್ಷದ ಪ್ರಭಾವಿ ಸದಸ್ಯರು ಪ್ರಚಾರ ಮಾಡಿದ ಸುಳ್ಳು/ತಿರುಚಿದ ಮಾಹಿತಿಯನ್ನು ಬಯಲಿಗೆಳೆದ ಬಳಿಕ ಬೆದರಿಕೆಗಳನ್ನು ಎದುರಿಸಿದ್ದಾರೆ” ಎಂದು ʼಇಂಡೆಕ್ಸ್ ಆಫ್ ಸೆನ್ಸಾರ್ಶಿಪ್ʼ ಪ್ರಕಟಣೆ ತಿಳಿಸಿದೆ.

Advertisements

ಝುಬೈರ್ ಜೊತೆಗೆ ಸೊಮಾಲಿಯಾದ ಮೊದಲ ಮಹಿಳಾ ಮಾಧ್ಯಮ ಸಂಸ್ಥೆ ಹೊಂದಿರುವ ಬಿಲಾನ್ ಮೀಡಿಯಾ ಹಾಗೂ ಈ ವರ್ಷದ ಜನವರಿಯಲ್ಲಿ ತಾಲಿಬಾನ್‌ನಿಂದ ಬಂಧನಕ್ಕೊಳಗಾದ ಅಫ್ಘಾನ್ ಪತ್ರಕರ್ತ ಮೊರ್ತಜಾ ಬೆಹಬೌಡಿ ಅವರನ್ನು ನಾಮನಿರ್ದೇಶನಗೊಳಿಸಲಾಗಿದೆ.

ಕಲೆ, ಪ್ರಚಾರ, ಪತ್ರಿಕೋದ್ಯಮ ಮತ್ತು ಟ್ರಸ್ಟಿ ಎಂಬ ನಾಲ್ಕು ವಿಭಾಗಗಳಲ್ಲಿ ಪ್ರಶಸ್ತಿ ವಿಜೇತರನ್ನು ಆಯ್ಕೆ ಮಾಡಲಾಗುತ್ತದೆ. ವಿಜೇತರನ್ನು ಲಂಡನ್‌ನಲ್ಲಿ ಗಾಲಾ ಸಮಾರಂಭದಲ್ಲಿ ಗೌರವಿಸಲಾಗುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X