ಯಲಹಂಕ | 10 ಕೋಟಿ ರೂ. ಮೌಲ್ಯದ ಒತ್ತುವರಿ ಜಮೀನು ಸರ್ಕಾರದ ವಶಕ್ಕೆ

Date:

Advertisements
  • ಕಂದಾಯ ಇಲಾಖೆಯಿಂದ ಮುಂದುವರೆದ ಸರ್ಕಾರಿ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ
  • 10 ಕೋಟಿ ರೂ. ಮೌಲ್ಯದ 6.05 ಎಕರೆ ಸರ್ಕಾರಿ ಜಮೀನು ಸರ್ಕಾರದ ವಶಕ್ಕೆ

ಬೆಂಗಳೂರಿನಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿಸಿರುವ ಕಂದಾಯ ಇಲಾಖೆ ಅಧಿಕಾರಿಗಳು, ಯಲಹಂಕ ತಾಲೂಕು, ಜಾಲ ಹೋಬಳಿ, ಕಟ್ಟಿಗೇನಹಳ್ಳಿ ಗ್ರಾಮದ ಸರ್ವೆ ನಂ.28 ರಲ್ಲಿ ಒತ್ತುವರಿಯಾಗಿದ್ದ ಸುಮಾರು 10 ಕೋಟಿ ರೂ. ಮೌಲ್ಯದ 6.05 ಎಕರೆ ಸರ್ಕಾರಿ ಜಮೀನನ್ನು ವಶಕ್ಕೆ ಪಡೆದಿದ್ದಾರೆ.

ಈ ಮೂಲಕ ಭೂ ಒತ್ತುವರಿದಾರರು ಹಾಗೂ ಭೂ ಮಾಫಿಯಾಗೆ ಸರ್ಕಾರ ಬಿಸಿ ಮುಟ್ಟಿಸಿದೆ. ಬೆಂಗಳೂರಿನಾದ್ಯಂತ ಭೂ ಒತ್ತುವರಿ ತೆರವು ಮಾಡುವಂತೆ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಅದರಂತೆ ಕಳೆದ ವಾರ ಯಲಹಂಕದ ಬಾಗಲೂರಿನ ಬಳಿ 25 ಕೋಟಿ ರೂ. ಮೌಲ್ಯದ 6.07 ಎಕರೆ ಸರ್ಕಾರಿ ಭೂ ಒತ್ತುವರಿ ತೆರವುಗೊಳಿಸಲಾಗಿತ್ತು. ಈಗ ಕಾರ್ಯಾಚರಣೆ ಮುಂದುವರಿಸಿ ಇನ್ನಷ್ಟು ಒತ್ತುವರಿ ತೆರವು ಮಾಡಲಾಗಿದೆ.

ಯಲಹಂಕ ತಾಲ್ಲೂಕು ಜಾಲ ಹೋಬಳಿ, ಕಟ್ಟಿಗೇನಹಳ್ಳಿ ಗ್ರಾಮದ ಸರ್ವೆ ನಂ.28 ರ ಜಮೀನಿಗೆ ಸಂಬಂಧಿಸಿದಂತೆ, ಗೋಮಾಳದ ಜಮೀನಿಗೆ ವಿವರವಾದ ವರದಿಯನ್ನು ದಾಖಲೆಗಳೊಂದಿಗೆ ಸಲ್ಲಿಸಲು ಮತ್ತು ಜಮೀನಿನಲ್ಲಿ ಯಾವುದೇ ಖಾತೆ ಅನುಭವವಿಲ್ಲದೇ ಇರುವ ಒತ್ತುವರಿದಾರರನ್ನು ಖುಲ್ಲಾಪಡಿಸಿ ಕ್ರಮವಹಿಸುವಂತೆ ನಿರ್ದೇಶಿಸಲಾಗಿತ್ತು.

Advertisements

ಕರ್ನಾಟಕ ಭೂ ಕಂದಾಯ ಕಾಯ್ದೆ 1964 ಕಲಂ 104 ರ ಅಡಿ ವಿಚಾರಣೆ ನಡೆಸಲು ನಿರ್ಧರಿಸಿ ಪ್ರತಿವಾದಿಗಳಿಗೆ ನೋಟೀಸ್ ಕೂಡ ನೀಡಲಾಗಿತ್ತು. ಅದರಂತೆ ಕಟ್ಟಿಗೇನಹಳ್ಳಿಯ ಸರ್ವೆ ನಂ.28 ರ ಜಮೀನಿನಲ್ಲಿ ತಾಲೂಕು ಮೋಜಿಣಿದಾರರು ಒತ್ತುವರಿ ಎಂದು ಗುರುತಿಸಿದ 6.05 ಎಕರೆ ಜಮೀನನಲ್ಲಿ ಒತ್ತುವರಿ ತೆರವುಗೊಳಿಸಲಾಗಿದೆ.

ಒತ್ತುವರಿದಾರರ ವಿವರ

  • ಕೋಗಿಲು ಗ್ರಾಮದ ಸರ್ವೆ ನಂ. 100 ರ ಹಿಡುವಳಿದಾರರಾದ ಉಡುಪ ಅವರಿಂದ ಕಟ್ಟಿಗೇನಹಳ್ಳಿಯ ಸರ್ವೆ ನಂ.28 ರಲ್ಲಿ 0-10 ಗುಂಟೆ ಜಮೀನನ್ನು ಒತ್ತುವರಿ ಮಾಡಿದ್ದು, ಇದನ್ನು ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ.
  • ಎಸ್.ಜಯರಾಮ್ ಬಿನ್ ಸುಬ್ರಮಣ್ಯ ಮೊದಲಿಯಾರ್ ಅವರು ಹೆಚ್ಚುವರಿಯಾಗಿ ಸ್ವಾಧೀನ ಹೊಂದಿರುವ 0-20 ಗುಂಟೆ ಜಮೀನನ್ನು ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ.
  • ಸುಬ್ಬಣ್ಣ ಬಿನ್ ಚಿಕ್ಕಮುನಿಯಪ್ಪ ಅವರು ಹೆಚ್ಚುವರಿಯಾಗಿ ಸ್ವಾಧೀನ ಹೊಂದಿರುವ 2-29 ಎಕರೆ ಜಮೀನನ್ನು ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ.
  • ದೊಡ್ಡಕ್ಕಮ್ಮ ಕೋಂ ಲೇಟ್ ಕೆ.ಮುನಿಯಪ್ಪ, ಮುನಿರಾಜು ಮತ್ತು ಎಂ. ಮಂಜುನಾಥ ಅವರು ಹೆಚ್ಚುವರಿಯಾಗಿ ಸ್ವಾಧೀನ ಹೊಂದಿರುವ 0-12 ಗುಂಟೆ ಜಮೀನನ್ನು ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ.
  • ವೈ.ಜಿ.ಕೇಶವ ಬಿನ್ ಗೋವಿಂದಪ್ಪ ಅವರಿಗೆ ಸಂಬಂಧಿಸಿದಂತೆ, ನಂ.ಎಲ್ಎನ್ ಡಿ/ಎಸ್ ಆರ್/1/104/78-79 ರಂತೆ ಅಬ್ದುಲ್ ಸತ್ತಾರ್ ರವರಿಗೆ 2-00 ಎಕರೆ ಮಂಜೂರಾಗಿತ್ತು. ನಂತರ ಕ್ರಯವಿಕ್ರಯ ನಡೆದು, ವೈ.ಜಿ ಕೇಶವ ಬಿನ್ ಗೋವಿಂದಪ್ಪರವರಿಗೆ ಖಾತೆ ದಾಖಲಾಗಿತ್ತು. ವಿಶೇಷ ಜಿಲ್ಲಾಧಿಕಾರಿಗಳ ಆದೇಶದಂತೆ ಸರ್ಕಾರದ ಹೆಸರಿಗೆ ಖಾತೆ ದಾಖಲಾಗಿ, ಗೋಮಾಳ ಶೀರ್ಷಿಕೆಯಲ್ಲಿ ಖಾತೆ ಮುಂದುವರೆಯುತ್ತಿದೆ. 2.00 ಎಕರೆ ಜಮೀನಿನ ಪ್ರಕರಣ ವಿಶೇಷ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದೆ. ಆದರೆ, ಇವರು ಹೆಚ್ಚುವರಿಯಾಗಿ ಸ್ವಾಧೀನ ಹೊಂದಿರುವ 0.05 ಗುಂಟೆ ಜಮೀನನ್ನು ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ.
  • ರಮೇಶ್ ಬಿನ್ ಚಿಕ್ಕಪಾಪಮ್ಮ ಅವರು ಹೆಚ್ಚುವರಿಯಾಗಿ ಸ್ವಾಧೀನ ಹೊಂದಿರುವ 0.12 ಎಕರೆ ಜಮೀನು ಒತ್ತುವರಿ ತೆರವುಗೊಳಿಸಲಾಗಿದೆ. ಇದೇ ಗ್ರಾಮದಲ್ಲಿ ಬ್ಲಾಕ್ ನಂ.12ರಲ್ಲಿ 0.15 ಗುಂಟೆ ವಿಸ್ತೀರ್ಣದಲ್ಲಿ 4 ಮನೆಗಳು ನಿರ್ಮಾಣವಾಗಿದ್ದು, ತೆರವುಗೊಳಿಸಲು ಮೌಖಿಕವಾಗಿ 2 ದಿನಗಳ ಕಾಲಾವಕಾಶ ಕೋರಿದ್ದರು. ಅದರಂತೆ ಕಾಲಾವಕಾಶ ನೀಡಿ, ಸೂಕ್ತ ಪೊಲೀಸ್ ಬಂದೋಬಸ್ತ್‌ನೊಂದಿಗೆ ತೆರವುಗೊಳಿಸಲಾಗಿದೆ.
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X