ಸರ್ಕಾರ ನನ್ನ ಮನವಿಯನ್ನು ಸ್ವೀಕರಿಸದೇ ಇದ್ದರೆ ಬಸ್ಸಿಗೆ ಬೆಂಕಿ ಹಾಕುತ್ತೇನೆ ಎಂದು ಮಂಡ್ಯದ ಇದ್ರೀಸ್ ಪಾಷಾ ಕೊಲೆ ಪ್ರಕರಣದ ಎ1 ಆರೋಪಿ, ಸಂಘಪರಿವಾರದ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಗಲಭೆ ಉಂಟು ಮಾಡುವ ಹೇಳಿಕೆ ನೀಡಿದ್ದು, ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ.
ಕಳೆದ ನಾಲ್ಕು ದಿನಗಳಿಂದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಂಗಳೂರಿನಲ್ಲಿ ಸತ್ಯಾಗ್ರಹ ಮಾಡುತ್ತಿದ್ದ ಪುನೀತ್ ಕೆರೆಹಳ್ಳಿ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಸೇರಿದಂತೆ ಸಂಘಪರಿವಾದ ಮುಖಂಡರು ಕೆರೆಹಳ್ಳಿಯನ್ನು ಭೇಟಿಯಾಗಿ ಆತನ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.
ಸಮಾಜಘಾತುಕ ಜಿಹಾದಿಗಳನ್ನು ಅಮಾಯಕರೆಂದು ಬಿಡುಗಡೆ ಮಾಡುವ @INCKarnataka ಸರ್ಕಾರ ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಿ, ನಕಲಿ ಪ್ರಕರಣಗಳನ್ನು ದಾಖಲಿಸಿ ಮಾನಸಿಕವಾಗಿ ಹಿಂಸೆ ನೀಡುತ್ತಿದೆ.
ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಮೇಲಿನ ಆರೋಪಗಳು ಸಾಬೀತಾಗದಿದ್ದರೂ ಆತನ ವಿರುದ್ಧ ಬೇರೆ ಪ್ರಕರಣಗಳಲ್ಲಿ ಸಿಲುಕಿಸಿ ಸರ್ಕಾರ ಹತ್ತಿಕ್ಕುವ… pic.twitter.com/21QXEBNJUK
— BJP Karnataka (@BJP4Karnataka) October 5, 2023
ಕಳೆದ ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡದ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ವಿರುದ್ಧವೇ ಬಂಡಾಯವೆದ್ದು ಸ್ಪರ್ಧಿಸಿದ್ದ ಪುತ್ತೂರು ಪುತ್ತಿಲ ಪರಿವಾರದ ಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಕೂಡ ಅ.5ರಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದರು.
ಕಾಂಗ್ರೆಸ್ ನವರು ನೋಡಲಿಕ್ಕೆ ಬರದೆ ಇದ್ರೆ ಬಸ್ ಗೆ ಬೆಂಕಿ ಹಾಕುತ್ತೇನೆ ಎಂದು ಹುಚ್ಚಾಟ ಮೆರೆಯುತ್ತಿರುವ ಕೊಲೆ ಆರೋಪಿ, ವೇಶ್ಯಾವಾಟಿಕೆ ಆರೋಪಿ ಪುನೀತ್ ಕೆರೆಹಳ್ಳಿ.
ಪೊಲೀಸರು ಬೇಗ ಇವನನ್ನು ಮತ್ತೆ ಜೈಲಿಗೆ ಹಾಕದೆ ಹೋದರೆ ಯಾವುದಾದ್ರೂ ಬಸ್ ಗೆ ಬೆಂಕಿ ಇಟ್ಟು ಅಮಾಯಕರ ಜೀವ ತಗೆಯುತ್ತನೆpic.twitter.com/1zTxYMORsy
— 👑Che_ಕೃಷ್ಣ🇮🇳💛❤️ (@ChekrishnaCk) October 5, 2023
ಪುತ್ತಿಲ ಅವರ ನಿಯೋಗದೊಂದಿಗೆ ಮಾತನಾಡುತ್ತಿದ್ದ ಪುನೀತ್, “ನಾನು ನಿಮಗೆ ನಿಮ್ಮ ತಮ್ಮನಾಗಿ ಬೇಕು ಅಂದ್ರೆ, ಕಾಂಗ್ರೆಸ್ ಸರಕಾರದ ಯಾವುದಾದರೂ ಪ್ರತಿನಿಧಿ ನನ್ನನ್ನು ಭೇಟಿಯಾಗಿ, ನನ್ನ ಮನವಿಯನ್ನು ಸ್ವೀಕರಿಸಬೇಕು. ಅವರು ಬರದೇ ಇದ್ದರೆ ಬಸ್ಸಿಗೆ ಬೆಂಕಿ ಹಾಕುವ. ಪೊಲೀಸರನ್ನು ಜಾಗ ಬಿಡಲಿಕ್ಕೆ ಹೇಳಿ, ನಾನು ಹೋಗ್ತೇನೆ. ವಿಧಾನಸೌಧಕ್ಕೇ ಕಲ್ಲು ಹೊಡೆಯುತ್ತಾನೆ ಎಂದು ಹೇಳಿಕೆ ನೀಡಿದ್ದಾನೆ.
ಈ ಹೇಳಿಕೆಯು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಹಿನ್ನೆಲೆಯಲ್ಲಿ ಗಲಭೆ ಸೃಷ್ಟಿಸುವ ಬಗ್ಗೆ ಬಹಿರಂಗ ಹೇಳಿಕೆ ನೀಡುತ್ತಿರುವ ಕೊಲೆ, ಸುಲಿಗೆ, ಮಹಿಳೆಯರ ದುರ್ಬಳಕೆ ಸೇರಿದಂತೆ ಹಲವು ಪ್ರಕರಣಗಳ ಆರೋಪಿ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಬೇಕು. ಇಲ್ಲವಾದಲ್ಲಿ ಯಾವುದಾದರೂ ಬಸ್‌ಗೆ ಬೆಂಕಿ ಇಟ್ಟು ಅಮಾಯಕರ ಜೀವ ತೆಗೆಯುತ್ತಾನೆ ಎಂದು ನೆಟ್ಟಿಗರು ವಿಡಿಯೋ ಹಂಚಿಕೊಂಡು ಪೊಲೀಸ್ ಇಲಾಖೆಯನ್ನು ಆಗ್ರಹಿಸಿದ್ದಾರೆ.
ತನ್ನನ್ನು ಭೇಟಿಯಾಗಲು ಕಾಂಗ್ರೆಸ್ ನವರು ಬರದೇ ಇದ್ದಲ್ಲಿ ಬಸ್ಸಿಗೆ ಬೆಂಕಿ ಹಾಕುತ್ತೇನೆ ಎನ್ನುವ ಪುಡಾರಿ ಪುನೀತ್ ಕೆರೆಹಳ್ಳಿ ತಾನು ದೊಡ್ಡ ಸಮಾಜ ಸುಧಾರಕ ಎಂದುಕೊಂಡಿದ್ದಾನಾ ಹೇಗೆ?
ಸರಕಾರ ಇವನಿಗೆ ಸಲುಗೆ ಕೊಟ್ಟಿದ್ದು ಅತಿಯಾಯ್ತು,
ಇವನ ಹೇಳಿಕೆ ಮೇಲೆ ಕ್ರಮ ಕೈಗೊಳ್ಳಿ @DrGParameshwara @siddaramaiah pic.twitter.com/hjbusGLngV— Goudrusarkar – ಗೌಡ್ರುಸರ್ಕಾರ್ (@Gs_0107) October 6, 2023
ಇನ್ನು ಇದೇ ವಿಚಾರವಾಗಿ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಸಾಮಾಜಿಕ ಕಾರ್ಯಕರ್ತ ಮುನೀರ್ ಕಾಟಿಪಳ್ಳ, ಕರಾವಳಿಯ ಸಜ್ಜನ ಬಿರುದಾಂಕಿತ ಕೋಟಾ ಶ್ರೀನಿವಾಸ ಪೂಜಾರಿ ಕೊಲೆ, ಸುಲಿಗೆ, ಮಹಿಳೆಯರ ದುರ್ಬಳಕೆ ಸೇರಿದಂತೆ ಹೀನ ಪ್ರಕರಣಗಳ ಆರೋಪಿ ಪುನೀತ್ ಕೆರೆಹಳ್ಳಿಯನ್ನು ಭೇಟಿಯಾಗಿ ಆತನ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ಪುನೀತ್ ಕೆರೆಹಳ್ಳಿಯ ಮೇಲೆ ಕ್ರಿಮಿನಲ್ ಪ್ರಕರಣಗಳು ದಾಖಲಾಗುವಾಗ ಬೆಂಗಳೂರು ಪೊಲೀಸ್ ಕಮೀಷನರ್ ಆಗಿದ್ದ ಭಾಸ್ಕರ ರಾವ್ (ಈಗ ಬಿಜೆಪಿ ಮುಖಂಡ) ಸಹ ಜೊತೆಯಲ್ಲಿದ್ದು ಪುನೀತ್ ಕೆರೆಹಳ್ಳಿಗೆ ನೈತಿಕ ಬೆಂಬಲ ಕೊಟ್ಟಿದ್ದಾರೆ. ಸಿಟಿ ರವಿ, ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಸಹಿತ ಹಲವು ಬಿಜೆಪಿ ನಾಯಕರು ಕೆರೆಹಳ್ಳಿಯನ್ನು ಭೇಟಿಯಾಗಿ ಆತನ “ಸತ್ಯಾಗ್ರಹ”ದ ಜೊತೆ ನಿಂತಿದ್ದಾರೆ. ಇದಕ್ಕೆಲ್ಲಾ ನಾಗರಿಕ ಸಮಾಜದ ಪ್ರತಿಕ್ರಿಯೆ ಏನು? ಎಂದು ಪ್ರಶ್ನಿಸಿದ್ದಾರೆ.
ಪುನೀತ್ ಕೆರೆಹಳ್ಳಿ ತನ್ನನ್ನು ಬೆಂಬಲಿಸಲು ಬಂದ ವೇಳೆ ಬಸ್ಸುಗಳಿಗೆ ಬೆಂಕಿ ಹಾಕುವ ಹೇಳಿಕೆ ನೀಡಿದ್ದಾನೆ. ಬಸ್ಸುಗಳಿಗೆ ಬೆಂಕಿ ಹಚ್ಚುವಾಗ ಬಿಜೆಪಿಯವರು ಕೆರೆಹಳ್ಳಿಯ ಜೊತೆಗೆ ತಂಡವಾಗಿ ಇರುತ್ತಾರ? ಎಂದು ಕೂಡ ಕೊಲೆ ಆರೋಪಿಗೆ ಬೆಂಬಲ ನೀಡುತ್ತಿರುವ ಬಿಜೆಪಿ ನಾಯಕರನ್ನು ಮುನೀರ್ ಕಾಟಿಪಳ್ಳ ತರಾಟೆಗೆ ತೆಗೆದುಕೊಂಡಿದ್ದಾರೆ.
“ವಿಧಾನಸೌಧಕ್ಕೇ ಕಲ್ಲು ಹೊಡೆಯುತ್ತಾನೆ ಬಿಡಿ ನನ್ನ” ಎಂದು ಹುಚ್ಚಾಟ ಮುಂದುವರೆಸಿದ ಪುನೀತ್ ಕೆರೆಹಳ್ಳಿ https://t.co/Z5ujApj0R7 pic.twitter.com/iEX2s1F0dT
— 👑Che_ಕೃಷ್ಣ🇮🇳💛❤️ (@ChekrishnaCk) October 5, 2023